AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಸುನಾಮಿ; ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ

2026ರ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಭರ್ಜರಿ ಜಯ ಸಾಧಿಸಿದೆ. ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಸ್ಟಾಲಿನ್ ಆಡಳಿತವನ್ನು ಅಂತ್ಯಗೊಳಿಸಿ ಇತಿಹಾಸ ಸೃಷ್ಟಿಸಿದೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಧಿಕಾರಕ್ಕೆ ಮರಳಿದ್ದು, ಪಿಣರಾಯಿ ವಿಜಯನ್ ಸೋಲೊಪ್ಪಿಕೊಂಡಿದ್ದಾರೆ. ಫಲಿತಾಂಶದ ಪೂರ್ಣ ವಿವರ ಇಲ್ಲಿದೆ.

ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಸುನಾಮಿ; ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಧಾನಿ ಮೋದಿ ಹಾಗೂ ವಿಜಯ್Image Credit source: PTI
ಗಣಪತಿ ಶರ್ಮಾ
|

Updated on: May 05, 2026 | 7:00 AM

Share

ನವದೆಹಲಿ, ಮೇ 5: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ (Assembly Election Results 2026) ಪ್ರಕಟವಾಗಿದ್ದು, ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತ್ಯ ಹಾಡಿರುವ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಇತ್ತ ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಭದ್ರಕೋಟೆಯನ್ನು ಪುಡಿಗಟ್ಟುವ ಮೂಲಕ ಇತಿಹಾಸ ನಿರ್ಮಿಸಿದೆ.

ಪಶ್ಚಿಮ ಬಂಗಾಳ: ದೀದಿ ಕೋಟೆ ಧೂಳೀಪಟ

ಬಂಗಾಳದ ರಣಕಣದಲ್ಲಿ ಮೋದಿ-ಶಾ ಜೋಡಿಯ ತಂತ್ರಗಾರಿಕೆಗೆ ಮಮತಾ ಬ್ಯಾನರ್ಜಿ ಸೋತು ಸುಣ್ಣವಾಗಿದ್ದಾರೆ. ಒಟ್ಟು 293 ಸ್ಥಾನಗಳಲ್ಲಿ ಬಿಜೆಪಿ 206 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದ್ವಿಶತಕ ಬಾರಿಸಿದೆ. ಆಡಳಿತಾರೂಢ ಟಿಎಂಸಿ ಕೇವಲ 81 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವ ಮೂಲಕ ಅಧಿಕಾರ ಕಳೆದುಕೊಂಡಿದೆ.

  • ಒಟ್ಟು ಸ್ಥಾನಗಳು: 293
  • ಬಿಜೆಪಿ: 206 ಸ್ಥಾನಗಳು (ಸ್ಪಷ್ಟ ಬಹುಮತ)
  • ಟಿಎಂಸಿ: 81 ಸ್ಥಾನಗಳು
  • ಕಾಂಗ್ರೆಸ್: 02 ಸ್ಥಾನಗಳು
  • ಇತರೆ: 03 ಸ್ಥಾನಗಳು
  • ವಿಶೇಷ: ಮುಖ್ಯಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರಿಗೆ ಸೋಲು ಎದುರಾಗಿದೆ.

ತಮಿಳುನಾಡು: ದಳಪತಿ ವಿಜಯ್ ಆರ್ಭಟ

ದ್ರಾವಿಡ ನಾಡಿನಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಸುಂಟರಗಾಳಿ ಎಬ್ಬಿಸಿದೆ. 234 ಕ್ಷೇತ್ರಗಳ ಪೈಕಿ ಟಿವಿಕೆ 107 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಬಾಬು ವಿರುದ್ಧ ಸೋಲೊಪ್ಪಿಕೊಂಡಿರುವುದು ಡಿಎಂಕೆ ಪಾಲಿಗೆ ಭಾರಿ ಹಿನ್ನಡೆಯಾಗಿದೆ.

  • ಒಟ್ಟು ಸ್ಥಾನಗಳು: 234
  • ಟಿವಿಕೆ (ವಿಜಯ್): 107 ಸ್ಥಾನಗಳು
  • ಡಿಎಂಕೆ: 60 ಸ್ಥಾನಗಳು
  • AIADMK: 47 ಸ್ಥಾನಗಳು
  • ಕಾಂಗ್ರೆಸ್: 05 ಸ್ಥಾನಗಳು
  • ಇತರೆ: 04 ಸ್ಥಾನಗಳು
  • ವಿಶೇಷ: ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಕೊಳತ್ತೂರು ಕ್ಷೇತ್ರದಲ್ಲಿ ಸೋಲಿನ ಆಘಾತವಾಗಿದೆ.

ಕೇರಳದಲ್ಲಿ ಕಾಂಗ್ರೆಸ್‌ ಜಯಭೇರಿ: ಎಲ್​ಡಿಎಫ್​ನ 21 ಸಚಿವರಿಗೇ ಸೋಲು!

ಕೇರಳದಲ್ಲಿ ಪಿಣರಾಯಿ ವಿಜಯನ್ ನೇತೃತ್ವದ ಎಲ್​ಡಿಎಫ್ ಆಡಳಿತಕ್ಕೆ ಮತದಾರರು ಬ್ರೇಕ್ ಹಾಕಿದ್ದಾರೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 102 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿದೆ.

  • ಒಟ್ಟು ಸ್ಥಾನಗಳು: 140
  • ಯುಡಿಎಫ್ (ಕಾಂಗ್ರೆಸ್ ಮೈತ್ರಿ): 102 ಸ್ಥಾನಗಳು
  • ಎಲ್​ಡಿಎಫ್ (ಎಡಪಕ್ಷಗಳು): 35 ಸ್ಥಾನಗಳು
  • ಎನ್​ಡಿಎ (ಬಿಜೆಪಿ ಮೈತ್ರಿ): 03 ಸ್ಥಾನಗಳು
  • ವಿಶೇಷ: ಕೇರಳ ಸಂಪುಟದ 21 ಸಚಿವರಿಗೆ ಈ ಚುನಾವಣೆಯಲ್ಲಿ ಸೋಲಾಗಿದೆ.

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್

ಅಸ್ಸಾಂನಲ್ಲಿ ಸಿಎಂ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ದಾಖಲಿಸಿದೆ. 126 ಕ್ಷೇತ್ರಗಳ ಪೈಕಿ ಬಿಜೆಪಿ 82 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

  • ಒಟ್ಟು ಸ್ಥಾನಗಳು: 126
  • ಬಿಜೆಪಿ: 82 ಸ್ಥಾನಗಳು
  • ಕಾಂಗ್ರೆಸ್: 19 ಸ್ಥಾನಗಳು
  • ಇತರೆ: 22 ಸ್ಥಾನಗಳು

ಪುದುಚೇರಿಯಲ್ಲಿ ಎನ್​ಡಿಎಗೆ ಮತ್ತೆ ಅಧಿಕಾರ

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಎನ್​ಡಿಎ ಮಿತ್ರಕೂಟ 16 ಸ್ಥಾನಗಳೊಂದಿಗೆ ಮತ್ತೆ ಅಧಿಕಾರ ಹಿಡಿದಿದೆ.

  • ಒಟ್ಟು ಸ್ಥಾನಗಳು: 30
  • ಬಿಜೆಪಿ+ (ಎನ್​ಡಿಎ): 16 ಸ್ಥಾನಗಳು
  • ಡಿಎಂಕೆ: 05 ಸ್ಥಾನಗಳು
  • ಕಾಂಗ್ರೆಸ್: 03 ಸ್ಥಾನಗಳು
  • ಟಿವಿಕೆ: 02 ಸ್ಥಾನಗಳು

ಚುನಾವಣಾ ಫಲಿತಾಂಶದ ಹೈಲೈಟ್ಸ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!