Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) 2026ರ UGCET ಫಲಿತಾಂಶಗಳನ್ನು ಘೋಷಿಸಿದೆ. ಇಂಜಿನಿಯರಿಂಗ್ ಮತ್ತು ವೆಟರ್ನರಿ ವಿಭಾಗ ಎರಡರಲ್ಲೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದು, ಬೆಂಗಳೂರಿನ ತನಿಷಾ ಕಾರ್ತಿಕ್ ಇಂಜಿನಿಯರಿಂಗ್‌ನಲ್ಲಿ ಹಾಗೂ ನಯನ ಗೋಪಿ ವೆಟರ್ನರಿಯಲ್ಲಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಆರ್.ವಿ. ಪಿಯು ಕಾಲೇಜು ಟಾಪರ್ಸ್ ಪಟ್ಟಿಯಲ್ಲಿ ಉತ್ತಮ ಪ್ರದರ್ಶನ ನೀಡಿದೆ. ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು KEA ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು.

Karnataka CET 2026 Toppers: ಕೆಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಹೆಣ್ಣು ಮಕ್ಕಳದ್ದೇ ಮೇಲುಗೈ!
ಕೆಸಿಇಟಿ ಫಲಿತಾಂಶ ಟಾಪರ್‌ಗಳ ಪಟ್ಟಿ

Updated on: Jun 06, 2026 | 12:45 PM

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಇಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಫಲಿತಾಂಶದ ಜೊತೆಯಲ್ಲೇ ರಾಜ್ಯದ ಅತ್ಯಂತ ಪೈಪೋಟಿಯುಕ್ತ ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರಿಂಗ್ ಹಾಗೂ ವೆಟರ್ನರಿ (ಪಶುಸಂಗೋಪನೆ) ವಿಭಾಗದ ಟಾಪರ್‌ಗಳ ಪಟ್ಟಿಯನ್ನು ಸಹ ಪ್ರಕಟಿಸಲಾಗಿದ್ದು, ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಇಂಜಿನಿಯರಿಂಗ್ ವಿಭಾಗದಲ್ಲಿ ತನಿಷಾ ಕಾರ್ತಿಕ್ ಸಾಧನೆ:

ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಇಂಜಿನಿಯರಿಂಗ್ ವಿಭಾಗದ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಬೀಗಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಪ್ರತಿಷ್ಠಿತ ಆರ್​.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್ ಅವರು ಇಂಜಿನಿಯರಿಂಗ್ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿದ್ದಾರೆ. ಇನ್ನುಳಿದಂತೆ ಇದೇ ವಿಭಾಗದಲ್ಲಿ ಸೃಜನ್​ ದ್ವಿತೀಯ ಸ್ಥಾನ ಪಡೆದರೆ, ನಿನಾದ್ ವಿಶಿಷ್ಟ ಅವರು ತೃತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ವೆಟರ್ನರಿ ವಿಭಾಗದಲ್ಲಿ ನಯನ ಗೋಪಿಗೆ ಮೊದಲ ರ‍್ಯಾಂಕ್:

ಪಶುಸಂಗೋಪನೆ ಅಂದರೆ ವೆಟರ್ನರಿ ವಿಭಾಗದಲ್ಲೂ ಬೆಂಗಳೂರಿನ ವಿದ್ಯಾರ್ಥಿನಿಯೇ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ. ಬೆಂಗಳೂರಿನ ಶಿವನಗರದ ಪಿಯು ಕಾಲೇಜಿನ ವಿದ್ಯಾರ್ಥಿನಿಯಾದ ನಯನ ಗೋಪಿ ಅವರು ವೆಟರ್ನರಿ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಅನ್ನು ದಾವಣಗೆರೆಯ ಸರ್​​ ಎಂ.ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಪಡೆದುಕೊಂಡರೆ, ಆರ್​.ವಿ ಪಿಯು ಕಾಲೇಜಿನ ರಿತಿಕ್ ಕುಮಾರ್ ಅವರು ತೃತೀಯ ರ‍್ಯಾಂಕ್ ಪಡೆದಿದ್ದಾರೆ.

ಇದನ್ನೂ ಓದಿ: ಕೆಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ..

ರ‍್ಯಾಂಕ್ ಪಟ್ಟಿಯಲ್ಲಿ ಆರ್.ವಿ. ಪಿಯು ಕಾಲೇಜಿನ ದರ್ಬಾರ್:

ಈ ಬಾರಿಯ ಕೆಸಿಇಟಿ ಟಾಪರ್ಸ್ ಲಿಸ್ಟ್‌ನಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಆರ್.ವಿ. ಪಿಯು ಕಾಲೇಜು (RV PU College) ಸಿಂಹಪಾಲು ರ‍್ಯಾಂಕ್‌ಗಳನ್ನು ಬಾಚಿಕೊಳ್ಳುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಇಂಜಿನಿಯರಿಂಗ್ ವಿಭಾಗದ ರಾಜ್ಯದ ಟಾಪರ್ ತನಿಷಾ ಕಾರ್ತಿಕ್ ಹಾಗೂ ವೆಟರ್ನರಿ ವಿಭಾಗದಲ್ಲಿ ಮೂರನೇ ರ‍್ಯಾಂಕ್ ಪಡೆದಿರುವ ರಿತಿಕ್ ಕುಮಾರ್ ಇಬ್ಬರೂ ಒಂದೇ ಕಾಲೇಜಿನವರಾಗಿದ್ದಾರೆ. ಇದರೊಂದಿಗೆ ದಾವಣಗೆರೆಯ ಸರ್ ಎಂ.ವಿ. ಪಿಯು ಕಾಲೇಜು ಕೂಡ ವೆಟರ್ನರಿ ವಿಭಾಗದಲ್ಲಿ ದ್ವಿತೀಯ ರ‍್ಯಾಂಕ್ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದೆ.

ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯ:

ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗಳಾದ cetonline.karnataka.gov.in/kea/ ಅಥವಾ karresults.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ವೆಬ್‌ಸೈಟ್‌ನಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಸ್ಕೋರ್‌ಕಾರ್ಡ್ ಅನ್ನು ಆನ್‌ಲೈನ್ ಮೂಲಕ ಸುಲಭವಾಗಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us