AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Education Expo 2025: ವಿದ್ಯಾರ್ಥಿಗಳ ಭವಿಷ್ಯಕ್ಕೆ ಈ ಬಾರಿ ಎಜುಕೇಶನ್ ಎಕ್ಸ್‌ಪೋ ಹೇಗೆ ಸಹಕಾರಿಯಾಗಿದೆ? ಧನಾತ್ಮಕ ಅಂಶಗಳೇನು? ಇಲ್ಲಿದೆ ಮಾಹಿತಿ

ವಿದ್ಯಾರ್ಥಿಗಳು ತಮ್ಮ ಅಪೇಕ್ಷಿತ ಕಾಲೇಜುಗಳು ಮತ್ತು ಕೋರ್ಸ್‌ಗಳ ಬಗ್ಗೆ ತಿಳಿದುಕೊಳ್ಳಲು ಟಿವಿ9 ಎಜುಕೇಶನ್ ಎಕ್ಸ್‌ಪೋ ಸಮಗ್ರ ವೇದಿಕೆಯಾಗಿದೆ. ಹೌದು, ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ನಿನ್ನೆಯಿಂದ ಟಿವಿ9 ಎಜುಕೇಶನ್ ಎಕ್ಸ್‌ಪೋ (TV9 Education Expo) ಆರಂಭವಾಗಿದೆ. ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಈ ಎಕ್ಸ್‌ಪೋ ದಲ್ಲಿ ಭಾಗವಹಿಸಿದ್ದು ಇಂದು ಎರಡನೇ ದಿನ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯುತ್ತಿದ್ದು, ಈ ಬಾರಿ ಎಜುಕೇಶನ್ ಎಕ್ಸ್‌ಪೋ ವಿದ್ಯಾರ್ಥಿಗಳಿಗೆ ಹೇಗೆಲ್ಲಾ ಸಹಕಾರಿಯಾಗಿದೆ? ಎನ್ನುವ ಕುರಿತಾದ ಮಾಹಿತಿ ಇಲ್ಲಿದೆ.

TV9 Education Expo 2025: ವಿದ್ಯಾರ್ಥಿಗಳ ಭವಿಷ್ಯಕ್ಕೆ ಈ ಬಾರಿ ಎಜುಕೇಶನ್ ಎಕ್ಸ್‌ಪೋ ಹೇಗೆ ಸಹಕಾರಿಯಾಗಿದೆ? ಧನಾತ್ಮಕ ಅಂಶಗಳೇನು? ಇಲ್ಲಿದೆ ಮಾಹಿತಿ
ಟಿವಿ9 ಎಜುಕೇಶನ್ ಎಕ್ಸ್‌ಪೋ
ಸಾಯಿನಂದಾ
| Edited By: |

Updated on: Apr 05, 2025 | 5:11 PM

Share

ಬೆಂಗಳೂರು, ಏಪ್ರಿಲ್ 5, ಭಾರತ (India) ಸೇರಿದಂತೆ ವಿದೇಶದಲ್ಲಿ ಉನ್ನತ ಶಿಕ್ಷಣದ ಅವಕಾಶಗಳನ್ನು ಹುಡುಕಾಟ ನಡೆಸುವವರಿಗೆ ವಿದ್ಯಾರ್ಥಿಗಳಿಗೆ ಟಿವಿ9 ಎಜುಕೇಶನ್ ಎಕ್ಸ್‌ಪೋ (TV9 Education Expo ) ಅತ್ಯುತ್ತಮ ವೇದಿಕೆಯಾಗಿದೆ. ಹೌದು, ಏಪ್ರಿಲ್ 4 ರಿಂದ 6 ರವರೆಗೆ ಬೆಂಗಳೂರಿ (Banglore)ನ ತ್ರಿಪುರವಾಸಿನಿ ಅರಮನೆ ಮೈದಾನ (Tripuravasini at palace grounds) ದಲ್ಲಿ ಶಿಕ್ಷಣ ಶೃಂಗಸಭೆಯೂ ನಡೆಯುತ್ತಿದೆ. ಮೂರು ದಿನಗಳ ಕಾಲ ನಡೆಯುತ್ತಿರುವ ಈ ಕಾರ್ಯಕ್ರಮವು ವಿವಿಧ ಉನ್ನತ ಶಿಕ್ಷಣ ಆಯ್ಕೆಗಳು, ಕೋರ್ಸ್‌ಗಳು ಹಾಗೂ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಒದಗಿಸುವಲ್ಲಿ ಯಶಸ್ವಿಯಾಗಿದೆ.

  • ಟಿವಿ9 ಕನ್ನಡ ವಾಹಿನಿ ವತಿಯಿಂದ ನಡೆಯುತ್ತಿರುವ ಶಿಕ್ಷಣ ಶಂಗಸಭೆಯಲ್ಲಿ ಒಟ್ಟು 82 ಕಾಲೇಜುಗಳು ಮತ್ತು ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಭಾಗಿಯಾಗಿವೆ.
  • ಉನ್ನತ ಶಿಕ್ಷಣ ಹಾಗೂ ಕೋರ್ಸ್ ಗಳ ಆಯ್ಕೆಗಳ ಬಗ್ಗೆ ವಿವಿಧ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಆಯಾಯ ಸ್ಟಾಲ್‌ಗಳಲ್ಲಿ ಕೌನ್ಸೆಲಿಂಗ್ ನೀಡುವಲ್ಲಿ ಯಶಸ್ವಿಯಾಗಿವೆ.
  • ಎಜುಕೇಶನ್ ಎಕ್ಸ್‌ಪೋದಲ್ಲಿ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯಗಳು ಅಥವಾ ವಿದೇಶಿ ಶಿಕ್ಷಣ ಸಲಹೆಗಾರರಾದ ಡಾ. ಅಬ್ರೋಡ್, ಆಲ್ಫಾ ಅಬ್ರೋಡ್, ಎಲೈಟ್ ಓವರ್ಸೆಸ್, ಲರ್ನ್‌ಟೆಕ್ ಮುಂತಾದವರು ಭಾಗವಹಿಸುತ್ತಿದ್ದಾರೆ.
  • ವಿದ್ಯಾರ್ಥಿಗಳಿಗೆ ಅನುಕೂಲವಾಗಳೆಂದು ಈ ಬಾರಿಯ ಶಿಕ್ಷಣ ಶೃಂಗಸಭೆಯಲ್ಲಿ ಎಲ್ಲಾ ಕಾಲೇಜುಗಳಲ್ಲಿ ಸ್ಪಾಟ್ ಅಡ್ಮಿಷನ್ ಲಭ್ಯವಿದೆ ಆದರೆ ಶುಲ್ಕ ವಿನಾಯಿತಿಗಳಿಲ್ಲ.
  • ಶಿಕ್ಷಣ ತಜ್ಞರು CET, NEET, JEE, KEA ಸೇರಿದಂತೆ ಇನ್ನಿತ್ತರ ವಿಷಯಗಳ ಬಗ್ಗೆ ಇರುವ ಗೊಂದಲಗಳನ್ನು ಪರಿಹರಿಸುತ್ತಿದ್ದಾರೆ.
  • ಈ ಬಾರಿಯ ಟಿವಿ9 ಎಜುಕೇಶನ್ ಎಕ್ಸ್‌ಪೋದಲ್ಲಿ ವಿದ್ಯಾರ್ಥಿಗಳು ಎಂಜಿನಿಯರಿಂಗ್, ವೈದ್ಯಕೀಯ, ಮ್ಯಾನೇಜ್ ಮೆಂಟ್, ಅನಿಮೇಷನ್, ಓವರ್ ಸೀಸ್ ಎಜುಕೇಶನ್ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ.
  • ಟಿವಿ9 ಎಜುಕೇಶನ್ ಎಕ್ಸ್‌ಪೋದಲ್ಲಿ ಲರ್ನ್ ಟೆಕ್ ಕಂಪೆನಿ ಭಾಗವಹಿಸಿವೆ.
  • ಪೋಷಕರು ವಿದ್ಯಾರ್ಥಿಗಳ ಜೊತೆಗೆ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪ್ರವೇಶ ಪ್ರಕ್ರಿಯೆ, ಕಟ್ಆಫ್ ಶೇಕಡಾವಾರು ಪ್ರಮಾಣ ಹಾಗೂ ಯಾವೆಲ್ಲಾ ಕೋರ್ಸ್‌ಗಳು ತಮ್ಮ ವಿದ್ಯಾರ್ಥಿಗಳು ಭವಿಷ್ಯಕ್ಕೆ ಉತ್ತಮ ಆಯ್ಕೆ ಎನ್ನುವ ಬಗ್ಗೆ ಹೆಚ್ಚು ಗಮನಹರಿಸಿದ್ದಾರೆ.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ