NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?

ಜನವರಿ 15ಕ್ಕೆ ನಿಗದಿಯಾಗಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ. ತಮಿಳುನಾಡು ಮುಖ್ಯಮಂತ್ರಿಗಳ ಅವರ ವಿನಂತಿಯನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.

NET exam postponed: ಜ 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
ಜ. 15ರಂದು ನಡೆಯಬೇಕಿದ್ದ UGC-NET ಪರೀಕ್ಷೆ ಮುಂದೂಡಿಕೆ: ಏಕೆ ಗೊತ್ತಾ?
Edited By:

Updated on: Jan 13, 2025 | 9:56 PM

ನವ ದೆಹಲಿ, ಜನವರಿ 13: ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ (UGC-NET) ಪರೀಕ್ಷೆಯನ್ನು ಮುಂದೂಡಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಪೊಂಗಲ್, ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮುಂದಿನ ಪರೀಕ್ಷೆ ದಿನಾಂಕ ಶೀಘ್ರದಲ್ಲೇ ಘೋಷಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ವಿವಿಧ ರಾಜ್ಯಗಳಲ್ಲಿ ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬ ಹಿನ್ನೆಲೆ ಪರೀಕ್ಷೆಯನ್ನು ಮುಂದೂವಂತೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರು. ಅವರ ಪತ್ರಕ್ಕೆ ಸ್ಪಂದಿಸಿರುವ ಅವರು ಜನವರಿ 15ರಂದು ನಡೆಯಬೇಕಿದ್ದ ಯುಜಿಸಿ-ಎನ್​​ಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಜನವರಿ 16 ರಂದು ನಿಗದಿಪಡಿಸಲಾದ ಪರೀಕ್ಷೆಯನ್ನು ಹಿಂದಿನ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪಿಎಚ್‌ಡಿ ಪ್ರವೇಶಾತಿ, ಜೂನಿಯರ್ ರಿಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಪರೀಕ್ಷೆಯನ್ನು ಜನವರಿ 3 ರಿಂದ ಜನವರಿ 16 ರವರೆಗೆ 85 ವಿಷಯಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಲಾಗುತ್ತಿದೆ.

ಇದನ್ನೂ ಓದಿ: SSLC And PUC Exam Time Table: ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಜನವರಿ 15 ರಂದು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, ಸಂಸ್ಕೃತ, ನೇಪಾಳಿ, ಕಾನೂನು, ಜಪಾನೀಸ್, ಮಹಿಳಾ ಅಧ್ಯಯನ, ಮಲಯಾಳಂ, ಉರ್ದು, ಕೊಂಕಣಿ, ಅಪರಾಧ ಶಾಸ್ತ್ರ, ಜಾನಪದ ಸಾಹಿತ್ಯ, ಎಲೆಕ್ಟ್ರಾನಿಕ್ ವಿಜ್ಞಾನ, ಪರಿಸರ ವಿಜ್ಞಾನ ಸೇರಿದಂತೆ 17 ವಿಷಯಗಳಿಗೆ ಪರೀಕ್ಷೆ ನಿಗದಿಯಾಗಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:42 pm, Mon, 13 January 25

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us