AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UGC-NET 2026: ಯುಜಿಸಿ ನೆಟ್ ಫಲಿತಾಂಶ ಪ್ರಕಟ; ಮೂರು ವಿಷಯಗಳಿಗೆ ಸೆಪ್ಟೆಂಬರ್​ನಲ್ಲಿ ಮರು ಪರೀಕ್ಷೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜೂನ್ 2026ರ ಯುಜಿಸಿ ನೆಟ್ ಪರೀಕ್ಷೆಯ 84 ವಿಷಯಗಳ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಶ್ನೆಪತ್ರಿಕೆಯಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂಗ್ಲಿಷ್, ವಾಣಿಜ್ಯ ಹಾಗೂ ಸಮಾಜಶಾಸ್ತ್ರ ವಿಷಯಗಳಿಗೆ ಸೆಪ್ಟೆಂಬರ್ 9 ಮತ್ತು 10 ರಂದು ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪರೀಕ್ಷಾ ಫಲಿತಾಂಶ ಮತ್ತು ಮರು ಪರೀಕ್ಷೆಯ ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿ.

UGC-NET 2026: ಯುಜಿಸಿ ನೆಟ್ ಫಲಿತಾಂಶ ಪ್ರಕಟ; ಮೂರು ವಿಷಯಗಳಿಗೆ ಸೆಪ್ಟೆಂಬರ್​ನಲ್ಲಿ ಮರು ಪರೀಕ್ಷೆ
ಸಾಂದರ್ಭಿಕ ಚಿತ್ರImage Credit source: India Today
ಭಾವನಾ ಹೆಗಡೆ
|

Updated on: Aug 29, 2026 | 8:19 AM

Share

ಮುಖ್ಯಾಂಶಗಳು

  • ಯುಜಿಸಿ ನೆಟ್ ಪರೀಕ್ಷೆಯ 84 ವಿಷಯಗಳ ಫಲಿತಾಂಶ ಅಧಿಕೃತವಾಗಿ ಪ್ರಕಟವಾಗಿದೆ.
  • ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ವಿಷಯಗಳಿಗೆ ಸೆಪ್ಟೆಂಬರ್‌ನಲ್ಲಿ ಮರು ಪರೀಕ್ಷೆ ನಡೆಯಲಿದೆ.
  • ಮರು ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ಇರುವುದಿಲ್ಲ.

ಬೆಂಗಳೂರು, ಆಗಸ್ಟ್ 29: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 2026ರ ಯುಜಿಸಿ ನೆಟ್ (UGC NET) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟು 84 ವಿಷಯಗಳ ಸ್ಕೋರ್‌ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗಿದ್ದ 6 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳಲ್ಲಿ 97,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪಿಎಚ್‌ಡಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದರೆ, 4,000ಕ್ಕೂ ಹೆಚ್ಚು ಅಭ್ಯರ್ಥಿಗಳು ಜೂನಿಯರ್ ರಿಸರ್ಚ್ ಫೆಲೋಶಿಪ್ (JRF) ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಎನ್‌ಟಿಎ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಅಂಕಗಳನ್ನು ಪರಿಶೀಲಿಸಬಹುದು.

ಮೂರು ಪ್ರಮುಖ ವಿಷಯಗಳಿಗೆ ಮರು ಪರೀಕ್ಷೆ ನಿರ್ಧಾರ

ಉಳಿದಂತೆ ಇಂಗ್ಲಿಷ್, ವಾಣಿಜ್ಯ ಮತ್ತು ಸಮಾಜಶಾಸ್ತ್ರ ವಿಷಯಗಳ ಫಲಿತಾಂಶವನ್ನು ಸದ್ಯ ತಡೆಹಿಡಿಯಲಾಗಿದೆ. ಈ ವಿಷಯಗಳ ಪ್ರಶ್ನೆಪತ್ರಿಕೆಗಳಲ್ಲಿ ವ್ಯಾಕರಣ ದೋಷಗಳು, ತಪ್ಪು ಅನುವಾದ ಮತ್ತು ತಾಂತ್ರಿಕ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ಶಿಫಾರಸಿನಂತೆ ಮರು ಪರೀಕ್ಷೆ ನಡೆಸಲು ಎನ್‌ಟಿಎ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9 ರಂದು ಇಂಗ್ಲಿಷ್ ಮತ್ತು ವಾಣಿಜ್ಯ ವಿಷಯಗಳ ಪರೀಕ್ಷೆ ಹಾಗೂ ಸೆಪ್ಟೆಂಬರ್ 10 ರಂದು ಸಮಾಜಶಾಸ್ತ್ರ ವಿಷಯದ ಪರೀಕ್ಷೆಯನ್ನು ಮರು ಆಯೋಜಿಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಹೆಚ್ಚುವರಿ ಶುಲ್ಕವಿಲ್ಲ

ಈ ಮೂರು ವಿಷಯಗಳ ಮರು ಪರೀಕ್ಷೆಗೆ ಅಭ್ಯರ್ಥಿಗಳಿಂದ ಯಾವುದೇ ಹೆಚ್ಚುವರಿ ಪರೀಕ್ಷಾ ಶುಲ್ಕವನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ. ಹೊಸ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಶೀಘ್ರದಲ್ಲೇ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಪ್ರಸ್ತುತ ಬಿಡುಗಡೆಯಾಗಿರುವ 84 ವಿಷಯಗಳ ಫಲಿತಾಂಶಕ್ಕೆ ಹಾಗೂ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಕ್ರಿಯೆಗೆ ಈ ಮರು ಪರೀಕ್ಷೆಯಿಂದ ಯಾವುದೇ ತೊಡಕಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ