Telangana, Madhya Pradesh, Rajasthan, Chhattisgarh Election Results 2023 Highlights: ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದಿರುವ, ಇಡೀ ದೇಶವೇ ಎದುರು ನೋಡುತ್ತಿರುವ ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. 5 ರಾಜ್ಯಗಳ ಪೈಕಿ ಇಂದು ಕೇವಲ ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಬಹಿರಂಗವಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದ್ದು ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ತನ್ನ ಬಾವುಟ ಹಾರಿಸಿದೆ. ಮಿಜೋರಾಂನಲ್ಲಿ ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಾನುವಾರ ಕ್ರೈಸ್ತರಿಗೆ ವಿಶೇಷ ದಿನವಾಗಿದ್ದು, ಪ್ರಾರ್ಥನೆ ಸಲ್ಲಿಸುತ್ತಾರೆ. ಹೀಗಾಗಿ ಕ್ರೈಸ್ತ ಸಮುದಾಯದವರ ಮನವಿ ಮೇರೆಗೆ ನಾಳೆಗೆ ಮತ ಎಣಿಕೆ ಮುಂದೂಡಲಾಗಿದೆ.
ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿಗೆ ಟ್ವೀಟ್ ಮೂಲಕ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಶುಭಾಶಯ ಕೋರಿದ್ದಾರೆ. ಬಿಜೆಪಿಯ ಎಲ್ಲ ನಾಯಕರಿಗೆ ಅಭಿನಂದನೆಗಳು ಹಾಗೂ ಶುಭಾಶಯ ತಿಳಿಸಿದ್ದಾರೆ.
ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ @BJP4India ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.
ಪ್ರಧಾನಿಗಳಾದ ಶ್ರೀ @narendramodi ಅವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ವಿಜಯ ಪತಾಕೆ ಹಾರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2023
ಪಕ್ಷಕ್ಕಿಂತ ದೇಶ ದೊಡ್ಡದು. ಚುನಾವಣೆಯಲ್ಲಿ ಗೆದ್ದ ಪಕ್ಷದ ಕಾರ್ಯಕರ್ತರು, ಮುಖಂಡರು, ನಾಯಕರಿಗೂ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ತೆಲಂಗಾಣದಲ್ಲಿ ಈ ಬಾರಿ ಬಿಜೆಪಿ ಉತ್ತಮ ಗೆಲುವು ಸಾಧಿಸಿದೆ. ತಾಯಂದಿರು, ಯುವಕರು, ಬಡವರು ಒಳ್ಳೆ ನಿರ್ಣಯ ತೆಗೆದುಕೊಂಡಿದ್ದಾರೆ. ಅವರಿಗೆ ನನ್ನ ಮನಪೂರ್ವಕ ನಮಸ್ಕಾರಗಳು. ದೇಶದಲ್ಲಿ ನನ್ನ ಪ್ರಕಾರ 4 ಜಾತಿಗಳು ಮಾತ್ರ ದೊಡ್ಡದಾಗಿವೆ. ಮಹಿಳಾ ಶಕ್ತಿ, ಯುವಶಕ್ತಿ, ರೈತರು, ಹಾಗೂ ಬಡವರ್ಗ. ಈ ನಾಲ್ಕು ಜಾತಿಗಳ ಸಶಕ್ತಿಕರಣದಿಂದ ದೇಶ ಅಭಿವೃದ್ಧಿ ಹೊಂದಲಿದೆ.
ಇಂದಿನ 3 ರಾಜ್ಯಗಳ ಗೆಲುವು 2024ರ ಹ್ಯಾಟ್ರಿಕ್ ಗೆಲುವಿನ ದಿಕ್ಸೂಚಿ: ಪ್ರಧಾನಿ ಮೋದಿ
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 4 ರಾಜ್ಯಗಳ ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಕಚೇರಿಗೆ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ.
4 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 3 ರಾಜ್ಯಗಳಲ್ಲಿ ಜಯ ಸಾಧಿಸಿದೆ. 3 ರಾಜ್ಯಗಳ ಮತದಾರರ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ತೆಲಂಗಾಣದ ಜನರಿಗೆ ಧನ್ಯವಾದ ತಿಳಿಸಿದ್ದಾರೆ.
मध्य प्रदेश, छत्तीसगढ़ और राजस्थान का जनादेश हम विनम्रतापूर्वक स्वीकार करते हैं - विचारधारा की लड़ाई जारी रहेगी।
तेलंगाना के लोगों को मेरा बहुत धन्यवाद - प्रजालु तेलंगाना बनाने का वादा हम ज़रूर पूरा करेंगे।
सभी कार्यकर्ताओं को उनकी मेहनत और समर्थन के लिए दिल से शुक्रिया।
— Rahul Gandhi (@RahulGandhi) December 3, 2023
ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸೋಲು ಉಂಟಾಗಿದೆ. ಮತದಾರರು ನೀಡಿದ ತೀರ್ಪನ್ನು ಗೌರವದಿಂದ ಸ್ವೀಕರಿಸುತ್ತೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಾಧಿಸಿದೆ. ತೆಲಂಗಾಣ ರಾಜ್ಯಪಾಲರಿಗೆ ಕೆ.ಚಂದ್ರಶೇಖರ್ ರಾವ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಸ್ವಂತ ಕಾರಿನಲ್ಲಿ ರಾಜಭವನಕ್ಕೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ರಾಜಸ್ಥಾನದ ಟೋಂಕ್ ಕ್ಷೇತ್ರದಲ್ಲಿ ಸಚಿನ್ ಪೈಲಟ್ಗೆ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಫಲಿತಾಂಶ ಸಾಕಷ್ಟು ನಿರಾಸೆ ತಂದಿದೆ ಎಂದು ಸಿಎಂ ಕೆಸಿಆರ್ ಪುತ್ರ, ಸಚಿವ ಕೆ.ಟಿ.ರಾಮರಾವ್ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದು, ನಮಗೆ 2 ಬಾರಿ ಅಧಿಕಾರ ನೀಡಿದ ತೆಲಂಗಾಣ ಜನತೆಗೆ ಧನ್ಯವಾದ. ಈ ಸೋಲಿನಿಂದ ಪಾಠ ಕಲಿತು ಮತ್ತೆ ಪಕ್ಷವನ್ನು ಸಂಘಟಿಸುತ್ತೇವೆ ಎಂದು ಹೇಳಿದ್ದಾರೆ.
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ. ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ ವೆಂಕಟರೆಡ್ಡಿ
ಬಂಡಿ ಸಂಜಯ್ ಜಯ ಆಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂವರು ಸಂಸದರಿಗೆ ಜಯ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರು ಸಂಸದರಿಗೆ ಸೋಲು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ. ಜನರು ಬದಲಾವಣೆ ಮಾಡ್ತಾರೆಂಬ ವಿಶ್ವಾಸ ಇದೆ ಎಂದರು.
ತೆಲಂಗಾಣದ ವೇಮುಲವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆದಿಶ್ರೀನಿವಾಸ್ಗೆ ಜಯ
ದುಬ್ಬಾಕ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ಕೊತ್ತಾ ಪ್ರಭಾಕರ ರೆಡ್ಡಿಗೆ ಜಯ
ಆಂದೋಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ದಾಮೋದರ ರಾಜನರಸಿಂಹಗೆ ಜಯ
ಭದ್ರಾಚಲಂ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ತಲ್ಲಂ ವೆಂಕಟರಾವ್ಗೆ ಜಯ
ನಲ್ಗೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊಮಟಿರೆಡ್ಡಿ ವೆಂಕಟರೆಡ್ಡಿಗೆ ಜಯ
ಯಲ್ಲಾರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮದನ್ ಮೋಹನ್ಗೆ ಜಯ
ಬಾಲ್ಕೊಂಡ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ಪ್ರಶಾಂತ್ ರೆಡ್ಡಿಗೆ ಜಯ
ಬಾನ್ಸುವಾಡ ಕ್ಷೇತ್ರದಲ್ಲಿ ಬಿಆರ್ಎಸ್ ಅಭ್ಯರ್ಥಿ ಪೋಚಾರಮ್ಗೆ ಜಯ
ಚನ್ನೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿವೇಕ್ ವೆಂಕಟಸ್ವಾಮಿಗೆ ಜಯ
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಟಿವಿ9ಗೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ ವರ್ಕ್ ಆಗಿ ಕೆಲಸ ಮಾಡಿದ್ದೇವೆ. ಎಐಎಂಐಎಂ ಪಕ್ಷ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯತೆ ಹೊಂದಿಲ್ಲ. ತೆಲಂಗಾಣದಲ್ಲಿ ನಗರ ಪ್ರದೇಶದಲ್ಲಿ ಮಾತ್ರ ಅದು ಪ್ರಬಲವಾಗಿದೆ. ನಮ್ಮ ಪ್ರಯತ್ನ ಮಾಡಿದ್ದೇವೆ, ಜನರು ತೀರ್ಮಾನ ಮಾಡಿದ್ದಾರೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ್ದಲ್ಲಿ ನಾವು ಸೋತಿದ್ದೇವೆ ಎಂದರು.
ಕೊಡಂಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೇವಂತ್ ರೆಡ್ಡಿಗೆ ಜಯ. ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ರೇವಂತ್ 32,800 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
#WATCH | Telangana Congress President Revanth Reddy greets party workers celebrating the party's lead in the state elections pic.twitter.com/Bx2Q5ENh0s
— ANI (@ANI) December 3, 2023
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ್ ಸೇರಿ 3 ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನುಗ್ಗಿದೆ.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಜಯ ಸಾಧಿಸಿದೆ. ಉತ್ತರ ಭಾರತದ ಜನತೆ ನರೇಂದ್ರ ಮೋದಿ ಕೈಬಲಪಡಿಸಿದ್ದಾರೆ ಎಂದು ನವದೆಹಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನರೇಂದ್ರ ಮೋದಿಯನ್ನು ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. 2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗ್ತಾರೆ. ನರೇಂದ್ರ ಮೋದಿಯವರ ನಾಯಕತ್ವಕ್ಕೆ ಜನಬೆಂಬಲ ಸಿಗುತ್ತಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಬಲಪಡಿಸಬೇಕಿದೆ ಎಂದರು.
ತೆಲಂಗಾಣದಲ್ಲಿ ಮತದಾರರು ಬದಲಾವಣೆ ಬಯಸಿದ್ದಾರೆ. ಅನೇಕ ರಾಜ್ಯಗಳಿಂದ ನಾಯಕರು ಬಂದು ನಮ್ಮ ಶಾಸಕರನ್ನು ಕರೆದುಕೊಂಡು ಬರುವ ಕೆಲಸ ಮಾಡಿದ್ದಾರೆ. ತೆಲಂಗಾಣದ ಜನರು ಪ್ರತ್ಯೇಕ ರಾಜ್ಯ ಕೊಟ್ಟಿದ್ದಕ್ಕೆ ಗೆಲ್ಲಿಸಿದ್ದಾರೆ. ಸೋನಿಯಾ ಗಾಂಧಿಗೆ ಕೃತಜ್ಞತೆಯಾಗಿ ಕಾಂಗ್ರೆಸ್ ಗೆಲ್ಲಿಸಿದ್ದಾರೆ ಎಂದು ಹೈದರಾಬಾದ್ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೇಶದಲ್ಲಿ ಬಿಜೆಪಿಯ ಪರ ವಾತಾವರಣ ಇದೆ ಎಂದು ದೆಹಲಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕೆಂದು ಜನ ಬಯಸಿದ್ದಾರೆ. ಸುನಾಮಿ ರೀತಿ ಭಾರತೀಯ ಜನತಾ ಪಾರ್ಟಿಯ ಅಲೆ ಎದ್ದಿದೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಬಹುಮತ ಪಡೆಯುತ್ತೆ. ದೇಶದ ಜನರು ದೇಶದ ರಕ್ಷಣೆಯ ಗ್ಯಾರಂಟಿ ಬಯಸುತ್ತಿದ್ದಾರೆ. ಅಧಿಕಾರವನ್ನು ಕಬಳಿಸುವ ಗ್ಯಾರಂಟಿಯನ್ನು ಜನರು ಬಯಸುತ್ತಿಲ್ಲ. ಗ್ಯಾರಂಟಿ ಆಮಿಷವೊಡ್ಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಇದರಿಂದ ರಾಜ್ಯದ ಜನರು ಪಶ್ಚಾತ್ತಾಪಪಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರು.
ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಈ ಹಿಂದೆ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಈಗ ರಾಜಸ್ಥಾನದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಈ ಫಲಿತಾಂಶ ಕಾಂಗ್ರೆಸ್ ಧೂಳೀಪಟ ಮಾಡುವುದಕ್ಕೆ ನಾಂದಿ ಹಾಡುತ್ತೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ತೆಲಂಗಾಣದಲ್ಲಿ ಬಿಆರ್ಎಸ್ನಿಂದ ಆಪರೇಷನ್ ಭೀತಿ ಹಿನ್ನೆಲೆ ಕರ್ನಾಟಕದಲ್ಲಿ ಕಾಂಗ್ರೆಸ್ನಿಂದ 17 ಜನರನ್ನು ಯಾರು ಕಳಿಸಿದರು? ಎಂದು ದೆಹಲಿಯಲ್ಲಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯಗೆ ಕುಮಾರಸ್ವಾಮಿ ಕುಟುಂಬ ಕಂಡರೆ ದ್ವೇಷ ಇದೆ. ಈ ಹಿಂದೆ ಕಾಂಗ್ರೆಸ್ನವರೇ ಶಾಸಕರನ್ನು ಕಳುಹಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ನಿಂದ ಜ್ಯೋತಿರಾದಿತ್ಯ ಏಕೆ ಬಂದರು. ಕಾಂಗ್ರೆಸ್ನಲ್ಲೇ ಆಂತರಿಕ ಸಮಸ್ಯೆ ಇದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ 6 ತಿಂಗಳಲ್ಲೇ ಜಗಳವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರಿ ಮುನ್ನಡೆಯಲ್ಲಿದೆ. ಹೀಗಾಗಿ ಮಧ್ಯಪ್ರದೇಶದ ಭೋಪಾಲ್ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವ ಸಿಂಧಿಯಾ ಸೇರಿದಂತೆ ಮಧ್ಯಪ್ರದೇಶ ಬಿಜೆಪಿ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರು 2 ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕಾಮರೆಡ್ಡಿ ಕ್ಷೇತ್ರದಲ್ಲಿ ಸಿಎಂ ಕೆಸಿಆರ್ ವಿರುದ್ಧ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ. ಕೊಡಂಗಲ್ ಕ್ಷೇತ್ರದಲ್ಲೂ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.
ರಾಜಸ್ಥಾನ ಬಿಜೆಪಿ ಚುನಾವಣಾ ಉಸ್ತುವಾರಿ ವಹಿಸಿದ್ದ ಪ್ರಹ್ಲಾದ್‌ಜೋಷಿ ಸುದ್ದಿಗೋಷ್ಠಿ ನಡೆಸಿದರು. ಕಾಂಗ್ರೆಸ್ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ. ತೆಲಂಗಾಣ ಬಿಟ್ಟು ಉಳಿದ ಕಡೆ ಕಾಂಗ್ರೆಸ್ ಪಕ್ಷ ನೆಲಕಚ್ಚಿದೆ. BRS ದುರಾಡಳಿತದ ಪರಿಣಾಮ ಕಾಂಗ್ರೆಸ್ ಗೆಲ್ಲುವಂತಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ದುರಾಡಳಿತ ಬಗ್ಗೆ ಜನರಿಗೆ ತಿಳಿಸಿದ್ದೆವು. ಬಿಜೆಪಿಯ ಹಿರಿಯ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದೆವು. ರಾಜಸ್ಥಾನದಲ್ಲಿ 124ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ತೇವೆ. ಮಧ್ಯಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆದಿನಾರಾಯಣ ಜಯ ಗಳಿಸಿದ್ದಾರೆ. ಅಶ್ವರಾವುಪೇಟ ಕ್ಷೇತ್ರದಲ್ಲಿ ಸುಮಾರು 28 ಸಾವಿರ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.
ತೆಲಂಗಾಣದಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ತೆಲಂಗಾಣ ಬಿಆರ್ಎಸ್ನ 6 ಸಚಿವರಿಗೆ ಭಾರಿ ಹಿನ್ನಡೆಯಾಗಿದೆ. ತೆಲಂಗಾಣ ಸಚಿವರಾದ ಎರಬೆಲ್ಲಿ, ಇಂದ್ರಕಿರಣ್ ರೆಡ್ಡಿ, ಕೊಪ್ಪುಲ ಈಶ್ವರ, ಪುವ್ವಾಡ ಅಜಯ್, ನಿರಂಜನ್ ರೆಡ್ಡಿ, ಪ್ರಶಾಂತ್ ರೆಡ್ಡಿಗೆ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಹಿನ್ನಡೆಯಾಗಿದೆ.2 ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿಯ ಈಟಲ ರಾಜೇಂದ್ರ ಹಿನ್ನಡೆಯಾಗಿದೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಖುಷಿಯಲ್ಲಿರುವ ಸಿಎಂ ಶಿವರಾಜ್ ಸಿಂಗ್ ಅವರು ಗಿಡ ನೆಡುವ ಮೂಲಕ ಸಂಭ್ರಮಿಸಿದ್ದಾರೆ.
#WATCH | Madhya Pradesh CM Shivraj Singh Chouhan plants a sapling in Smart Park, Bhopal pic.twitter.com/VmPZ3JTmP3
— ANI (@ANI) December 3, 2023
ಮಲ್ಲಿಕಾರ್ಜುನ ಖರ್ಗೆ ಅವರು ಡಿ.6ರಂದು ಸಂಜೆ 6 ಗಂಟೆಗೆ INDIA ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ಗೆ ಹಿನ್ನಡೆಯಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ಗೆ ಮುನ್ನಡೆ. ತೆಲಂಗಾಣದಲ್ಲಿ ಕಾಂಗ್ರೆಸ್ನ ಮೊಹಮ್ಮದ್ ಅಜರುದ್ದೀನ್ಗೆ ಮುನ್ನಡೆ.
ಛತ್ತೀಸ್ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 48 ಕ್ಷೇತ್ರಗಳಲ್ಲಿ ಬಿಜೆಪಿ, 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ.
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಮುನ್ನಡೆ ಸಿಕ್ಕಿದೆ. ಈ ಹಿನ್ನೆಲೆ ಮಧ್ಯಪ್ರದೇಶ ಜನತೆಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಧನ್ಯವಾದ ತಿಳಿಸಿದರು. ನಮ್ಮ ಜನಪರ ಕೆಲಸಗಳಿಗೆ ಮಧ್ಯಪ್ರದೇಶ ಜನರು ಮನ್ನಣೆ ನೀಡಿದ್ದಾರೆ ಎಂದರು.
ಎಲ್ಲಾ ಕಡೆಯೂ ಬಿಜೆಪಿ ತನ್ನ ಅಸ್ತಿತ್ವವನ್ನು ಜಾಸ್ತಿ ಮಾಡಿಕೊಳ್ಳುತ್ತಿದೆ. ಎರಡು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ ಎಂದು ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು. ತೆಲಂಗಾಣದಲ್ಲಿ ಕಾಂಗ್ರೆಸ್ಸಿಗರು ರೆಸಾರ್ಟ್ ರಾಜಕಾರಣಕ್ಕೆ ಹೋಗಿದ್ದಾರೆ. ಕಾಂಗ್ರೆಸ್ನ ಗ್ಯಾರಂಟಿಗಳೆಲ್ಲ ಠುಸ್ ಪಟಾಕಿ ಆಗಿವೆ. ಕಾಂಗ್ರೆಸ್ ಧೂಳೀಪಟವಾಗುವ ಹಾದಿಯಲ್ಲಿದೆ ಎಂದರು.
ಮಧ್ಯಪ್ರದೇಶದಲ್ಲಿ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ ಹಿನ್ನೆಲೆ ಸಿಎಂ ಶಿವರಾಜ್ ಸಿಂಗ್ ನಿವಾಸಕ್ಕೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯ ಭೇಟಿ ನೀಡಿದ್ದಾರೆ.
4 ರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಹಿನ್ನೆಲೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಜೆ 5ಕ್ಕೆ ಭಾಷಣ ಮಾಡಲಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಬಿಜೆಪಿ, ತೆಲಂಗಾಣದಲ್ಲಿ ಕಾಂಗ್ರೆಸ್; ಛತ್ತೀಸ್‌ಗಢದಲ್ಲಿ ಕ್ಲೋಸ್ ಫೈಟ್
ಛತ್ತೀಸ್‌ಗಢದಲ್ಲಿ 23 ಸೀಟ್ಗಳ ಲೀಡ್ನಲ್ಲಿ ಬಿಜೆಪಿ ಇದ್ದು ಕಾಂಗ್ರೆಸ್ 18 ಸ್ಥಾನ ಪಡೆದಿದೆ.
ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭೋಪಾಲ್ನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದರು.
#WATCH | Bhopal | As BJP leads in #MadhyaPradeshElection2023, Union Minister & party leader Jyotiraditya Scindia says, "We knew that as far as Madhya Pradesh is concerned, given the public welfare schemes of our double engine government - people's blessings will be with us... I… pic.twitter.com/8fBf9hoNVh
— ANI (@ANI) December 3, 2023
ಮಧ್ಯಪ್ರದೇಶ ಸಿಎಂ, ಬುದ್ನಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಿಂಗ್ ಚೌಹಾಣ್ ಅವರು 13 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ.
ತೆಲಂಗಾಣದಲ್ಲಿ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದೆ. ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ನಿವಾಸದ ಬಳಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
#WATCH | Telangana | Firecrackers being burst outside the residence of state party chief Revanth Reddy in Hyderabad.
As per the latest official EC trends, Congress is leading on 10 seats, BRS on 6 and BJP on 1 in the state pic.twitter.com/n7dR3OX1pY
— ANI (@ANI) December 3, 2023
Update | Rajasthan elections: BJP leading on 71 seats, Congress-46, as per ECI. https://t.co/aXuA2tuJe8 pic.twitter.com/yvUfeMCPph
— ANI (@ANI) December 3, 2023
ಮಧ್ಯಪ್ರದೇಶದ ಛಿಂದ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಿಎಂ ಕಮಲ್ ನಾಥ್ಗೆ ಹಿನ್ನಡೆಯಾಗಿದೆ.
ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ ಸಿಕ್ಕಿದೆ. 230 ಕ್ಷೇತ್ರಗಳ ಪೈಕಿ 127 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 230 ಕ್ಷೇತ್ರಗಳ ಪೈಕಿ 100 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುಂದಿದೆ.
Telangana | Luxury buses have been stationed at Hyderabad's Taj Krishna. pic.twitter.com/1hJsAsfJrd
— ANI (@ANI) December 3, 2023
#WATCH | Bhopal, Madhya Pradesh: State BJP president VD Sharma says, "...I believe that the BJP will win the most seats till this date and create history... The development will be under the leadership of PM Modi..." pic.twitter.com/Gs3H4GKRho
— ANI (@ANI) December 3, 2023
199 ಸ್ಥಾನಗಳನ್ನು ಹೊಂದಿರುವ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
Congress leading on one seat in 199-seat Rajasthan Legislative assembly, says Election Commission. pic.twitter.com/LE9eCCM7Ja
— ANI (@ANI) December 3, 2023
ಮಧ್ಯಪ್ರದೇಶದ ಚಿಂದ್ವಾರದಲ್ಲಿರುವ ಮತ ಎಣಿಕೆ ಕೇಂದ್ರದಲ್ಲಿ ನಡೆಯುತ್ತಿರುವ ಮತ ಎಣಿಕೆ ಪ್ರಕ್ರಿಯೆ.
#WATCH | The process of counting of votes is underway in a counting centre in Madhya Pradesh's Chhindwara pic.twitter.com/VvUaWpRh6i
— ANI (@ANI) December 3, 2023
ರಾಜಸ್ಥಾನ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ರಾಜಸ್ಥಾನದ ಮಾಜಿ ಸಿಎಂ ವಸುಂಧರಾ ರಾಜೆ ಮುನ್ನಡೆ ಸಾಧಿಸಿದ್ದಾರೆ. ಟೋಂಕ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಸಚಿನ್ ಪೈಲಟ್ಗೆ ಮುನ್ನಡೆ.
ತೆಲಂಗಾಣದಲ್ಲಿ ಕಾಂಗ್ರೆಸ್ 27, ಬಿಆರ್ಎಸ್ 17 ಮುನ್ನಡೆ ಸಾಧಿಸಿದೆ. AIMIM 5, ಬಿಜೆಪಿ 1, ಇತರೆ 1 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್‌ಗೆ ಹಿನ್ನಡೆಯಾಗಿದೆ. ಕಾಮಾರೆಡ್ಡಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ರೇವಂತ್ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.
ತೆಲಂಗಾಣ ರಾಜ್ಯದ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಅಂಚೆ ಮತಗಳ ಎಣಿಕೆಯಲ್ಲಿ ಬಿಆರ್ಎಸ್ ಮುನ್ನಡೆ ಸಾಧಿಸಿದೆ.
ತೆಲಂಗಾಣ ಚುನಾವಣಾ ರಣಕಣ ಭಾರೀ ಕುತೂಹಲ ಮೂಡಿಸಿದೆ. ಅಧಿಕಾರದ ಗದ್ದುಗೆಗೇರುವ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಜೆ ಜಾರ್ಜ್ ಗೆ ತೆಲಂಗಾಣ ಉಸ್ತುವಾರಿ ನೀಡಲಾಗಿದೆ. ಹೀಗಾಗಿ ತಾಜ್ ಕೃಷ್ಣ ಹೋಟೆಲ್ನಲ್ಲಿ ಇಬ್ಬರು ನಾಯಕರು ಬಿಡು ಬಿಟ್ಟಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಕರೆತರಕ್ಕೆ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಪಕ್ಕ ಫಲಿತಾಂಶ ಪಡುತ್ತಲೇ ಶಾಸಕರನ್ನು ಹೋಟೆಲ್ ಗೆ ಶಿಫ್ಟ್ ಮಾಡಲಾಗುತ್ತೆ.
ಛತ್ತೀಸ್ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶಗಳಿಗಾಗಿ ಪಕ್ಷದ ಕಣ್ಣುಗಳು ಸಜ್ಜಾಗುತ್ತಿದ್ದಂತೆ ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಗೆ ಲಡ್ಡುಗಳನ್ನು ತರಲಾಯಿತು.
#WATCH | 'Ladoos' brought to Congress headquarters in Delhi as the party is all set for election results in Chhattisgarh, Rajasthan, Madhya Pradesh and Telangana pic.twitter.com/XBvUpAOIzM
— ANI (@ANI) December 3, 2023
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಸೇರಿ ನಾಲ್ಕು ರಾಜ್ಯಗಳಲ್ಲೂ ಸ್ಟ್ರಾಂಗ್ ರೂಂ ಓಪನ್ ಆಗಿದ್ದು ಅಂಚೆ ಮತಗಳ ಎಣಿಕೆ ಆರಂಭವಾಗಿದೆ.
#WATCH | Rajasthan | EVMs all set to be opened at University Commerce College counting centre in Jaipur, for the counting of votes. pic.twitter.com/nF6PSvlpkg
— ANI (@ANI) December 3, 2023
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಲಿದೆ. ಸ್ವಲ್ಪ ಸಮಯದ ನಂತರ, ಯಾರು ಹಿನ್ನೆಡೆ, ಯಾರು ಮುನ್ನೆಡೆ ಎನ್ನುವ ಮಾಹಿತಿ ಕೂಡ ಸಹ ಹೊರಹೊಮ್ಮಲು ಆರಂಭವಾಗಲಿದೆ.
ಇಂದು 4 ರಾಜ್ಯಗಳ ಚುನಾವಣಾ ಫಲಿತಾಂಶ, ಎಲ್ಲೆಲ್ಲಿ ಅತಂತ್ರ ವಿಧಾನಸಭೆ ಸಾಧ್ಯತೆ, ಮ್ಯಾಜಿಕ್ ನಂಬರ್ ಏನು?
ಛತ್ತೀಸ್ಗಢ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಮುನ್ನ ಎಣಿಕೆ ಅಧಿಕಾರಿಗಳ ಸಮ್ಮುಖದಲ್ಲಿ ಸುರ್ಗುಜಾದಲ್ಲಿನ ಸ್ಟ್ರಾಂಗ್ ರೂಮ್ ಅನ್ನು ತೆರೆಯಲಾಯಿತು. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.
#WATCH | Chhattisgarh | Strong room in Surguja unlocked in the presence of counting officials ahead of the counting of votes for the state assembly elections.
The counting will begin at 8 am today. pic.twitter.com/XhTtaH5PQ2
— ANI (@ANI) December 3, 2023
ತೆಲಂಗಾಣ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು ಚುನಾವಣಾ ಅಧಿಕಾರಿಗಳು ವಾರಂಗಲ್‌ನ ಮತ ಎಣಿಕೆ ಕೇಂದ್ರಕ್ಕೆ ಅಂಚೆ ಮತಪತ್ರಗಳನ್ನು ತಂದರು.
#WATCH | Election officials bring the postal ballots to the counting centre in Warangal as counting of votes in Telangana Assembly elections begins at 8am pic.twitter.com/zEjT2JoQSa
— ANI (@ANI) December 3, 2023
ಮಧ್ಯಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಇಂದು ಹೊರ ಬೀಳಲಿದೆ. ಇಂದು ಕಾಂಗ್ರೆಸ್, ಬಿಜೆಪಿ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದ್ದು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಸೇರಿ ಬಿಜೆಪಿ ಪ್ರಮುಖರು, ಕಾಂಗ್ರೆಸ್ನ ಕಮಲ್ನಾಥ್ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
ರಾಜಸ್ಥಾನದ 199 ವಿಧಾನಸಭಾ ಕ್ಷೇತ್ರಗಳಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಇಂದು ಕಾಂಗ್ರೆಸ್, ಬಿಜೆಪಿ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ. ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಕಾಂಗ್ರೆಸ್ನ ಸಚಿನ್ ಪೈಲಟ್, ಬಿಜೆಪಿಯ ವಸುಂದರ ರಾಜೆ ಸೇರಿ ಪ್ರಮುಖ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಸೇರಿ ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮೊದಲು ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತೆ. ನಂತರ ಬ್ಯಾಲೆಟ್ ಮತ ಎಣಿಕೆ ಪ್ರಕ್ರಿಯೆ ಆರಂಭವಾಗುತ್ತೆ.
ಇಂದು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್, ಪುತ್ರ ಕೆ.ಟಿ.ರಾಮ್ರಾವ್, ಕಾಂಗ್ರೆಸ್ನ ರೇವಂತ್ ರೆಡ್ಡಿ, ಬಿಜೆಪಿ ಸಂಜಯ್ ಕುಮಾರ್ ಸೇರಿದಂತೆ 119 ಕ್ಷೇತ್ರಗಳ 2,290 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
10 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ತೆಲಂಗಾಣ ರಾಜ್ಯಕ್ಕೆ ಇಂದು ವಿಧಾನಸಭಾ ಚುನಾವಣಾ ಫಲಿತಾಂಶ. ಕಳೆದ 10 ವರ್ಷಗಳಲ್ಲಿ 2 ಬಾರಿ ವಿಧಾನಸಭೆ ಚುನಾವಣೆ ನಡೆದಿದೆ. 2 ಬಾರಿಯೂ ಕೆ.ಚಂದ್ರಶೇಖರ್ ರಾವ್‌ಗೆ ಮತದಾರರು ಮಣೆ ಹಾಕಿದ್ದರು. ಇದೀಗ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರೋ ಸಿಎಂ ಕೆಸಿಆರ್.
ಇಂದು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ.
ತವರು ಕ್ಷೇತ್ರವಾದ ಗಜ್ವೇಲ್ ಹಾಗೂ ಕಾಮರೆಡ್ಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು ತೆಲಂಗಾಣ ‘ಕೈ’ ಅಧ್ಯಕ್ಷ ರೇವಂತ್ ರೆಡ್ಡಿ ಕೂಡ ಕಾಮರೆಡ್ಡಿ, ಕೊಡಂಗಲ್ ಕ್ಷೇತ್ರಗಳು ಸೇರಿ 2 ಕಡೆ ಸ್ಪರ್ಧಿಸಿದ್ದಾರೆ. ಕಾಮರೆಡ್ಡಿ ಕ್ಷೇತ್ರದಲ್ಲಿ KCR ವಿರುದ್ಧ ರೇವಂತ್ ಕಣಕ್ಕಿಳಿದಿದ್ದಾರೆ.
4 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಛತ್ತೀಸ್ಗಢ ರಾಜ್ಯದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮಧ್ಯಪ್ರದೇಶದಲ್ಲಿ ನ.17ರಂದು 230 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ರಾಜಸ್ಥಾನದಲ್ಲಿ ನ.25ರಂದು 200 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ತೆಲಂಗಾಣದಲ್ಲಿ ನ.30ರಂದು 119 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಛತ್ತೀಸ್‌ಗಢದಲ್ಲಿ ನ.7, ನ.17ರಂದು 90 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮಿಜೋರಾಂನಲ್ಲಿ ನ.7ರಂದು 40 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆ ನಡೆಯಲಿದೆ. ಮಿಜೋರಾಂನಲ್ಲಿ ಕ್ರೈಸ್ತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಾನುವಾರ ಕ್ರೈಸ್ತರಿಗೆ ವಿಶೇಷ ದಿನವಾಗಿದ್ದು, ಪ್ರಾರ್ಥನೆ ಸಲ್ಲಿಸುತ್ತಾರೆ. ಇಂದು ಕ್ರೈಸ್ತ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಹಿನ್ನೆಲೆ ಕ್ರೈಸ್ತ ಸಮುದಾಯದವರ ಮನವಿ ಮೇರೆಗೆ ಮತ ಎಣಿಕೆ ಮುಂದೂಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಇಂದು 4 ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದ ಫಲಿತಾಂಶ ಹೊರ ಬೀಳಲಿದ್ದು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.
Published On - 6:43 am, Sun, 3 December 23