ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2022-23ನೇ ಸಾಲಿನ ಪ್ರವೇಶ ಅವಧಿ ವಿಸ್ತರಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 20, 2022 | 8:14 PM

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು 2022-23ನೇ ಸಾಲಿನ ಪ್ರವೇಶಾತಿಗಾಗಿ ಅವಧಿಯನ್ನು ವಿಸ್ತರಿಸಿದೆ.

ಡಾ. ಗಂಗೂಬಾಯಿ ಹಾನಗಲ್​ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ 2022-23ನೇ ಸಾಲಿನ ಪ್ರವೇಶ ಅವಧಿ ವಿಸ್ತರಣೆ
ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ
Follow us on

ಬೆಂಗಳೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ (Dr. Gangubai Hangal University) ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು 2022-23ನೇ ಸಾಲಿನ ಬಿ.ಪಿ.ಎ, ಎಂ.ಪಿ.ಎ, ಸರ್ಟಿಫಿಕೇಟ್ ಕೋರ್ಸ್, ಡಿಪ್ಲೋಮ, ಪಿ.ಜಿ. ಡಿಪ್ಲೋಮಾ ಹಾಗೂ ಡಿ.ಟಿಲ್ ಕೋರ್ಸ್‍ಗಳಿಗೆ ಡಿಸೆಂಬರ್ 26, 2022ರವರೆಗೆ ಪ್ರವೇಶಾತಿಗಾಗಿ ಅವಧಿಯನ್ನು ವಿಸ್ತರಿಸಿದೆ. ಬಿ.ಪಿ.ಎ ಹಾನರ್ಸ್ (Bachelor of Performing Arts): ನಾಲ್ಕು ವರ್ಷಗಳ ಕೋರ್ಸ್, ಹೊಸ ಶಿಕ್ಷಣ ನೀತಿ ಮಾದರಿಯಲ್ಲಿ ಐಚ್ಛಿಕ ವಿಷಯಗಳು, ನಾಟಕ, ಭರತನಾಟ್ಯ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ತಬಲಾ, ಮೃದಂಗ, ವೀಣಾ, ಪಿಟೀಲು. ಭಾಷಾ ಪತ್ರಿಕೆ, ಕನ್ನಡ/ ಐಚ್ಛಿಕ ಕನ್ನಡ/ ಸಂಸ್ಕಂತ ಮತ್ತು ಇಂಗ್ಲಿಷ್ ಆಗಿದ್ದು, ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಎಂ.ಪಿ.ಎ: ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಪ್ರವೇಶಕ್ಕೆ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು ಮತ್ತು ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ವಿಶ್ವವಿದ್ಯಾಲಯದ ಮೌಖಿಕ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು.

ಡಿ.ಲಿಟ್ (D.Litt): ಸಂಗೀತ, ನೃತ್ಯ, ನಾಟಕ ಹಾಗೂ ಪ್ರದರ್ಶಕ ಕಲೆಗಳಲ್ಲಿ ಅಧ್ಯಯನ ನಡೆಸಿ ಉನ್ನತ ಮಟ್ಟದ ಪರಿಣಿತಿ ಹೊಂದಿರಬೇಕು.

ಇದನ್ನೂ ಓದಿ: ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: ಇಂಗ್ಲೀಷ್- ಕನ್ನಡ ಎರಡೂ ಭಾಷೆಯಲ್ಲಿ ಪರೀಕ್ಷೆ ಬರೆಯಬಹದು

ಸರ್ಟಿಫಿಕೇಟ್ ಕೋರ್ಸ್(ಆರು ತಿಂಗಳು), ಸಮಯ: ಸಂಜೆ 5.30 ಗಂಟೆಯಿಂದ ರಾತ್ರಿ 8.30 ಗಂಟೆವರೆಗೆ, ಭಕ್ತಿಸಂಗೀತ, ಸುಗಮ ಸಂಗೀತ, ಜಾನಪದ ಸಂಗೀತ, ರಂಗ ಸಂಗೀತ, ಭರತನಾಟ್ಯ, ನಾಟಕ, ಹಾರ್ಮೋನಿಯಂ, ತಬಲ, ಯೋಗ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಯಕ್ಷಗಾನ, ಗಮಕ, ಸಿತಾರ, ಒಡಿಸಿ, Flute, Violin, Sarod, Keyboard, Karnataka Instrumental, Gitar, ಕಥಕ್.

ಡಿಪ್ಲೋಮಾ ಕೋರ್ಸ್ (ಒಂದು ವರ್ಷ), ಸಮಯ: ಸಂಜೆ 5.30 ಗಂಟೆಯಿಂದ ರಾತ್ರಿ 8.30 ಗಂಟೆವರೆಗೆ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಮತ್ತು ಯೋಗ ಪ್ರವೇಶಕ್ಕೆ ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಇದನ್ನೂ ಓದಿ: ಗುಡ್​ನ್ಯೂಸ್: ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಭೋಜನ ವೆಚ್ಚ ಏರಿಕೆ

ಪಿ.ಜಿ ಡಿಪ್ಲೋಮಾ (ಒಂದು ವರ್ಷ), ಸಮಯ: ಸಂಜೆ 5.30 ಗಂಟೆಯಿಂದ ರಾತ್ರಿ 8.30 ಗಂಟೆವರೆಗೆ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಭರತನಾಟ್ಯ, ನಾಟಕ, ತಬಲ, ಮೃದಂಗ, ವೀಣೆ ಮತ್ತು ಯೋಗ ಪ್ರವೇಶಕ್ಕೆ ಯಾವುದೇ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದಲ್ಲಿ ಬರುವ ಎಲ್ಲಾ ಸ್ನಾತಕೋತ್ತರ/ಡಿಪ್ಲೋಮಾ/ಸರ್ಟಿಫಿಕೇಟ್/ಡಿ.ಲಿಟ್ ಕಾರ್ಯಕ್ರಮಗಳಿಗೆ ಪ್ರವೇಶಾತಿಯನ್ನು UUCMS (ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಾಹಕ ವ್ಯವಸ್ಥೆ) Portal ಮೂಲಕ ಮಾಡಲಾಗುವುದು. UUCMS ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯು UUCMS ಲಿಂಕ್ – https://uucms.karnataka.gov.in ನಲ್ಲಿ ಲಭ್ಯವಿದೆ.

ಹೆಚ್ಚಿನ ವಿವರವಾದ ಮಾಹಿತಿಗಳನ್ನು https://www.musicuniversity.ac.in ಪಡೆದುಕೊಳ್ಳುವುದು ಹಾಗೂ ಆಸಕ್ತರು ಹೆಚ್ಚಿನ ವಿವರಗಳಿಗೆ Email: musicuniversity.ac.in or registrar@musicuniversity.ac.in ದೂರವಾಣಿ ಸಂ: 0821-2402141, 9880761877 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:14 pm, Tue, 20 December 22