AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Assembly Election 2021: 11ಗಂಟೆವರೆಗೆ ಪಶ್ಚಿಮ ಬಂಗಾಳದಲ್ಲಿ ಶೇ.28, ಅಸ್ಸಾಂನಲ್ಲಿ ಶೇ.25ರಷ್ಟು ಮತದಾನ: ಬಿಜೆಪಿ ಕಾರ್ಯಕರ್ತನೊಬ್ಬನ ಮೃತ ದೇಹ ಪತ್ತೆ

West Bengal, Assam Election 2021: ಆಸ್ಸಾಂನಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದರೂ ಪಶ್ಚಿಮ ಬಂಗಾಳದ ಹಲವುಕಡೆ ನಿನ್ನೆ ರಾತ್ರಿಯಿಂದಲೇ ಹಿಂಸಾಚಾರ ಶುರುವಾಗಿದೆ.

Assembly Election 2021: 11ಗಂಟೆವರೆಗೆ ಪಶ್ಚಿಮ ಬಂಗಾಳದಲ್ಲಿ ಶೇ.28, ಅಸ್ಸಾಂನಲ್ಲಿ ಶೇ.25ರಷ್ಟು ಮತದಾನ: ಬಿಜೆಪಿ ಕಾರ್ಯಕರ್ತನೊಬ್ಬನ ಮೃತ ದೇಹ ಪತ್ತೆ
ಅಸ್ಸಾಂ ಮತದಾನದ ದೃಶ್ಯ
Lakshmi Hegde
|

Updated on:Mar 27, 2021 | 12:25 PM

Share

ಪಶ್ಚಿಮಬಂಗಾಳ ಹಾಗೂ ಆಸ್ಸಾಂ ವಿಧಾನಸಭಾ ಚುನಾವಣೆಗಳ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 30 ವಿಧಾನಸಭಾ ಕ್ಷೇತ್ರಗಳು ಹಾಗೂ ಆಸ್ಸಾಂನಲ್ಲಿ 47 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಬೆಳಗ್ಗೆಯಿಂದಲೇ ಜನರು ಮತ ಚಲಾಯಿಸುತ್ತಿದ್ದಾರೆ. ಬೆಳಗ್ಗೆ 11 ಗಂಟೆ ಹೊತ್ತಿಗೆ ಆಸ್ಸಾಂನಲ್ಲಿ ಶೇ. 24.91 ಮತ್ತು ಪಶ್ಚಿಮಬಂಗಾಳದಲ್ಲಿ ಶೇ.28.13ರಷ್ಟು ವೋಟಿಂಗ್ ಆಗಿದ್ದಾಗಿ ಚುನಾವಣಾ ಆಯೋಗ ತಿಳಿಸಿದೆ. ಪಶ್ಚಿಮಬಂಗಾಳದಲ್ಲಿ ಪುರುಲಿಯಾ, ಝಾರ್ಗರಮ್​, ಬಂಕುರಾ, ಪಶ್ಚಿಮ ಮೇದಿನಿಪುರ ಮತ್ತು ಪೂರ್ವ ಮೇದಿನಿಪುರಗಳ ಒಟ್ಟು 30 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಎಲ್ಲ ಸೇರಿ 73 ಲಕ್ಷ ಮತದಾರರು ಇದ್ದಾರೆ. 10,200ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಹಾಗೇ ಆಸ್ಸಾಂನಲ್ಲಿ 11,000 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 81 ಲಕ್ಷ ಮತದಾರರು ಇಂದು ವೋಟ್​ ಮಾಡಬೇಕಾಗಿದೆ.

ಪಶ್ಚಿಮ ಬಂಗಾಳದಲ್ಲಿ ಇಂದು ಮತದಾನ ಇರುವ 30 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್​ಗಳು ತಲಾ 29 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ. ಕಾಂಗ್ರೆಸ್ ಕೇವಲ 5 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಿದೆ. ಹಾಗೇ ಆಸ್ಸಾಂನಲ್ಲಿ 47 ವಿಧಾನಸಭಾ ಕ್ಷೇತ್ರಗಳಲ್ಲಿ 39 ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿಗಳು ಇದ್ದಾರೆ. ಕಾಂಗ್ರೆಸ್​ 43 ಕ್ಷೇತ್ರಗಲ್ಲಿ ಸ್ಪರ್ಧೆಗೆ ಇಳಿದಿದೆ.

ಬಿಜೆಪಿ ಕಾರ್ಯಕರ್ತ ಬಲಿ ಆಸ್ಸಾಂನಲ್ಲಿ ಬಹುತೇಕ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದರೂ ಪಶ್ಚಿಮ ಬಂಗಾಳದ ಹಲವುಕಡೆ ನಿನ್ನೆ ರಾತ್ರಿಯಿಂದಲೇ ಹಿಂಸಾಚಾರ ಶುರುವಾಗಿದೆ. ಈಗಾಗಲೇ ಎಡಪಕ್ಷೀಯ ಅಭ್ಯರ್ಥಿ ಸುಶಾಂತ್ ಘೋಷ್​ ಮತ್ತು ವರದಿಗೆ ತೆರಳಿದ್ದ ಟಿವಿ 9 ಬಾಂಗ್ಲಾ ಸಿಬ್ಬಂದಿ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದು ವರದಿಯಾಗಿದೆ. ಅಲ್ಲದೆ, ಮತಗಟ್ಟೆ ಬಳಿ ಕರ್ತವ್ಯದಲ್ಲಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮೇಲೆ ಫೈರಿಂಗ್ ಆಗಿದೆ. ಈ ಮಧ್ಯೆ ಮತದಾನ ನಡೆಯುತ್ತಿರುವ ಪೂರ್ವ ಮೇದಿನಿಪುರ್​​ನ ಕೇಶಿಯಾರಿ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನ ಮೃತದೇಹ ಪತ್ತೆಯಾಗಿದೆ. ಈ ಕಾರ್ಯಕರ್ತನನ್ನು 35 ವರ್ಷದ ಮಂಗಲ್​ ಸೋರೆನ್​ ಎಂದು ಪೊಲೀಸರು ಗುರುತಿಸಿದ್ದಾರೆ. ಈತ ಕೇಶಿಯಾರಿಯ ಬೇಗಂಪುರ ನಿವಾಸಿ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: West Bengal Election 2021: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿಯೇ ಭುಗಿಲೆದ್ದ ಹಿಂಸೆ; ವರದಿಗೆ ತೆರಳಿದ್ದ ಟಿವಿ 9 ಬಾಂಗ್ಲಾ ಸಿಬ್ಬಂದಿ ಮೇಲೆಯೂ ಹಲ್ಲೆ

Assam Election 2021 Phase 1 Voting LIVE: ಅಸ್ಸಾಂನಲ್ಲಿ ಆರಂಭವಾಗಿದೆ ಮೊದಲ ಹಂತದ ಮತದಾನ; ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತದಾರ

Published On - 12:20 pm, Sat, 27 March 21

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?