AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ

All Party Alliance Wise Election Results 2026 and Winners LIVE Updates in Kannada; ಪಂಚ ರಾಜ್ಯ ಚುನಾವಣಾ ಮತ ಎಣಿಕೆ ಮುಗಿದಿದ್ದು, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಕೂಡ ಜಯ ಗಳಿಸಿದೆ. ಕೇರಳದಲ್ಲಿ ಯುಡಿಎಫ್ 89 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

Party Wise Election Results 2026 Winners LIVE: ಪಂಚ ರಾಜ್ಯ ಚುನಾವಣಾ ಫಲಿತಾಂಶ; ಎಲ್ಲಿ ಹೇಗಿದೆ ಸ್ಥಿತಿ? ಇಲ್ಲಿದೆ ವಿವರ
ಪಂಚ ರಾಜ್ಯ ಚುನಾವಣಾ ಫಲಿತಾಂಶImage Credit source: tv9
ಗಣಪತಿ ಶರ್ಮಾ
| Edited By: |

Updated on:May 04, 2026 | 11:00 PM

Share

ನವದೆಹಲಿ, ಮೇ 4: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ (Assembly Election Results 2026) ಹೊರಬಿದ್ದಿದ್ದು, ಹಲವು ವರ್ಷಗಳ ಸತತ ಪರಿಶ್ರಮದ ನಂತರ ಕೊನೆಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಅಸ್ಸಾಂ ಮತ್ತು ಪುದುಚೇರಿಯಲ್ಲೂ ಕಮಲ ಅರಳಿದೆ. ಕೇರಳದಲ್ಲಿ ಎಲ್‌ಡಿಎಫ್ ಮಣಿಸಿ ಮತ್ತೆ ಯುಡಿಎಫ್ ಅಧಿಕಾರಕ್ಕೆ ಏರಲು ಕ್ಷಣಗಣನೆ ಆರಂಭಿಸಿದೆ. ತಮಿಳುನಾಡಿನಲ್ಲಿ ನಟ ದಳಪತಿ ವಿಜಯ ನೇತೃತ್ವದ ಟಿವಿಕೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಚಳವಾಗಿದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಸ್ಥಿತಿಗತಿ ಇಲ್ಲಿದೆ.

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ

294 ಕ್ಷೇತ್ರಗಳಿರುವ ಪಶ್ಚಿಮ ಬಂಗಾಳದಲ್ಲಿ 293 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಹುಮತಕ್ಕೆ 148 ಸ್ಥಾನಗಳ ಅಗತ್ಯವಿದೆ. ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಬಹುತೇಕ ಬಹುಮತ ಪಡೆದುಕೊಂಡಿದೆ. ರಾತ್ರಿ 10 ಗಂಟೆಗೆ ವೇಳೆಗೆ ಬಿಜೆಪಿ 206 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಆಡಳಿತಾರೂಢ ಟಿಎಂಸಿ 80 ಕ್ಷೇತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ. ಇನ್ನು ಕಾಂಗ್ರೆಸ್ 2 ಹಾಗೂ ಪಕ್ಷೇತರರು 5 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.

ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವಿನ ನಿಕಟ ಸ್ಪರ್ಧೆಯ ನಡುವೆಯೂ, ಕಾಂಗ್ರೆಸ್ ಪಕ್ಷವು ಮುನ್ನಡೆಯ ವಿಷಯದಲ್ಲಿ ತನ್ನ ಖಾತೆ ತೆರೆದಿದೆ. 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಅಸ್ಸಾಂ ಚುನಾವಣೆ ಫಲಿತಾಂಶ

126 ಕ್ಷೇತ್ರಗಳಿರುವ ಅಸ್ಸಾಂನಲ್ಲಿ ಬಹುಮತಕ್ಕೆ 64 ಸ್ಥಾನಗಳ ಅಗತ್ಯವಿದೆ. ಅಸ್ಸಾಂನಲ್ಲೂ ಕಮಲ ಅರಳಿದೆ. ರಾತ್ರಿ 10 ಗಂಟೆಗೆ ವೇಳೆಗೆ ಬಿಜೆಪಿ 103 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಮತ್ತು ಎಐಯುಡಿಎಫ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪುದುಚೇರಿ ಚುನಾವಣೆ ಫಲಿತಾಂಶ

30 ಕ್ಷೇತ್ರಗಳಿರುವ ಪುದುಚೇರಿಯಲ್ಲಿ ಬಹುಮತಕ್ಕೆ 16 ಸ್ಥಾನಗಳ ಅಗತ್ಯವಿದೆ. ಪುದುಚೇರಿಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದೆ. ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 6, ಟಿವಿಕೆ 3 ಹಾಗೂ ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಕೇರಳ ಚುನಾವಣೆ ಫಲಿತಾಂಶ

140 ಕ್ಷೇತ್ರಗಳಿರುವ ಕೇರಳದಲ್ಲಿ ಬಹುಮತಕ್ಕೆ 71 ಸ್ಥಾನಗಳ ಅಗತ್ಯವಿದೆ. ರಾತ್ರಿ 10 ಗಂಟೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ 89 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಆಡಳಿತಾರೂಢ ಎಲ್​​ಡಿಎಫ್ 35 ಕ್ಷೇತ್ರಗಳಲ್ಲಷ್ಟೇ ಮುನ್ನಡೆಯಲ್ಲಿದೆ. ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತರರು 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಕೇರಳದಲ್ಲಿ ಎಲ್​ಡಿಎಫ್ ಅಧಿಕಾರ ಕಳೆದುಕೊಳ್ಳುವ ಹಾದಿಯಲ್ಲಿದ್ದು, ಅಂತಿಮವಾಗಿ ಸೋಲೊಪ್ಪಿಕೊಂಡಲ್ಲಿ ಭಾರತದಿಂದ ಕಮ್ಯೂನಿಸ್ಟ್ ಪಕ್ಷದ ಆಡಳಿತ ಸಂಪೂರ್ಣ ನಿರ್ಮೂಲನೆಯಾದಂತಾಗಲಿದೆ.

ತಮಿಳುನಾಡು ಚುನಾವಣೆ ಫಲಿತಾಂಶ

234 ಕ್ಷೇತ್ರಗಳಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಗೆಲುವು ಸಾಧಿಸಿದೆ. ಸದ್ಯದ ಮಾಹಿತಿ ಪ್ರಕಾರ ಟಿವಿಕೆ 106 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಡಿಎಂಕೆ 73, ಎಐಎಡಿಎಂಕೆ 50 ಕ್ಷೇತ್ರಗಳು ಮತ್ತು ಇತರರು 05 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Mon, 4 May 26

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ