Wayanad Bypolls: ವಯನಾಡಿ​​ನಲ್ಲಿ ಮಹಿಳಾ ಸಮರ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

Wayanad Bypolls: ವಯನಾಡಿ​​ನಲ್ಲಿ ಮಹಿಳಾ ಸಮರ; ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ
ಪ್ರಿಯಾಂಕಾ ಗಾಂಧಿ - ನವ್ಯಾ ಹರಿದಾಸ್
Follow us
ಸುಷ್ಮಾ ಚಕ್ರೆ
|

Updated on:Oct 19, 2024 | 10:03 PM

ನವದೆಹಲಿ: ರಾಯ್​ಬರೇಲಿ ಮತ್ತು ವಯನಾಡು ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಯನಾಡಿನ ಬದಲು ರಾಯ್​ಬರೇಲಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಈ ಕಾರಣದಿಂದ ತೆರವಾಗಿದ್ದ ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದೆಯೇ ಘೋಷಿಸಲಾಗಿತ್ತು. ಆದರೆ, ಅವರ ಎದುರಾಳಿಯಾಗಿ ಯಾರು ಸ್ಪರ್ಧಿಸಲಿದ್ದಾರೆ? ಎಂಬ ಕುತೂಹಲಕ್ಕೆ ಬಿಜೆಪಿ ಇಂದು ತೆರೆ ಎಳೆದಿದೆ. ಬಿಜೆಪಿ ಕೂಡ ಪ್ರಿಯಾಂಕಾ ವಿರುದ್ಧ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸಿದೆ. ವಯನಾಡಿನ ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.

ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ವಯನಾಡ್ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: ವಯನಾಡು ಸಂತ್ರಸ್ತರಿಗೆ 8 ಟ್ರಕ್​ಗಳಲ್ಲಿ ಅಗತ್ಯ ವಸ್ತುಗಳ ರವಾನೆ: ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ ಚಾಲನೆ

ಈ ಹಿಂದೆ ರಾಹುಲ್ ಗಾಂಧಿ ಹೊಂದಿದ್ದ ವಯನಾಡ್ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿಯನ್ನು ಅಧಿಕೃತವಾಗಿ ಹೆಸರಿಸಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಿಂದ ಗೆದ್ದ ನಂತರ ರಾಯ್​ಬರೇಲಿಯನ್ನು ಉಳಿಸಿಕೊಳ್ಳುವ ನಿರ್ಧಾರದ ನಂತರ ರಾಹುಲ್ ಗಾಂಧಿ ವಯನಾಡ್ ಸ್ಥಾನವನ್ನು ತೆರವು ಮಾಡಿದಾಗ ಉಪಚುನಾವಣೆ ಅಗತ್ಯವಾಗಿತ್ತು.

ನವ್ಯಾ ಹರಿದಾಸ್ ಯಾರು?:

ಕೇರಳದ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಗೆ ಸವಾಲು ಹಾಕಲು ಹೊರಟಿರುವ 39 ವರ್ಷದ ಬಿಜೆಪಿ ಅಭ್ಯರ್ಥಿ ನವ್ಯಾ ಹರಿದಾಸ್ ಅವರು ಪಕ್ಷದ ಡೈನಾಮಿಕ್ ನಾಯಕರಲ್ಲಿ ಒಬ್ಬರು. ವೃತ್ತಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರ್ ಆಗಿರುವ ನವ್ಯಾ ಅವರು 2007ರಲ್ಲಿ ಬಿ.ಟೆಕ್ ಅನ್ನು ಪೂರ್ಣಗೊಳಿಸಿದ್ದಾರೆ. ಅವರ ಸಾಮಾಜಿಕ ಮಾಧ್ಯಮದ ಪ್ರೊಫೈಲ್ ಪ್ರಕಾರ, ಅವರು ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಕೌನ್ಸಿಲರ್ ಆಗಿದ್ದಾರೆ. ಹಾಗೇ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: Priyanka Gandhi: ವಯನಾಡಿನಲ್ಲಿ ರಾಹುಲ್ ಗಾಂಧಿಯ ಅನುಪಸ್ಥಿತಿ ಕಾಡದಂತೆ ಕೆಲಸ ಮಾಡುವೆ; ಪ್ರಿಯಾಂಕಾ ಗಾಂಧಿ ಭರವಸೆ

ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಕರ್ನಾಟಕ, ಕೇರಳ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಿಂದ ವಿಧಾನಸಭಾ ಉಪಚುನಾವಣೆಗೆ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. 8 ರಾಜ್ಯಗಳ ವಿಧಾನಸಭೆ ಚುನಾವಣೆಗೆ ಪಕ್ಷವು 24 ಅಭ್ಯರ್ಥಿಗಳನ್ನು ಹೆಸರಿಸಿದೆ. ಮಾಜಿ ಸಂಸದ ಸುನಿಲ್ ಸೋನಿ ಛತ್ತೀಸ್‌ಗಢದ ರಾಯ್‌ಪುರ ನಗರ ದಕ್ಷಿಣ ವಿಧಾನಸಭೆಯಿಂದ ಸ್ಪರ್ಧಿಸಲಿದ್ದಾರೆ.

ನವೆಂಬರ್ 13ರಂದು ಲೋಕಸಭಾ ಉಪಚುನಾವಣೆಗೆ ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:02 pm, Sat, 19 October 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ