UP Board Result 2022: 10ನೇ, 12ನೇ ಫಲಿತಾಂಶ ದಿನಾಂಕ ಮತ್ತು ಸಮಯ ಘೋಷಣೆ?

UP Board Result 2022: ಯುಪಿಎಂಎಸ್‌ಪಿ 10 ನೇ ತರಗತಿ, 12 ನೇ ತರಗತಿ ಫಲಿತಾಂಶಗಳನ್ನು ಜೂನ್ 10 ರೊಳಗೆ ಪ್ರಕಟಿಸಲಾಗುವುದು ಎಂಬ ನಕಲಿ ಸುದ್ದಿ ಹರಿದಾಡುತ್ತಿದೆ. ಆದರೆ ಫಲಿತಾಂಶ ಪ್ರಕಟದ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿಲ್ಲ ಎಂದು ಮಾಧ್ಯಮಿಕ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

UP Board Result 2022: 10ನೇ, 12ನೇ ಫಲಿತಾಂಶ ದಿನಾಂಕ ಮತ್ತು ಸಮಯ ಘೋಷಣೆ?
ಸಾಂಕೇತಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 10, 2022 | 8:01 PM

ಯುಪಿ ಬೋರ್ಡ್ ಫಲಿತಾಂಶ 2022 ಇನ್ನೂ ಏನನ್ನೂ ದೃಢೀಕರಿಸದಿದ್ದರೂ ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್ (UPMSP) ಯುಪಿ ಬೋರ್ಡ್ 10ನೇ ತರಗತಿ, 12ನೇ ಫಲಿತಾಂಶವನ್ನು ಜೂನ್ 15ರ ಒಳಗೆ ಬಿಡುಗಡೆ ಮಾಡಬಹುದು ಎಂಬ ಸುದ್ದಿಗಳು ಹರಿದಾಡುತ್ತಿದೆ. ಈ ನಡುವೆ  ಯುಪಿಎಂಎಸ್‌ಪಿ 10 ನೇ ತರಗತಿ, 12 ನೇ ತರಗತಿ ಫಲಿತಾಂಶಗಳನ್ನು ಜೂನ್ 10 ರೊಳಗೆ ಪ್ರಕಟಿಸಲಾಗುವುದು ಎಂಬ ನಕಲಿ ಸುದ್ದಿಗೆ ಪ್ರತಿಕ್ರಿಯಿಸಿದ ಮಾಧ್ಯಮಿಕ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆರಾಧನಾ ಶುಕ್ಲಾ, ”ಯುಪಿ ಬೋರ್ಡ್ ಫಲಿತಾಂಶದ ದಿನಾಂಕ ಮತ್ತು ಸಮಯ ಅಧಿಕೃತವಾಗಿ ಘೋಷಣೆ ಆಗಿಲ್ಲ. ಮಂಡಳಿಯು ಫಲಿತಾಂಶದ ದಿನಾಂಕ ಮತ್ತು ಸಮಯವನ್ನು ಅಧಿಕೃತ ವೆಬ್‌ಸೈಟ್ upresults.nic.in, upmsp.edu.in ನಲ್ಲಿ ಘೋಷಿಸುತ್ತದೆ” ಎಂದು ಹೇಳಿದ್ದಾರೆ.

ಯುಪಿಎಂಎಸ್‌ಪಿ ಅಧಿಕಾರಿಗಳು ಫಲಿತಾಂಶದ ದಿನಾಂಕ ಮತ್ತು ಸಮಯದ ಕುರಿತು ಇನ್ನೂ ಘೋಷಣೆ ಮಾಡಿಲ್ಲ. ಇತ್ತೀಚಿನ ವರದಿಗಳ ಪ್ರಕಾರ, ಯುಪಿ ಬೋರ್ಡ್ ಫಲಿತಾಂಶ 2022 ಮುಂದಿನ ವಾರ ಜೂನ್ 15 ರಂದು ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: National Education Policy: ಕೇಂದ್ರೀಯ ವಿ.ವಿ. ನೇಮಕಾತಿಯಲ್ಲಿ ಬದಲಾವಣೆ; ವೃತ್ತಿಪರರು, ಕೈಗಾರಿಕೆ ಪರಿಣತರಿಂದಲೂ ಪಾಠ

ಈ ವರ್ಷ ಒಟ್ಟು 51,92,689 ವಿದ್ಯಾರ್ಥಿಗಳು ಯುಪಿ ಬೋರ್ಡ್ 10, 12 ನೇ ತರಗತಿ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 47,75,749 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶ ಪ್ರಕಟಗೊಂಡರೆ ವಿದ್ಯಾರ್ಥಿಗಳು ತಮ್ಮ ಹೈಸ್ಕೂಲ್ ಮತ್ತು ಮಧ್ಯಂತರ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ upmsp.edu.in, upresults.nic.in ಮತ್ತು upmspresults.up.nic.in ನಲ್ಲಿ ಪರಿಶೀಲಿಸಬಹುದು.

ಫಲಿತಾಂಶ ನೋಡುವುದು ಹೇಗೆ?

ಅಧಿಕೃತ ವೆಬ್‌ಸೈಟ್ https://upmsp.edu.in/ ಗೆ ಭೇಟಿ ನೀಡಿ, ‘UP ಬೋರ್ಡ್ 10 ನೇ ಫಲಿತಾಂಶ 2022’ ಅಥವಾ ‘UP ಬೋರ್ಡ್ 12 ನೇ ಫಲಿತಾಂಶ 2022’ ಎಂಬ ಲಿಂಕ್ ಅನ್ನು ಕ್ಲಿಕ್ ಮಾಡಿ. ಈಗ ನಿಮ್ಮ ರೋಲ್ ಸಂಖ್ಯೆ, ಶಾಲೆಯ ಕೋಡ್ ಅನ್ನು ನಮೂದಿಸಿ ಕ್ಲಿಕ್ ಮಾಡಿ. ಈ ವೇಳೆ ನಿಮ್ಮ ಫಲಿತಾಂಶ ಪರದೆಯ ಮೇಲೆ ಬರಲಿದೆ. ಇದನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 10 June 22

ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Devotional: ಪುಣ್ಯಕ್ಷೇತ್ರಗಳಿಗೆ ತೆರಳುವಾಗ ಅಪಘಾತವಾದರೆ ಏನರ್ಥ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
Daily Horoscope: ಈ ರಾಶಿಯವರ ವ್ಯಾಪಾರದ ತೊಂದರೆಗಳು ನಿವಾರಣೆಯಾಗುತ್ತದೆ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಹನುಮಂತನೊಟ್ಟಿಗೆ ಜಗಳ, ಮಹಾಪ್ರಭುಗಳ ಆಜ್ಞೆಯನ್ನೂ ಧಿಕ್ಕರಿಸಿದ ಶೋಭಾ ಶೆಟ್ಟಿ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರದ ಎಲ್ಲ ಹಗರಣಗಳನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ: ಅಶೋಕ
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್
ಸರ್ಕಾರ ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ: ಶಿವಕುಮಾರ್