ಹರಿಯಾಣ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ; ವಿನೇಶ್ ಫೋಗಟ್ ವಿರುದ್ಧ ಕ್ಯಾಪ್ಟನ್ ಯೋಗೇಶ್ ಬೈರಾಗಿ ಕಣಕ್ಕೆ
Haryana Assembly Polls: ಹರಿಯಾಣ ಚುನಾವಣೆಗೆ ಇನ್ನೂ 21 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದೆ. ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ವಿರುದ್ಧ ಜೂಲಾನಾ ಕ್ಷೇತ್ರದಿಂದ ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.
ನವದೆಹಲಿ: ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 21 ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆಡಳಿತ ಪಕ್ಷವು ಜುಲಾನಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್ ವಿರುದ್ಧ ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಬಿಜೆಪಿ ಫಿರೋಜ್‌ಪುರ ಜಿರ್ಕಾ ಮತ್ತು ಪುನಾಹಾನಾ ವಿಧಾನಸಭಾ ಕ್ಷೇತ್ರಗಳಿಂದ ನಸೀಮ್ ಅಹ್ಮದ್ ಮತ್ತು ಐಜಾಜ್ ಖಾನ್ ಅವರನ್ನು ಕಣಕ್ಕಿಳಿಸಿದೆ. ಪ್ರದೀಪ್ ಸಾಂಗ್ವಾನ್ ಬರೋಡಾದಿಂದ ಸ್ಪರ್ಧಿಸಲಿದ್ದಾರೆ.
ಇದಕ್ಕೂ ಮೊದಲು, ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಮೊದಲ 67 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರನ್ನು ಲಾಡ್ವಾ ಕ್ಷೇತ್ರದಿಂದ ಕಣಕ್ಕೆ ಇಳಿಸಿತ್ತು. ಇಂದು ಸೈನಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಅನಿಲ್ ವಿಜ್ ಅಂಬಾಲಾ ಕ್ಯಾಂಟ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಅವರು ಗೆದ್ದಿರುವ ಕರ್ನಾಲ್ ಅಸೆಂಬ್ಲಿ ಸ್ಥಾನವನ್ನು ಪ್ರಸ್ತುತ ಅವರು ಪ್ರತಿನಿಧಿಸುತ್ತಿರುವ ಕಾರಣ ಮುಖ್ಯಮಂತ್ರಿ ಸೈನಿ ಅವರ ಕ್ಷೇತ್ರವನ್ನು ಬಿಜೆಪಿ ಬದಲಾಯಿಸಿದೆ.
ಹರಿಯಾಣದ ಮಾಜಿ ಗೃಹ ಸಚಿವ ವಿಜ್ ಅವರು ತಮ್ಮ ಸ್ಥಾನದಿಂದ ಟಿಕೆಟ್ ಉಳಿಸಿಕೊಂಡಿದ್ದಾರೆ. ಅಂಬಾಲಾ ಕಂಟೋನ್ಮೆಂಟ್ ಅವರು 2009ರಿಂದ ಸತತ 3 ಬಾರಿ ಗೆಲುವು ದಾಖಲಿಸಿದ್ದಾರೆ.
ಇದನ್ನೂ ಓದಿ: Haryana Elections: ಹರಿಯಾಣ ಚುನಾವಣೆಗೆ 67 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಲಾಡ್ವಾದಿಂದ ಸಿಎಂ ಸೈನಿ ಸ್ಪರ್ಧೆ
ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರು ತಮ್ಮ ಫೇಸ್‌ಬುಕ್ ಖಾತೆಯ ಪ್ರಕಾರ, ಬಿಜೆಪಿಯ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಮತ್ತು ಪಕ್ಷದ ಹರಿಯಾಣ ಸ್ಪೋರ್ಟ್ಸ್ ಸೆಲ್‌ನ ಸಹ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರಿಗೆ ನಿಕಟವಾಗಿರುವ ಪವನ್ ಸೈನಿ ಅವರನ್ನು ನಾರೈಂಗರ್ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಸತ್ಪಾಲ್ ಜಂಬಾ ಅವರನ್ನು ಪುಂಡ್ರಿಯಿಂದ ಚುನಾವಣೆ ಎದುರಿಸಲು ನಾಮನಿರ್ದೇಶನ ಮಾಡಲಾಗಿದೆ.
ಭಾರತದ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಅಕ್ಟೋಬರ್ 1ರಿಂದ ಅಕ್ಟೋಬರ್ 5ಕ್ಕೆ ಪರಿಷ್ಕರಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗಳ ಮತ ಎಣಿಕೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ