VTU: ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ

| Updated By: ganapathi bhat

Updated on: Sep 20, 2021 | 10:34 PM

ಜುಲೈ, ಆಗಸ್ಟ್‌ನಲ್ಲಿ ನಡೆಯಬೇಕಿದ್ದ ವಿಟಿಯು ಪರೀಕ್ಷೆಯನ್ನು ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿಯನ್ನು ವಿಟಿಯು ಪ್ರಕಟಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ.

VTU: ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ; ವಿವರ ಇಲ್ಲಿದೆ
ಸಾಂಕೇತಿಕ ಚಿತ್ರ
Follow us on

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ (ವಿಟಿಯು) ಬಾಕಿ ವಿಷಯಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಪ್ರಥಮ ಮತ್ತು ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ದಿನಾಂಕ‌ ನಿಗದಿ ಮಾಡಲಾಗಿದೆ. ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 16 ರವರೆಗೆ ವಿಟಿಯು ಪರೀಕ್ಷೆ ನಡೆಯಲಿದೆ. ಜುಲೈ, ಆಗಸ್ಟ್‌ನಲ್ಲಿ ನಡೆಯಬೇಕಿದ್ದ ವಿಟಿಯು ಪರೀಕ್ಷೆಯನ್ನು ಕೊರೊನಾ ಎರಡನೇ ಅಲೆ ಹಿನ್ನೆಲೆ ಮುಂದೂಡಲಾಗಿತ್ತು. ಈಗ ಪರಿಷ್ಕೃತ ವೇಳಾಪಟ್ಟಿಯನ್ನು ವಿಟಿಯು ಪ್ರಕಟಿಸಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ ಎಂದು ಹೇಳಲಾಗಿತ್ತು. ಇದಕ್ಕೆ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. ಸರ್ಕಾರ ಲಾಕ್​ಡೌನ್​ ಘೋಷಣೆ ನಿರ್ಧಾರದ ಬೆನ್ನಲ್ಲೇ ವಿಟಿಯು ಪರೀಕ್ಷೆಯನ್ನು ಮುಂದೂಡಲಾಗಿತ್ತು.  ವಿಟಿಯು ಇಂಜಿನಿಯರಿಂಗ್, ಪಾಲಿಟೆಕ್ನಿಕ್​ ಪರೀಕ್ಷೆ ಮುಂದೂಡಿಕೆ ಮಾಡಲಾಗಿತ್ತು. ಕರ್ಫ್ಯೂ ಮುಗಿದ ಬಳಿಕ ಪರೀಕ್ಷಾ ದಿನಾಂಕ ಪ್ರಕಟಿಸಲು ನಿರ್ಧರಿಸಲಾಗಿತ್ತು. ಎಲ್ಲಾ ಪ್ರಾಯೋಗಿಕ ಪರೀಕ್ಷೆಗಳು ಸಹ ಮುಂದೂಡಲ್ಪಟ್ಟಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​​ ನಾರಾಯಣ ಮಾಹಿತಿ ನೀಡಿದ್ದರು.

ಇದನ್ನೂ ಓದಿ: KCET Results 2021: ಸಿಇಟಿ ಫಲಿತಾಂಶ ಪ್ರಕಟ; ಟಾಪ್ 5 ರ್ಯಾಂಕ್ ಪಡೆದವರ ಪಟ್ಟಿ ಇಲ್ಲಿದೆ

ಇದನ್ನೂ ಓದಿ: KCET Results 2021: ಸಿಇಟಿಯಲ್ಲಿ ಮೈಸೂರಿನ ಮೇಘನ್ ಹೆಚ್​.ಕೆ.ಗೆ ಮೊದಲ ರ್ಯಾಂಕ್; ವೆಬ್​ಸೈಟ್​ನಲ್ಲಿ ಫಲಿತಾಂಶ ಲಭ್ಯ

Published On - 9:40 pm, Mon, 20 September 21