ಇಲ್ಲೇ ಓದುತ್ತೇವೆ.. ಇಲ್ಲ ಸಾಯುತ್ತೇವೆ.. ಉಕ್ರೇನ್​ನಿಂದ ಭಾರತಕ್ಕೆ ಬರಲು ಒಪ್ಪದ 1500 ವಿದ್ಯಾರ್ಥಿಗಳು

ಇಲ್ಲೇ ಓದುತ್ತೇವೆ.. ಇಲ್ಲ ಸಾಯುತ್ತೇವೆ.. ಉಕ್ರೇನ್​ನಿಂದ ಭಾರತಕ್ಕೆ ಬರಲು ಒಪ್ಪದ 1500 ವಿದ್ಯಾರ್ಥಿಗಳು, ಇದಕ್ಕೆ ಕಾರಣವೂ ಇದೆ.

ಇಲ್ಲೇ ಓದುತ್ತೇವೆ.. ಇಲ್ಲ  ಸಾಯುತ್ತೇವೆ.. ಉಕ್ರೇನ್​ನಿಂದ ಭಾರತಕ್ಕೆ ಬರಲು ಒಪ್ಪದ 1500 ವಿದ್ಯಾರ್ಥಿಗಳು
1500 Indian students trapped in ukraine
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 22, 2022 | 3:38 PM

ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ 1500 ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಲು ನಿರಾಕರಿಸಿದ್ದಾರೆ. ಇಲ್ಲೇ ಓದುತ್ತೇನೆ ಇಲ್ಲವೇ ಸಾಯುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಮರಣಹೊಂದಿದರೆ ಶವಪೆಟ್ಟಿಗೆಯಲ್ಲಿ ಬರಬೇಕಾಗುತ್ತೆ ಆದರೂ ಚಿಂತೆಯಿಲ್ಲ. ಇದಕ್ಕಿಂತ ಬೇರೆ ಆಯ್ಕೆ ಇಲ್ಲ‌ ಎನ್ನುತ್ತಿದ್ದಾರೆ ಭಾರತೀಯ ವಿದ್ಯಾರ್ಥಿಗಳು.

ಕಳೆದ ಒಂಬತ್ತು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಯುದ್ಧದಲ್ಲಿ ನೂರಾರು ಅಮಾಯಕರು ಸತ್ತಿದ್ದಾರೆ. ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ಜನರು ಉಕ್ರೇನ್ ತೊರೆದಿದ್ದಾರೆ, ಆದರೆ ಇನ್ನೂ 1500 ಭಾರತೀಯ ವಿದ್ಯಾರ್ಥಿಗಳು ಅಲ್ಲಿಯೇ ಸಿಕ್ಕಿಬಿದ್ದಿದ್ದಾರೆ. ಈ ವಿದ್ಯಾರ್ಥಿಗಳು ಭಾರತ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿಲ್ಲ ಮತ್ತು ತವರಿಗೆ ಮರಳಲು ನಿರಾಕರಿಸುತ್ತಿದ್ದಾರೆ. ಭಾರತಕ್ಕೆ ವಾಪಸ್ಸಾದ ವಿದ್ಯಾರ್ಥಿಗಳ ಸ್ಥಿತಿ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ನಾವು ವಾಪಸ್​ ಬಂದರೆ ನಮಗೂ ಅದೇ ಸ್ಥಿತಿ ಆಗುವ ಆತಂಕ ವಿದ್ಯಾರ್ಥಿಗಳಲ್ಲಿ ಇದೆ. ಈ ಕಾರಣಕ್ಕೆ 1500 ವಿದ್ಯಾರ್ಥಿಗಳು ಉಕ್ರೇನ್​ನಿಂದ ಭಾರತಕ್ಕೆ ಬರಲು ಒಪ್ಪುತ್ತಿಲ್ಲ.

ಭಾರತಕ್ಕೆ ಮರಳಲು ಯಾವುದೇ ಆಯ್ಕೆ ಉಳಿದಿಲ್ಲ

ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಭಾರತ ಸರ್ಕಾರವು ತಮ್ಮ ಮುಂದೆ ಭವಿಷ್ಯದ ವ್ಯಾಸಂಗದ ಬಗ್ಗೆ ಯಾವುದೇ ಭರವಸೆ ನೀಡಿಲ್ಲ. ವಾಪಾಸ್ ಹೋಗಿರುವವರಲ್ಲಿ ಕೆಲವು ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಓದುತ್ತಿದ್ದಾರೆ. ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಭವಿಷ್ಯದ ಅಧ್ಯಯನದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಷಯ ಬಾಕಿ ಉಳಿದಿದೆ. ಈ ಕುರಿತು ನವೆಂಬರ್ 1 ರಂದು ವಿಚಾರಣೆ ನಡೆಯಲಿದೆ. ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಸಹ ಇದಕ್ಕಾಗಿ ಕಾಯುತ್ತಿದ್ದಾರೆ.

ಕೆಲವು ತಿಂಗಳ ಹಿಂದೆ ವಿದ್ಯಾರ್ಥಿಗಳು ಉಕ್ರೇನ್‌ಗೆ ವಾಪಾಸ್ ಹೋಗಿದ್ದಾರೆ. ವಿದ್ಯಾರ್ಥಿಗಳು ಭಾರತ ಸರ್ಕಾರದ ಸಲಹೆಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಈ ವಿದ್ಯಾರ್ಥಿಗಳು ಕೂಡಲೇ ಮನೆಗೆ ಮರಳುವಂತೆ ಸರ್ಕಾರ ಸೂಚಿಸಿದೆ. ಇನ್ನೂ ಉಕ್ರೇನ್‌ಗೆ ತೆರಳಿದ್ದ 1,500ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ಮರಳಲು ಬಯಸುತ್ತಿಲ್ಲ. ಉಕ್ರೇನ್‌ನಲ್ಲಿ ಉಳಿದುಕೊಂಡು ತನ್ನ ಅಧ್ಯಯನವನ್ನು ಪೂರ್ಣಗೊಳಿಸಲು ಬಯಸುತ್ತೇನೆ ಎಂದು ಅವರು ಹೇಳುತ್ತಿದ್ದಾರೆ.

ಮನೆಗೆ ಮರಳಿದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ನಾವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ, ಆದರೆ ನಾವು ಓದು ಮುಗಿದ ನಂತರವೇ ಮನೆಗೆ ಬರುತ್ತೇವೆ. ಭಾರತ ಸರ್ಕಾರವು ಈಗಾಗಲೇ ಭಾರತೀಯ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರವೇಶವನ್ನು ನೀಡುವುದಕ್ಕೆ ಒಪ್ಪಿಲ್ಲ ಉಕ್ರೇನ್‌ನಲ್ಲಿ ಉಳಿಯುವುದನ್ನು ಬಿಟ್ಟು ಅವರಿಗೆ ಬೇರೆ ಆಯ್ಕೆಗಳಿಲ್ಲ.

ಭಾರತದಲ್ಲಿ ವೈದ್ಯಕೀಯ ಶಿಕ್ಷಣವನ್ನು ನೋಡಿಕೊಳ್ಳುವ ರಾಷ್ಟ್ರೀಯ ವೈದ್ಯಕೀಯ ಆಯೋಗವು ಆನ್‌ಲೈನ್ ತರಗತಿಗಳ ಮೂಲಕ ಪಡೆದ ಪದವಿಗಳನ್ನು ಅನುಮತಿಸುವುದಿಲ್ಲ ಎಂದು ಹೇಳುತ್ತದೆ. ಆದ್ದರಿಂದಲೇ ಉಕ್ರೇನ್‌ನಲ್ಲಿ ಓದುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುತ್ತಾರೆ ಈ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ.

ವರದಿ: ಹರೀಶ್​ ಟಿವಿ9 ನವದೆಹಲಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!