Karnataka SSLC 2023 Topper: ಉಡುಪಿ ಮೂಲದ ಭೂಮಿಕ ಪೈ ರಾಜ್ಯಕ್ಕೆ ಟಾಪರ್

ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಉಡುಪಿ ಮೂಲದ ಭೂಮಿಕ ಪೈ ಟಿವಿ9 ಜೊತೆ ಮಾತನಾಡಿದ್ದಾರೆ.

Follow us
ನಯನಾ ಎಸ್​ಪಿ
|

Updated on:May 08, 2023 | 1:36 PM

ಎಸ್​ಎಸ್​ಎಲ್​ಸಿ (2022-23ನೇ ಸಾಲಿನ) ವಾರ್ಷಿಕ ಪರೀಕ್ಷೆಯ ಫಲಿತಾಂಶ (SSLC Exam Result 2023) ಪ್ರಕಟವಾಗಿದೆ. ಎಂಟು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಎಸ್‌ಎಸ್‌ಎಲ್‌ಸಿ ಫಲಿತಾಂಶ (KSEAB SSLC results 2023) ಹೊರಬಿದ್ದಿದ್ದು, ಈ ಬಾರಿ ಶೇಕಡ 83.89 ಫಲಿತಾಂಶ ದಾಖಲಾಗಿದೆ. ಒಟ್ಟು 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪೈಕಿ 3,41,108 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 3,59,511 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.  ಇದರೊಂದಿಗೆ ಈ ಬಾರಿಯೂ ಸಹ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದಾರೆ. ಉಡುಪಿ ಮೂಲದ ಭೂಮಿಕ ಪೈ ಟಿವಿ9 ಜೊತೆ ಮಾತನಾಡಿದ್ದಾರೆ.

ಉಡುಪಿ ಮೂಲದ ಭೂಮಿಕ ಪೈ ಬೆಂಗಳೂರಿನ ನ್ಯೂ ಮೆಕಾಲೆ ಇಂಗ್ಲಿಷ್ ಹೈ ಸ್ಕೂಲ್ ವಿದ್ಯಾರ್ಥಿನಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದರೆ. ಭೂಮಿಕಾ ತಂದೆ ತಾಯಿ ಮೂಲತಃ ಉಡುಪಿಯವರು. ಭೂಮಿಕ ಅಜ್ಜಿ ಮನೆಯಲ್ಲಿ ಸಂಭ್ರಮ, ಸಿಹಿ ಹಂಚಿ ಸಡಗರ ಮನೆ ಮಾಡಿದೆ. “625 ಅಂಕ ನಾನು ನಿರೀಕ್ಷಿಸಿರಲಿಲ್ಲ. 95% ಗಿಂತ ಹೆಚ್ಚು ಬರುತ್ತೆ ಎಂದು ಖಾತ್ರಿ ಇತ್ತು. ಔಟ್ ಆಫ್ ಔಟ್ ಅಂಕ ಬಂದಿರೋದು ಬಹಳ ಖುಷಿಯಾಗಿದೆ. ಮನೆಯವರ ಬೆಂಬಲ ಹಾಗೂ ಶಾಲೆಯ ಸಹಕಾರದಿಂದ ಇದು ಸಾಧ್ಯವಾಗಿದೆ. ಕರೋನ ಕಾಲಘಟ್ಟದಲ್ಲಿ ಆನ್ಲೈನ್ ತರಗತಿ ಮಾಡಿ ಸಹಕರಿಸಿದ್ದರು.” ಎಂದು ಭೂಮಿಕಾ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಪರೀಕ್ಷಾ ತಯಾರಿ ಬಗ್ಗೆ ಮಾತನಾಡಿದ ಭೂಮಿಕಾ, “ಆಯಾ ದಿನದ ಪಾಠವನ್ನು ಆಯಾ ದಿನವೇ ಓದಿದ್ದೇನೆ. ಯಾವುದೇ ಒತ್ತಡವಿರದೆ ಓದಿದ ಕಾರಣ ಪೂರ್ಣ ಅಂಕಗಳಿದ್ದೇನೆ. ಮೊಬೈಲ್ ಮತ್ತು ಟಿವಿ ಬಳಸಿದ್ದೇನೆ ಆದರೆ ಅದು ನನ್ನ ಓದಿಗೆ ಅಡ್ಡಿ ಬಂದಿಲ್ಲ. ಕಷ್ಟಪಟ್ಟು ಅಲ್ಲ ಇಷ್ಟಪಟ್ಟು ಓದಿದ್ದೇನೆ” ಎಂದು ಅಜ್ಜಿಮನೆಯಲ್ಲಿ ಸಂಭ್ರಮಿಸುತ್ತಿರುವುದಕ್ಕೆ ಟಾಪರ್ ಭೂಮಿಕ ಪೈ ಹೇಳಿದರು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿಯಲ್ಲಿ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳ ವಿವರ ಇಲ್ಲಿದೆ

SSCL ಪರೀಕ್ಷೆಯಲ್ಲಿ 3,59,511 ಬಾಲಕೀಯರು ಉತ್ತೀರ್ಣರಾಗಿದ್ದಾರೆ. SSLC ಫಲಿತಾಂಶದಲ್ಲಿ A ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ-23, SSLC ಫಲಿತಾಂಶದಲ್ಲಿ ಬಿ ಗ್ರೇಡ್ ಪಡೆದ ಜಿಲ್ಲೆಗಳು ಸಂಖ್ಯೆ 12. ನಾಲ್ವರು ವಿದ್ಯಾರ್ಥಿಗಳು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ, ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು, ಯಶಸ್​​ಗೌಡ- ಬಿಜಿಎಸ್​ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ, ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ, ಬೀಮನಗೌಡ ಪಾಟೀಲ್ವಿ-ಜಯಪುರ. ಮೇ 15ರಿಂದ ಮೇ 21ರವರೆಗೆ ಮರುಮೌಲ್ಯಮಾಪನಕ್ಕೆ ಅವಕಾಶ ಇಂದಿನಿಂದ ಮೇ 15ರವರೆಗೆ ಪೂರಕ ಪರೀಕ್ಷೆ ನೋಂದಣಿಗೆ ಅವಕಾಶ ನೀಡಲಾಗುತ್ತಿದೆ.

Published On - 1:27 pm, Mon, 8 May 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ