ಕರ್ನಾಟಕ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದ ಎಐಸಿಸಿ

|

Updated on: May 14, 2023 | 3:08 PM

ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ನಾಯಕ ಆಯ್ಕೆಗಾಗಿ ಎಐಸಿಸಿ ಮೂವರು ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗಾಗಿ ವೀಕ್ಷಕರನ್ನು ನೇಮಿಸಿ ಆದೇಶ ಹೊರಡಿಸಿದ ಎಐಸಿಸಿ
ಕಾಂಗ್ರೆಸ್​ ನಾಯಕರು
Follow us on

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುತಮ ಪಡೆದುಕೊಂಡಿದೆ. ಆದ್ರೆ, ಇದೀಗ ಮುಖ್ಯಮಂತ್ರಿ ಯಾರು ಆಗುತ್ತಾರೆ ಎನ್ನುವುದೇ ಕುತೂಹಲ ಮೂಡಿಸಿದೆ. ಒಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೊಂದೆಡೆ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯ ರೇಸ್​ನಲ್ಲಿದ್ದಾರೆ. ಹೀಗಾಗಿ ಸಿಎಂ ಆಯ್ಕೆಗಾಗಿ ಎಐಸಿಸಿ ,ಮೂವರು ವೀಕ್ಷಕರನ್ನು ನೇಮಿಸಿದೆ. ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: Karnataka Politics: ಕಾಂಗ್ರೆಸ್​ಗೆ ಗೆಲುವು, ಸಿಎಂ ಕುರ್ಚಿಗಾಗಿ ಪಕ್ಷದಲ್ಲಿ ಬಣ ರಾಜಕೀಯ ಶುರು

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ವೀಕ್ಷಕರಾಗಿ ಆಯ್ಕೆಯಾಗಿರುವ ಸುಶೀಲ್​ ಕುಮಾರ್ ಶಿಂಧೆ, ಜಿತೇಂದ್ರ ಸಿಂಗ್​ ಹಾಗೂ ದೀಪಕ್ ಬಬಾರಿಯಾ ಅವರು ಇಂದು(ಮೇ 14) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಭಾಗವಹಿಸಲಿದ್ದು, ಇವರ ಸಮ್ಮುಖದಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದೆ. ಈಗಾಗಲೇ ಸಿದ್ದರಾಮಯ್ಯನವರ ಬೆಂಬಲಿಗರು ಸಭೆ ಮಾಡಿದ್ದಾರೆ. ಇದರ ಬೆನ್ನಲೇ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವಂತೆ ಒಕ್ಕಲಿಗ ನಾಯಕರು ಮನವಿ ಮಾಡಿದ್ದು, ಈ ಬಗ್ಗೆ ಒಟ್ಟಾಗಿ ಒತ್ತಡ ಹೇರಲು ಇಂದು ಸಭೆ ಕರೆದಿದೆ. ಇವರಿಬ್ಬರ ಮಧ್ಯೆ ಡಾ.ಜಿ. ಪರಮೇಶ್ವರ್ ಅವರ ಹೆಸರು ತೇಲಿ ಬಂದಿದೆ. ಪರಮೇಶ್ವರ್ ಪರವಾಗಿ ದಲಿತ ನಾಯಕರು ಸಹ ಸಭೆ  ಮಾಡುವ ಮೂಲಕ ಸಂದೇಶ ರವಾನಿಸಿದ್ದಾರೆ.

ಒಟ್ಟಿನಲ್ಲಿ ಸಿಎಂ ಹುದ್ದೆಗೆ ಕಾಂಗ್ರೆಸ್​ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:13 pm, Sun, 14 May 23