VTU Exam: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

VTU Exam: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಸಾಂದರ್ಭಿಕ ಚಿತ್ರ
Image Credit source: istock

Updated on: Apr 18, 2023 | 7:12 PM

ಮುಖ್ಯಾಂಶಗಳು

  • ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
  • ಏಪ್ರಿಲ್ 20ರಿಂದ ನಡೆಯ ಬೇಕಿದ್ದ ಮೊದಲ ವರ್ಷದ ಎಂಜಿನಿಯರಿಂಗ್ ಪರೀಕ್ಷೆಗಳು
  • ಉಪನ್ಯಾಸಕರನ್ನು ಚುನಾವಣೆಯ ಕೆಲಸಕ್ಕೆ ಬಳಸಲಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (Visvesvaraya Technological University) ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ವಿಚಾರವಾಗಿ ಮಂಗಳವಾರ ಸಂಜೆ ವಿಟಿಯು ಮಾಹಿತಿ ನೀಡಿದೆ. ಮೊದಲ ವರ್ಷದ ಮೊದಲ ಸೆಮಿಸ್ಟರ್ ಪರೀಕ್ಷೆಗಳು ಏಪ್ರಿಲ್‌ 20 ರಿಂದ ನಿಗದಿಯಾಗಿದ್ದವು. ವಿಟಿಯು ವ್ಯಾಪ್ತಿಯ ಕಾಲೇಜುಗಳ ಉಪನ್ಯಾಸಕರನ್ನು ಚುನಾವಣೆಯ ಕೆಲಸಕ್ಕೆ ಬಳಸಲಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಟಿಯು ತಿಳಿಸಿದೆ.

ಚುನಾವಣೆಯ ಕೆಲಸಕ್ಕೆ ಎಲ್ಲ ಉಪನ್ಯಾಸಕರನ್ನು ಬಳಸಿಕೊಳ್ಳಲಾಗುತ್ತಿದೆ. ಜತೆಗೆ ಕೆಲವು ತಾಂತ್ರಿಕ ಸಮಸ್ಯೆಗಳೂ ಎದುರಾಗಿವೆ. ಹೀಗಾಗಿ ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ವಿಟಿಯು ತಿಳಿಸಿದೆ. ಮುಂದೂಡಿಕೆಯಾಗಿರುವ ಪರೀಕ್ಷೆಗಳನ್ನು ಏಪ್ರಿಲ್ 27ರಿಂದ ನಡೆಸಲು ವಿಟಿಯು ತೀರ್ಮಾನಿಸಿದೆ.

ಇದನ್ನೂ ಓದಿ: CUET PG 2023: ಸಿಯುಇಟಿ ಪಿಜಿ ನೋಂದಣಿಗಳು ನಾಳೆ ಮುಚ್ಚಲಿವೆ; ನೋಂದಣಿ ಪ್ರಕ್ರಿಯೆ ಹೀಗಿದೆ

ರಾಜ್ಯದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಏಪ್ರಿಲ್ 20ರ ವರೆಗೆ ನಡೆಯಲಿದೆ. ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂತೆಗೆಯಲು ಏಪ್ರಿಲ್ 24 ಕೊನೆಯ ದಿನವಾಗಿದೆ. ಹೀಗಾಗಿ ಸದ್ಯ ಶಿಕ್ಷಕರು, ಉಪನ್ಯಾಸಕರು ಚುನಾವಣೆ ಕರ್ತವ್ಯದಲ್ಲಿ ವ್ಯಸ್ತರಾಗಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us