ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಫೆ. 23ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಫೆ. 23ರಂದು ದೆಹಲಿಯಿಂದ ಬಳ್ಳಾರಿ ಹಾಗೂ ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಶಾ, ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದ ಬಳಿಕ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಬಳಿಕ ಬಳ್ಳಾರಿಯಿಂದ ಬೆಂಗಳೂರಿಗೆ ಆಗಮಿಸಲಿದ್ದು, ಫೆ. 23ರ ಸಂಜೆ 6ಕ್ಕೆ ಟೌನ್ಹಾಲ್ನಲ್ಲಿ ನಡೆಯಲಿರುವ ಪ್ರಬುದ್ಧರ ಚರ್ಚಾ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ 8 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರ ಜೊತೆ ಶಾ ಸಭೆ ನಡೆಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು (ಫೆ.20) ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದು, ನಂತರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ಇದನ್ನೂ ಓದಿ: ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು: ಫೆ. 27ರಂದು ಬೆಳಗಾವಿಗೆ ಭೇಟಿ
ನಡ್ಡಾ 20 ವರ್ಷಗಳ ಬಳಿಕ ಕಾಫಿನಾಡು (ಫೆ. 21) ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ ಜರಗುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬಿಜೆಪಿ ಭದ್ರಕೋಟೆ ಚಿಕ್ಕಮಗಳೂರು ಜಿಲ್ಲೆಯಲ್ಲಿ, ಎರಡು ದಿನಗಳ ಕಾಲ ಇದ್ದು, ಚುನಾವಣಾ ರಣತಂತ್ರ ರೂಪಿಸಲಿದ್ದಾರೆ. ಸಂಜೆ 4.15ಕ್ಕೆ ಹರಿಹರಪುರ ಹೆಲಿಪ್ಯಾಡ್ಗೆ ನಡ್ಡಾ ಆಗಮಿಸಲಿದ್ದು, 4.30 ರಿಂದ 6 ಗಂಟೆವರೆಗು ಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ಅಡಿಕೆ ಸಮಾವೇಶದ ಭಾಗವಾಗುತ್ತಾರೆ. 6.30ಕ್ಕೆ ಕೊಪ್ಪದಿಂದ ಕಾರಿನಲ್ಲಿ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, 6.30ರಿಂದ 7.15ರವರೆಗೆ ಶೃಂಗೇರಿ ಶ್ರೀಗಳ ಜೊತೆ ಸಮಯ ಮೀಸಲಿರಿಸಲಾಗಿದೆ.
ಇನ್ನು ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ.
ಇದನ್ನೂ ಓದಿ: Karnataka Political News Live: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಜೆಪಿ ನಡ್ಡಾ
ಮದ್ಯಾಹ್ನ 2 ಗಂಟೆಗೆ ಆಗಮಿಸಿ 3.30ರ ವರೆಗೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯಿಂದ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣವನ್ನು ಬೆಳಗಾವಿಯಿಂದಲೇ ಬಿಡುಗಡೆ ಮಾಡಲಿದ್ದಾರೆ. ನಂತರ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ಬಿಜೆಪಿ ಮಾಸ್ಟರ್ ಪ್ಲ್ಯಾನ್
ಸಾವಗಾಂವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಜಾಗ ಪರಿಶೀಲನೆ ಮಾಡಿದ್ದು, ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ಬಳಿಕ ಸಮಾವೇಶ ಸ್ಥಳ ನಿಗದಿ ಮಾಡಲಾಗುತ್ತದೆ. ಜಿಲ್ಲೆಯ 18 ಕ್ಷೇತ್ರಗಳಿಂದ 3 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಆ ಮೂಲಕ ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.