NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಜನವರಿ 15ಕ್ಕೆ ನಿಗದಿಯಾಗಿದ್ದ ಯುಜಿಸಿ-ಎನ್ಇಟಿ ಪರೀಕ್ಷೆಯನ್ನು ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿಗಳ ಅವರ ವಿನಂತಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ನವ ದೆಹಲಿ, ಜನವರಿ 13: ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಪೊಂಗಲ್, ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಘೋಷಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆಯನ್ನು ಮುಂದೂವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಸ್ಪಂದಿಸಿರುವ ಅವರು ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್ಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 16 ರಂದು ನಿಗದಿಪಡಿಸಲಾದ ಪರೀಕ್ಷೆಯನ್ನು ಹಿಂದಿನ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
NTA decides to postpone the UGC NET December 2024 exam scheduled on 15th January 2025.#UGC | #UGCNET pic.twitter.com/Bg27GN4Rkf
— All India Radio News (@airnewsalerts) January 13, 2025
ಪಿಎಚ್‌ಡಿ ಪ್ರವೇಶಾತಿ, ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಪರೀಕ್ಷೆಯನ್ನು ಜನವರಿ 3 ರಿಂದ ಜನವರಿ 16 ರವರೆಗೆ 85 ವಿಷಯಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲಾಗುತ್ತಿದೆ.
ಇದನ್ನೂ ಓದಿ: SSLC And PUC Exam Time Table: ಎಸ್ಎಸ್ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಜನವರಿ 15 ರಂದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಸಂಸ್ಕೃತ, ನೇಪಾಳಿ, ಕಾನೂನು, ಜಪಾನೀಸ್, ಮಹಿಳಾ ಅಧ್ಯಯನ, ಮಲಯಾಳಂ, ಉರ್ದು, ಕೊಂಕಣಿ, ಅಪರಾಧ ಶಾಸ್ತ್ರ, ಜಾನಪದ ಸಾಹಿತ್ಯ, ಎಲೆಕ್ಟ್ರಾನಿಕ್ ವಿಜ್ಞಾನ, ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳಿಗೆ ಪರೀಕ್ಷೆ ನಿಗದಿಯಾಗಿತ್ತು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:42 pm, Mon, 13 January 25