AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಯುಸಿ ಮುಗಿದ ತಕ್ಷಣ ದೇಶದ ರಕ್ಷಣಾ ಪಡೆ ಸೇರಲು ಸುವರ್ಣವಕಾಶ; UPSC NDA 1 ವೇಳಾಪಟ್ಟಿ ಪ್ರಕಟ

UPSC NDA 1 2027 ಅಧಿಸೂಚನೆ ಬಿಡುಗಡೆಯಾಗಿದೆ. ದೇಶದ ಸೇನೆ, ನೌಕಾಪಡೆ, ವಾಯುಪಡೆಗೆ ಸೇರಲು ಬಯಸುವ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ ಅವಿವಾಹಿತ ಯುವಕ-ಯುವತಿಯರಿಗೆ ಇದೊಂದು ಸುವರ್ಣಾವಕಾಶ. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯುತ್ತದೆ. ಡಿಸೆಂಬರ್ 2 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಡಿಸೆಂಬರ್ 22 ಕೊನೆಯ ದಿನಾಂಕ. ಹೆಚ್ಚಿನ ವಿವರಗಳಿಗಾಗಿ ಸಂಪೂರ್ಣ ಅಧಿಸೂಚನೆ ಪರಿಶೀಲಿಸಿ.

ಪಿಯುಸಿ ಮುಗಿದ ತಕ್ಷಣ ದೇಶದ ರಕ್ಷಣಾ ಪಡೆ ಸೇರಲು ಸುವರ್ಣವಕಾಶ; UPSC NDA 1 ವೇಳಾಪಟ್ಟಿ ಪ್ರಕಟ
ದೇಶದ ರಕ್ಷಣಾ ವಲಯ
ಅಕ್ಷತಾ ವರ್ಕಾಡಿ
|

Updated on: Nov 24, 2026 | 3:07 PM

Share

ದೇಶದ ರಕ್ಷಣಾ ವಲಯದಲ್ಲಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಕೇಂದ್ರ ಲೋಕಸೇವಾ ಆಯೋಗ (UPSC) ಭರ್ಜರಿ ಸಿಹಿಸುದ್ದಿ ನೀಡಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ಭಾರತೀಯ ನೌಕಾ ಅಕಾಡೆಮಿ (INA) ಪ್ರವೇಶಕ್ಕಾಗಿ NDA 1 2027 ಕಿರು ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ನೇಮಕಾತಿ ಮೂಲಕ ಸೇನೆ, ನೌಕಾಪಡೆ ಮತ್ತು ವಾಯುಪಡೆ ವಿಭಾಗಗಳಲ್ಲಿ ತರಬೇತಿ ಪಡೆಯಲು ಅವಕಾಶ ನೀಡಲಾಗುವುದು. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ಅರ್ಹತೆಗಳೇನು?

NDA ಯ ಸೇನಾ ವಿಭಾಗಕ್ಕೆ (Army Wing) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (10+2) ಉತ್ತೀರ್ಣರಾಗಿರಬೇಕು ಅಥವಾ ಪ್ರಸ್ತುತ ದ್ವಿತೀಯ ಪಿಯುಸಿಯ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಅದೇ ರೀತಿ ನೌಕಾಪಡೆ, ವಾಯುಪಡೆ ಮತ್ತು ಭಾರತೀಯ ನೌಕಾ ಅಕಾಡೆಮಿಗೆ ಪ್ರವೇಶ ಪಡೆಯಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ (Physics & Mathematics) ವಿಷಯಗಳನ್ನು ಕಡ್ಡಾಯವಾಗಿ ಅಧ್ಯಯನ ಮಾಡಿರಬೇಕು. ಈ ಎಲ್ಲಾ ವಿಭಾಗಗಳಿಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಶುಲ್ಕದ ವಿವರ:

ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ (General), ಒಬಿಸಿ (OBC) ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ (EWS) ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಅಭ್ಯರ್ಥಿಗಳನ್ನು ಪ್ರಮುಖವಾಗಿ ಮೂರು ಹಂತಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಒಟ್ಟು 900 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ ಸೇವಾ ಆಯ್ಕೆ ಮಂಡಳಿ (SSB) ವತಿಯಿಂದ 900 ಅಂಕಗಳಿಗೆ ಸಂದರ್ಶನವನ್ನು ನಡೆಸಲಾಗುತ್ತದೆ. ಅಂತಿಮವಾಗಿ ಸಂದರ್ಶನದಲ್ಲಿ ತೇರ್ಗಡೆಯಾದವರಿಗೆ ನಿಗದಿತ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿ, ಅರ್ಹತಾ ಪಟ್ಟಿಯ (Merit List) ಆಧಾರದ ಮೇಲೆ ಪ್ರವೇಶ ನೀಡಲಾಗುವುದು.

ಇದನ್ನೂ ಓದಿ: ಮೊದಲ ಉದ್ಯೋಗ ಪಡೆಯುವುದು ಹೇಗೆ? ಫ್ರೆಶರ್‌ಗಳು ತಿಳಿದುಕೊಳ್ಳಬೇಕಾದ ಪ್ರಮುಖ ವಿಚಾರಗಳಿವು

ಪ್ರಮುಖ ದಿನಾಂಕಗಳು:

UPSC ಬಿಡುಗಡೆ ಮಾಡಿರುವ ಕಿರು ಅಧಿಸೂಚನೆಯ ಪ್ರಕಾರ, ನವೆಂಬರ್ 2026 ರಲ್ಲಿ ಕಿರು ಅಧಿಸೂಚನೆ ಪ್ರಕಟಗೊಂಡಿದ್ದು, ಡಿಸೆಂಬರ್ 2 ರಂದು ಪೂರ್ಣ ಪ್ರಮಾಣದ ಅಧಿಸೂಚನೆ ಬಿಡುಗಡೆಯಾಗಲಿದೆ. ಅಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಆಸಕ್ತರು ಡಿಸೆಂಬರ್ 22, 2026 ರೊಳಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ನೇಮಕಾತಿಯ ಲಿಖಿತ ಪರೀಕ್ಷೆಯು ಏಪ್ರಿಲ್ 11, 2027 ರಂದು ನಡೆಯಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 2 ರಂದು ಪೂರ್ಣ ಅಧಿಸೂಚನೆ ಪ್ರಕಟವಾದ ನಂತರ ವಯೋಮಿತಿ, ಪರೀಕ್ಷಾ ಮಾದರಿ ಮತ್ತು ಇತರ ನಿಯಮಗಳನ್ನು ಸರಿಯಾಗಿ ಪರಿಶೀಲಿಸಬೇಕು. ಬಳಿಕ UPSC ಯ ಅಧಿಕೃತ ಆನ್‌ಲೈನ್ ಪೋರ್ಟಲ್ (upsconline.nic.in) ಮೂಲಕ ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ರಕ್ಷಣಾ ಕ್ಷೇತ್ರದಲ್ಲಿ ಉನ್ನತ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಸದ್ಯ ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ರಾಜಕೀಯ, ಕ್ರೈಂ ಸುದ್ದಿಗಳನ್ನು ಬರೆಯುತ್ತಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ