ಚುನಾವಣಾ ಆಯೋಗದ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಲಿದ್ದಾರಾ ಮಮತಾ ಬ್ಯಾನರ್ಜಿ?

West Bengal Elections 2021: ಈ ಮುಂಚಿನಿಂದಲೂ ಚುನಾವಣಾ ಆಯೋಗ ಕೇಂದ್ರ ಸರ್ಕಾರ ಮತ್ತು ಗೃಹ ಸಚಿವ ಅಮಿತ್ ಶಾ ನಿರ್ದೇಶನದ ಅನುಸಾರ ಕೆಲಸ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಬಂದಿದ್ದಾರೆ.

ಚುನಾವಣಾ ಆಯೋಗದ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಲಿದ್ದಾರಾ ಮಮತಾ ಬ್ಯಾನರ್ಜಿ?
ಮಮತಾ ಬ್ಯಾನರ್ಜಿ
guruganesh bhat

|

Apr 24, 2021 | 11:00 PM

ಕೋಲ್ಕತ್ತಾ: ಚುನಾವಣಾ ದಿನಾಂಕ ಘೋಷಣೆಯಾದ ದಿನದಿಂದಲೂ ಚುನಾವಣಾ ಆಯೋಗವನ್ನು ದೂಷಿಸುತ್ತಲೇ ಬಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣೆ ಮುಗಿದ ನಂತರ ಆಯೋಗದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲು ಏರುವು ಸುಳಿವು ನೀಡಿದ್ದಾರೆ. ಈ ಕುರಿತು ಕೆಲವು ರಾಷ್ಟ್ರೀಯ ಜಾಲತಾಣಗಳು ವರದಿ ಮಾಡಿವೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಅಯೋಗ ಪಕ್ಷಪಾತ ಧೋರಣೆ ಅನುಸರಿಸಿದೆ ಎಂದು ದೂರಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಕುರಿತು ತಮ್ಮ ಆಪ್ತ ಬಳಗದ ಬಲಿ ಈಗಾಗಲೇ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. 

ಈ ಮುಂಚಿನಿಂದಲೂ ಚುನಾವಣಾ ಆಯೋಗ ಕೇಂದ್ರ ಸರ್ಕಾರ ಮತ್ತು ಗೃಹ ಸಚಿವ ಅಮಿತ್ ಶಾ ನಿರ್ದೇಶನದ ಅನುಸಾರ ಕೆಲಸ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆರೋಪಿಸುತ್ತಲೇ ಬಂದಿದ್ದಾರೆ.

ಚುನಾವಣಾ ಪ್ರಚಾರ ಸಭೆಗಳಿಂದ ಹೆಚ್ಚುತ್ತಿದೆ ಕೊರೊನಾ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣಾ ರ‍್ಯಾಲಿಗಳಿಂದ ಕೊರೊನಾ ಪಾಸಿಟಿವ್ ದರ ಹೆಚ್ಚಳವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 23 ರಂದು ಕೊರೊನಾ ಪಾಸಿಟಿವ್ ದರ ಶೇ.25ಕ್ಕೆ ಏರಿದೆ. ಬಹುತೇಕ 75 ಸಾವಿರಕ್ಕೆ ಕೊರೊನಾ ಸಕ್ರಿಯ ಪ್ರಕರಣಗಳು ಏರಿಕೆಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಯಾವುದೇ ರ‍್ಯಾಲಿ, ಪಾದಯಾತ್ರೆ ಅಥವಾ ರೋಡ್​ ಶೋಗಳು ನಡೆಯುವಂತಿಲ್ಲ ಎಂದು ಚುನಾವಣಾ ಆಯೋಗವು ಏಪ್ರಿಲ್ 22ಕ್ಕೆ ಸಂಜೆ ಘೋಷಿಸಿದೆ. ಕೊರೊನಾ ವಿಚಾರದಲ್ಲಿ ಚುನಾವಣಾ ಆಯೋಗದ ವರ್ತನೆಯನ್ನು ಕಲ್ಕತ್ತಾ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳ ತರುವಾಯ ಆಯೋಗ ಈ ಆದೇಶ ಹೊರಡಿಸಿತ್ತು. ರ‍್ಯಾಲಿ ಮತ್ತು ಪಾದಯಾತ್ರೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಈ ಹಿಂದೆ ನೀಡಿದ್ದ ಎಲ್ಲ ಆದೇಶ, ಅನುಮತಿಗಳು ಇದೀಗ ರದ್ದಾಗಲಿವೆ. ಯಾವುದೇ ಸಭೆಯಲ್ಲಿ 500 ಜನರಿಗಿಂತಲೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.

ಚುನಾವಣಾ ರ‍್ಯಾಲಿಗಳು ಕೊರೊನಾ ಸೋಂಕು ವೇಗವಾಗಿ ಹರಡಲು ಸೂಪರ್ ಸ್ಪ್ರೆಡರ್​ಗಳಾಗಿ ಕೆಲಸ ಮಾಡಬಲ್ಲವು ಎಂಬ ಆತಂಕ ವ್ಯಕ್ತವಾದ ಹಿನ್ನಲೆಯಲ್ಲಿ ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಚುನಾವಣಾ ಪ್ರಚಾರದಿಂದ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಸೋಂಕು ಹರಡದಂತೆ ತಡೆಯಲು ಚುನಾವಣಾ ಆಯೋಗ ತೆಗೆದುಕೊಂಡ ಕ್ರಮಗಳನ್ನು ನಾಳೆಯೊಳಗೆ (ಏಪ್ರಿಲ್ 23) ತಿಳಿಸಬೇಕೆಂದು, ಕಾರ್ಯಪಾಲನಾ ವರದಿ ಸಲ್ಲಿಸಬೇಕೆಂದು ಸೂಚಿಸಿತ್ತು. ಒಂದು ವೇಳೆ ಚುನಾವಣಾ ಆಯೋಗವು ಈ ಸಂಬಂಧ ಕ್ರಮ ತೆಗೆದುಕೊಳ್ಳಲು ವಿಫಲವಾದರೆ, ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ನ್ಯಾಯಮೂರ್ತಿಗಳು ಕಟುನುಡಿಗಳಲ್ಲಿ ಹೇಳಿದ್ದರು.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(According to the report West Bengal CM Mamata Banerjee likely move to supreme court against election commission after completion of election)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada