ಭಾರತೀಯರ ಬಗ್ಗೆ ಸ್ಯಾಮ್ ಪಿತ್ರೋಡಾ ಹೇಳಿಕೆ; ಕಾಂಗ್ರೆಸ್​​ನೊಂದಿಗಿನ ಮೈತ್ರಿ ಮುರಿದುಕೊಳ್ಳುತ್ತೀರಾ ಎಂದು ಸ್ಟಾಲಿನ್​​ಗೆ ಮೋದಿ ಸವಾಲು

ಕಾಂಗ್ರೆಸ್ ನವರಿಗೆ ಈಶಾನ್ಯದ ಜನರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಜನರು ಈ ರೀತಿಯ ಹೇಳಿಕೆಗಳನ್ನು ಸ್ವೀಕರಿಸುತ್ತಾರೆಯೇ? ನಾನು ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತೇನೆ - ಇದು ಸರಿಯೇ?. ತೆಲಂಗಾಣ ಮುಖ್ಯಮಂತ್ರಿ, ತಮಿಳು ಸಂಸ್ಕೃತಿಯ ಬಗ್ಗೆ ಮಾತನಾಡುವ ತಮಿಳುನಾಡು ಮುಖ್ಯಮಂತ್ರಿ, ತಮಿಳು ಸಂಸ್ಕೃತಿ ಮತ್ತು ಪರಂಪರೆಗಾಗಿ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿಯುವ ಧೈರ್ಯವಿದೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಕೇಳಿದ್ದಾರೆ.

ಭಾರತೀಯರ ಬಗ್ಗೆ ಸ್ಯಾಮ್ ಪಿತ್ರೋಡಾ ಹೇಳಿಕೆ; ಕಾಂಗ್ರೆಸ್​​ನೊಂದಿಗಿನ ಮೈತ್ರಿ ಮುರಿದುಕೊಳ್ಳುತ್ತೀರಾ ಎಂದು ಸ್ಟಾಲಿನ್​​ಗೆ ಮೋದಿ ಸವಾಲು
ನರೇಂದ್ರ ಮೋದಿ
Follow us
|

Updated on:May 08, 2024 | 7:12 PM

ದೆಹಲಿ ಮೇ 08 : ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಭಾರತದ ವೈವಿಧ್ಯತೆಯನ್ನು ವಿವರಿಸುವ ಸಂದರ್ಭದಲ್ಲಿ ಭಾರತದ ಪೂರ್ವದ ಜನರು ಚೀನಾದವರಂತೆ, ಪಶ್ಚಿಮದವರು ಅರಬ್​​ನವರಂತೆ, ಉತ್ತರ ಭಾರತದ ಜನರು ಬಿಳಿಯರಂತೆ ಮತ್ತು ದಕ್ಷಿಣ ಭಾರತೀಯರು ಆಫ್ರಿಕದವರಂತೆ (Africa) ಕಾಣುತ್ತಾರೆ. ಭಾರತದಂಥಾ ವೈವಿಧ್ಯಮ ದೇಶದಲ್ಲಿ ಮಾತ್ರ ಹೀಗೆ ಎಲ್ಲರನ್ನೂ ಒಟ್ಟಾಗಿ ಕಾಣಲು ಸಾಧ್ಯ ಎಂದು ಹೇಳಿದ್ದರು. ಭಾರತೀಯರ ತ್ವಚೆಯ ಬಣ್ಣದ ಬಗ್ಗೆ ಪಿತ್ರೋಡಾ ಮಾಡಿದ ಹೇಳಿಕೆಯನ್ನು ಬಿಜೆಪಿ (BJP) ಖಂಡಿಸಿದ್ದು, ಈ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಪಿತ್ರೋಡಾ ಅವರ ಹೇಳಿಕೆಯನ್ನು ಉಲ್ಲೇಖಿಸಿದಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಬುಧವಾರ) ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯನ್ನು ಗುರಿಯಾಗಿಸಿದ್ದಾರೆ.. ಈಗ ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದು ಸ್ಯಾಮ್ ಪಿತ್ರೋಡಾ ಹೇಳಿರುವುದರಿಂದ ಎಂಕೆ ಸ್ಟಾಲಿನ್ ಅವರು ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಕಡಿದುಕೊಳ್ಳುತ್ತಾರೆಯೇ ಎಂದು ಮೋದಿ ಸವಾಲು ಎಸೆದಿದ್ದಾರೆ. ಇತ್ತ ಮೋದಿ ಹೇಳಿಕೆಗೆ ಡಿಎಂಕೆ ಪ್ರತಿಕ್ರಿಯೆ ತ್ವರಿತ ಮತ್ತು ಸೂಕ್ಷ್ಮವಾಗಿತ್ತು. ಪಿತ್ರೋಡಾ ಅವರ ಹೇಳಿಕೆ “ಸ್ವೀಕಾರಾರ್ಹವಲ್ಲ” ಆದರೆ, ಅದು ಸಂಪೂರ್ಣವಾಗಿ ತಪ್ಪಾಗಿಲ್ಲ. ಈ ಹಿಂದೆ ಬಿಜೆಪಿ ಸಂಸದರೊಬ್ಬರು ಇದೇ ರೀತಿಯ ಹೇಳಿಕೆ ನೀಡಿದಾಗ ಪ್ರಧಾನಿ ಮೋದಿ ಯಾಕೆ ಮೌನವಾಗಿದ್ದರು ಎಂದು ಡಿಎಂಕೆ ಕೇಳಿದೆ.

ಪಿತ್ರಾರ್ಜಿತ ತೆರಿಗೆಯ ಕುರಿತಾದ ಕಾಮೆಂಟ್‌ಗಳೊಂದಿಗೆ ಇತ್ತೀಚೆಗೆ ಸುದ್ದಿಯಾಗಿದ್ದ ಪಿತ್ರೋಡಾ ಈಗ ವಿವಿಧತೆಯಲ್ಲಿ ದೇಶದ ಏಕತೆಯ ಬಗ್ಗೆ ಮಾತನಾಡಿದ್ದಾರೆ.

ದಿ ಸ್ಟೇಟ್ಸ್‌ಮನ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಪಿತ್ರೋಡಾ ಅವರು ಭಾರತ ವೈವಿಧ್ಯಮಯ ದೇಶ… ಅಲ್ಲಿ ಪೂರ್ವದ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್‌ರಂತೆ ಕಾಣುತ್ತಾರೆ, ಉತ್ತರದ ಜನರು ಬಹುಶಃ ಬಿಳಿಯಂತೆ ಕಾಣುತ್ತಾರೆ ಮತ್ತು ದಕ್ಷಿಣದ ಜನರು ಆಫ್ರಿಕಾದವರಂತೆ ಕಾಣುತ್ತಾರೆ ಎಂದಿದ್ದರು.

ಕೆಲವೇ ಗಂಟೆಗಳಲ್ಲಿ, ಆಂಧ್ರಪ್ರದೇಶದ ರಾಜಂಪೇಟೆಯಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಈ ಹೇಳಿಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್ ನವರಿಗೆ ಈಶಾನ್ಯದ ಜನರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಕಾಣುತ್ತಾರೆ ಜನರು ಈ ರೀತಿಯ ಹೇಳಿಕೆಗಳನ್ನು ಸ್ವೀಕರಿಸುತ್ತಾರೆಯೇ? ನಾನು ಸಿದ್ದರಾಮಯ್ಯನವರನ್ನು ಕೇಳಲು ಬಯಸುತ್ತೇನೆ – ಇದು ಸರಿಯೇ?. ತೆಲಂಗಾಣ ಮುಖ್ಯಮಂತ್ರಿ, ತಮಿಳು ಸಂಸ್ಕೃತಿಯ ಬಗ್ಗೆ ಮಾತನಾಡುವ ತಮಿಳುನಾಡು ಮುಖ್ಯಮಂತ್ರಿ, ತಮಿಳು ಸಂಸ್ಕೃತಿ ಮತ್ತು ಪರಂಪರೆಗಾಗಿ ಕಾಂಗ್ರೆಸ್ ಜೊತೆಗಿನ ಸಂಬಂಧವನ್ನು ಮುರಿಯುವ ಧೈರ್ಯವಿದೆಯೇ? ಎಂದು ಪ್ರಧಾನಿ ಮೋದಿ ಕೇಳಿದ್ದಾರೆ.

“ಕಾಂಗ್ರೆಸ್ ನಾಯಕರು ಒಡೆದು ಆಳುವ ಆಲೋಚನೆಗಳನ್ನು ಹೊಂದಿದ್ದಾರೆ. ದೇಶವನ್ನು ತುಂಡು ತುಂಡಾಗಿ ನೋಡುವುದು ಕಾಂಗ್ರೆಸ್ ಮನಸ್ಥಿತಿಯಾಗಿದೆ. ಈ ಕಾರಣಕ್ಕಾಗಿಯೇ ಕಾಂಗ್ರೆಸ್ ನಾಯಕರು ಇದನ್ನು ಒಂದೇ ದೇಶ ಎಂದು ಪರಿಗಣಿಸಲು ಮತ್ತು ವಿಭಜನೆಯ ಬಗ್ಗೆ ಮಾತನಾಡಲು ನಿರಾಕರಿಸುತ್ತಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

“ಸ್ಯಾಮ್ ಪಿತ್ರೋಡಾ ಅವರ ಪೂರ್ವಗ್ರಹ ಕಾಮೆಂಟ್‌ಗಳು ಸ್ವೀಕಾರಾರ್ಹವಲ್ಲ. ಆದರೆ ವೈವಿಧ್ಯತೆಯ ಕುರಿತಾದ ಅವರ ಮೂಲ ಪರಿಕಲ್ಪನೆಯು ತಪ್ಪಲ್ಲ. ಭಾರತವನ್ನು ರೂಪಿಸಲು ನಾವು ವಿವಿಧ ಜನಾಂಗೀಯ ಗುಂಪುಗಳಿಂದ ಒಂದಾಗಿದ್ದೇವೆ ಎಂಬುದು ಸತ್ಯ” ಎಂದು ಡಿಎಂಕೆ ವಕ್ತಾರ ಡಾ ಎಸ್‌ಎಎಸ್ ಹಫೀಜುಲ್ಲಾ ಹೇಳಿದ್ದಾರೆ. ಹಾಗಿದ್ದರೂ, “ಸ್ಯಾಮ್ ಪಿತ್ರೋಡಾ ಅವರು ಇಂಡಿಯಾ ಮೈತ್ರಿಕೂಟದಲ್ಲಿಲ್ಲ, ಇಂಡಿಯಾ ಒಕ್ಕೂಟದ ಮೇಲೆ ಇದು ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣ್ತಾರೆ: ಸ್ಯಾಮ್ ಪಿತ್ರೋಡಾ

“ಚರ್ಮದ ಬಣ್ಣದ ಆಧಾರದ ಮೇಲೆ ದೇಶವು ಅಗೌರವವನ್ನು ಸಹಿಸುವುದಿಲ್ಲ” ಎಂದು ಇಂದು ರಾಹುಲ್ ಗಾಂಧಿಯವರ ಮೇಲೆ ವಾಗ್ದಾಳಿ ಮಾಡಲು ಪಿತ್ರೋಡಾ ಅವರ ಹೇಳಿಕೆಯನ್ನು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

ಇತ್ತ ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್, “ಭಾರತದ ವೈವಿಧ್ಯತೆಯನ್ನು ವಿವರಿಸಲು ಶ ಸ್ಯಾಮ್ ಪಿತ್ರೋಡಾ ಅವರು ಪಾಡ್‌ಕ್ಯಾಸ್ಟ್‌ನಲ್ಲಿ ಚಿತ್ರಿಸಿದ ಸಾದೃಶ್ಯಗಳು ಅತ್ಯಂತ ದುರದೃಷ್ಟಕರ ಮತ್ತು ಸ್ವೀಕಾರಾರ್ಹವಲ್ಲ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈ ಹೇಳಿಕೆಗಳಿಂದ ಸಂಪೂರ್ಣವಾಗಿ ದೂರವಿರುತ್ತದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:11 pm, Wed, 8 May 24

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ