World University Rankings 2023: ಭಾರತದ ಶಿಕ್ಷಣ ಸಂಸ್ಥೆಗಳಲ್ಲಿ ಬೆಂಗಳೂರಿನ ಐಐಎಸ್ಸಿಗೆ ಮೊದಲ ರ್ಯಾಂಕಿಂಗ್
Indian Institute of Science: ವಿಶ್ವದ 500 ಅಗ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 5 ಭಾರತೀಯ ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿದ್ದು, ಅದರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಕೂಡ ಒಂದಾಗಿದೆ.
ಬೆಂಗಳೂರು: ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಟೈಮ್ಸ್ ಹೈಯರ್ ಎಜುಕೇಶನ್ (THE) ರ್ಯಾಂಕಿಂಗ್‌ನ 2023ರ ಆವೃತ್ತಿಯಲ್ಲಿ ಅತ್ಯುನ್ನತ ಶ್ರೇಣಿಯ ಭಾರತೀಯ ವಿಶ್ವವಿದ್ಯಾಲಯವಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ವಿಶ್ವದ 500 ಅಗ್ರ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 5 ಭಾರತೀಯ ವಿಶ್ವವಿದ್ಯಾಲಯಗಳು ಸ್ಥಾನ ಪಡೆದಿದ್ದು, ಅದರಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (Indian Institute of Science) ಕೂಡ ಒಂದಾಗಿದೆ.
ದೆಹಲಿ, ರೂರ್ಕಿ, ಕಾನ್ಪುರ್, ಮುಂಬೈ ಮತ್ತು ಖರಗ್‌ಪುರ ಸೇರಿದಂತೆ ಪ್ರಮುಖ ಐಐಟಿಗಳು ಶ್ರೇಯಾಂಕದಲ್ಲಿ ಪಾರದರ್ಶಕತೆಯಿಲ್ಲ ಎಂದು ಸತತ 3ನೇ ವರ್ಷ ಶ್ರೇಯಾಂಕವನ್ನು ಬಹಿಷ್ಕರಿಸಿವೆ. 75 ಸಂಸ್ಥೆಗಳು ಟೈಮ್ಸ್ ಹೈಯರ್ ಎಜುಕೇಷನ್ 2023ರ ರ್ಯಾಂಕಿಂಗ್ನಲ್ಲಿ ಕಾಣಿಸಿಕೊಂಡಿವೆ.
ಇದನ್ನೂ ಓದಿ: CET Ranking: ಸೆಪ್ಟೆಂಬರ್ 29ರಂದು ಪರಿಷ್ಕೃತ ಸಿಇಟಿ ರ್ಯಾಂಕಿಂಗ್ ಪ್ರಕಟ
5 ಭಾರತೀಯ ವಿಶ್ವವಿದ್ಯಾನಿಲಯಗಳು ವಿಶ್ವದ ಅಗ್ರ 500 ವಿಶ್ವವಿದ್ಯಾಲಯಗಳಲ್ಲಿ ಸ್ಥಾನ ಪಡೆದಿವೆ. ಅವುಗಳೆಂದರೆ, ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್, ಮೈಸೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಆ್ಯಂಡ್ ರಿಸರ್ಚ್, ಸೋಲನ್ನ ಶೂಲಿನಿ ಯುನಿವರ್ಸಿಟಿ ಆಫ್ ಬಯೋಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ಮೆಂಟ್ ಸೈನ್ಸಸ್, ಕಾರೈಕುಡಿಯ ಅಳಗಪ್ಪ ವಿಶ್ವವಿದ್ಯಾಲಯ ಮತ್ತು ಕೊಟ್ಟಾಯಂನ ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ.
ಈ ಬಾರಿ 6 ವಿಶ್ವವಿದ್ಯಾನಿಲಯಗಳು ಶ್ರೇಯಾಂಕದಲ್ಲಿ ಹೊಸತಾಗಿ ಸ್ಥಾನ ಪಡೆದುಕೊಂಡಿವೆ. ಶೂಲಿನಿ ಯೂನಿವರ್ಸಿಟಿ ಆಫ್ ಬಯೋಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್ ಸೈನ್ಸಸ್ 351-400 ಬ್ಯಾಂಡ್‌ನಲ್ಲಿ ಹೊಸದಾಗಿ ಪ್ರವೇಶಿಸಿದವರಲ್ಲಿ ಅತ್ಯಧಿಕ ಸ್ಥಾನವನ್ನು ಗಳಿಸಿದೆ.
ಇದನ್ನೂ ಓದಿ: IISc: ಜಗತ್ತಿನ ಟಾಪ್ ವಿಶ್ವವಿದ್ಯಾಲಯಗಳಲ್ಲಿ ಸ್ಥಾನ ಪಡೆದ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್!
ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ಸತತ 7ನೇ ವರ್ಷವೂ ಅಗ್ರಸ್ಥಾನದಲ್ಲಿದೆ. ಹಾರ್ವರ್ಡ್ ವಿಶ್ವವಿದ್ಯಾಲಯವು 2ನೇ ಸ್ಥಾನದಲ್ಲಿದೆ. ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯವು ಕಳೆದ ವರ್ಷ 5ನೇ ಸ್ಥಾನದಲ್ಲಿದ್ದುದು ಈ ವರ್ಷ ಮೂರನೇ ಸ್ಥಾನಕ್ಕೆ ಜಿಗಿದಿದೆ.