AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

College Admission: 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ

ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

College Admission: 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ ಪ್ರಕ್ರಿಯೆಗೆ ತಾತ್ಕಾಲಿಕ ತಡೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 03, 2021 | 5:06 PM

Share

ಬೆಂಗಳೂರು: ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ. 2021-22ನೇ ಸಾಲಿನ ಪದವಿ ಕೋರ್ಸ್​ಗಳ ಪ್ರವೇಶ (UG College Admission) ಪ್ರಕ್ರಿಯೆಯನ್ನು ಮುಂದೂಡಿಕೆ ಮಾಡಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ. ಈ ಮುನ್ನ ಆಗಸ್ಟ್ 4 ರಿಂದ ಪ್ರವೇಶ ಪ್ರಾರಂಭಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಪದವಿ ಕಾಲೇಜುಗಳಿಗೆ ನಿರ್ದೇಶನ ನೀಡಿತ್ತು. ಆದರೆ ಮುಂದಿನ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ಸದ್ಯದಲ್ಲೇ ಪ್ರಕಟ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ತಿಳಿಸಿದೆ.

ಮೈಸೂರು: ಇತ್ತೀಚಿಗೆ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮೈಸೂರಿನ 11 ವಿದ್ಯಾರ್ಥಿಗಳು ತಿರಸ್ಕರಿಸಿದ್ದು, ಪೂರಕ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಕುರಿತು ಅಧಿಕೃತ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಮಾಹಿತಿ ನೀಡಿದ್ದಾರೆ. ನಿರೀಕ್ಷೆಯಷ್ಟು ಅಂಕ ಬಂದಿಲ್ಲ, ಫಲಿತಾಂಶ ತೃಪ್ತಿದಾಯಕವಲ್ಲ ಎಂದು ಈ ಹಿಂದೆ ನೀಡಲಾಗಿದ್ದ ಫಲಿತಾಂಶವನ್ನು ತಿರಸ್ಕರಿಸಿರುವ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹಾಜರಾಗಲು ಅನುವು ಮಾಡಿಕೊಡುವಂತೆ ಮನವಿ ಮಾಡಿದ್ದಾರೆ. ಆಗಸ್ಟ್ ಕೊನೆಯ ವಾರದಲ್ಲಿ ಪಿಯು‌ ಪೂರಕ ಪರೀಕ್ಷೆ ನಡೆಯಲಿದೆ.

ಎಸ್ಎಸ್ಎಲ್​ಸಿ ಮತ್ತು ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸಿತ್ತು. ಈ 11 ವಿದ್ಯಾರ್ಥಿಗಳ ಜತೆ ಕಳೆದ ವರ್ಷದ 6 ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲು ಮೈಸೂರು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: 

77 ಸಾವಿರ ವಿದ್ಯಾರ್ಥಿಗಳಿಗೆ ಪದವಿ ಪತ್ರ: ಕರ್ನಾಟಕ ಮುಕ್ತ ವಿವಿ ವಿರುದ್ಧ ರಾಜ್ಯಪಾಲರಿಗೆ ಅಂಚೆ ಪತ್ರ ರವಾನೆ ಚಳುವಳಿ

ಕಾಲ್ಬೆರಳುಗಳಲ್ಲಿಯೇ ಪೆನ್ನು ಹಿಡಿದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿ; ಸ್ಪೂರ್ತಿ ತುಂಬುವ ಸುದ್ದಿ ಓದಲೇಬೇಕು

(UG Colleges admission 2021-2021 process are Temporarily stopped)

Published On - 4:47 pm, Tue, 3 August 21

Follow Us
TV9 Web
TV9 Web

TV9 Kannada

Read More
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಕೆವಿಎನ್ ಹಾಗೂ ಸುಪ್ರೀತ್ ಬಗ್ಗೆ ನಿರ್ಮಾಪಕ ಉದಯ್ ಮೆಹ್ತಾ ಮಾತು
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ