AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya Politics: ಸಕ್ಕರೆ ನಾಡು ಕಬ್ಜಾಕ್ಕೆ ಬಿಜೆಪಿಯಿಂದ ಬ್ಲೂ ಪ್ರಿಂಟ್: ಅಖಾಡಕ್ಕೆ ತ್ರಿಮೂರ್ತಿಗಳು

ರಾಜ್ಯದಲ್ಲಿ ಚುನಾವಣೆ ರಣ ತಂತ್ರ ಬಿರುಸುಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಬಿಜೆಪಿ ತ್ರೀಮೂರ್ತಿಗಳಿಂದ ರಾಜ್ಯದಲ್ಲಿ ಚುನಾವಣೆ ಗೆಲ್ಲಲ್ಲು ಮೆಗಾ ಪ್ಲ್ಯಾನ್ ಮಾಡಿದ್ದು, ಈಗಾಗಲೇ ಕೆಳದ 3 ತಿಂಗಳಿನಲ್ಲಿ ಪ್ರಧಾನಿ ಮೋದಿ ಹಲವು ಭಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

Mandya Politics: ಸಕ್ಕರೆ ನಾಡು ಕಬ್ಜಾಕ್ಕೆ ಬಿಜೆಪಿಯಿಂದ ಬ್ಲೂ ಪ್ರಿಂಟ್: ಅಖಾಡಕ್ಕೆ ತ್ರಿಮೂರ್ತಿಗಳು
ಮಂಡ್ಯ, ಬಿಜೆಪಿ
TV9 Web
| Updated By: ವಿವೇಕ ಬಿರಾದಾರ|

Updated on: Jan 23, 2023 | 1:07 PM

Share

ಮಂಡ್ಯ: ರಾಜ್ಯದಲ್ಲಿ ಚುನಾವಣೆ ರಣ ತಂತ್ರ ಬಿರುಸುಗೊಂಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ. ಬಿಜೆಪಿ ತ್ರೀಮೂರ್ತಿಗಳಿಂದ ರಾಜ್ಯದಲ್ಲಿ ಚುನಾವಣೆ ಗೆಲ್ಲಲ್ಲು ಮೆಗಾ ಪ್ಲ್ಯಾನ್ ಮಾಡಿದ್ದು, ಈಗಾಗಲೇ ಕೆಳದ 3 ತಿಂಗಳಿನಲ್ಲಿ ಪ್ರಧಾನಿ ಮೋದಿ ಹಲವು ಭಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಬಿಜೆಪಿ ವೀಕ್ ಇರುವ ಪ್ರದೇಶಗಳಲ್ಲಿ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದು, ಹಳೆ ಮೈಸೂರು ಭಾಗದಲ್ಲಿ ಮತ್ತಷ್ಟು ಬಿಗಿ ಮಾಡಲು ಮುಂದಾಗಿದ್ದಾರೆ. ಈ ಹಿನ್ನೆಲೆ ಹಳೆ ಮೈಸೂರು ಅಮಿತ್‌ ಶಾ ಮತ್ತು ಪ್ರಧಾನಿ ಮೋದಿಗೆ ಟಾರ್ಗೆಟ್ ಆಗಿದ್ದು, ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಲಾಗಿದೆ.

ಅಮಿತ್ ಷಾ ಬಳಿಕ ಹಳೆ ಮೈಸೂರು ಭಾಗಕ್ಕೆ ಪ್ರಧಾನಿ ಮೋದಿ ಎಂಟ್ರಿ

ಅಮಿತ್ ಷಾ ಬಳಿಕ ಹಳೆ ಮೈಸೂರು ಭಾಗಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಫೆಬ್ರವರಿ ತಿಂಗಳಿನಲ್ಲಿ ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಮಂಡ್ಯಕ್ಕೆ ಪ್ರಧಾನಿ ಭೇಟಿ ಬಗ್ಗೆ ಬಿಜೆಪಿ ರಾಜ್ಯ ಘಟಕಕ್ಕೆ ಹೈಕಮಾಂಡ್ ಸೂಚನೆ ರವಾನಿಸಿದೆ. ಕಮಲ ಕಲಿಗಳು ಇನ್ನೊಂದು ವಾರದಲ್ಲಿ ಅಧಿಕೃತ ದಿನಾಂಕ ಘೋಷಣೆ ಮಾಡಲಿದ್ದಾರೆ. ಹಳೆ ಮೈಸೂರು ಭಾಗವನ್ನು ಕಬ್ಜಾ ಮಾಡಲು ಬ್ಲೂ ಪ್ರಿಂಟ್ ಸಿದ್ದವಾಗಿದ್ದು, ಸಂಘಟನಾ ಚತುರ ಬಿ.ಎಲ್ ಸಂತೋಷ್ ರಿಂದ ಹೈ ಕಮಾಂಡ್​ ಗ್ರೌಂಡ್ ರಿಪೋರ್ಟ್ ಪಡೆಯುತ್ತಿದೆ.

ಇದನ್ನೂ ಓದಿ: ಒಂದು ಮುಖ 150 ಗುರಿ; ಮೋದಿ ಮಹಾತ್ಮೆಗೆ ಕಾಲ ಸನ್ನಿಹಿತ

ನಿನ್ನೆ (ಜ.22) ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರು ಹಾಗೂ ಟಿಕೆಟ್ ಆಕಾಂಕ್ಷಿಗಳ ಜತೆ ಗೌಪ್ಯ ಸಭೆ ನಡೆಸಿರುವ ಬಿ.ಎಲ್ ಸಂತೋಷ್, ಮಂಡ್ಯದ 7 ವಿಧಾನಸಭಾ ಕ್ಷೇತ್ರದ ಇಂಚಿಂಚು ಮಾಹಿತಿ ಕಲೆ ಹಾಕಿದ್ದಾರೆ. ಈಗಾಗಲೇ ಬಿಜೆಪಿ ಹಳೆ ಮೈಸೂರು ಭಾಗದಲ್ಲಿ ರಣ ಕಹಳೆ ಮೊಳಗಿಸಿದ್ದು, ಪದೇ ಪದೇ ಮಂಡ್ಯ ಜಿಲ್ಲೆಯಲ್ಲಿ ರಾಜ್ಯದ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಹಿಂದುತ್ವದ ಅಜೆಂಡಾದ ಮೇಲೆ ವರ್ಕ್ ಔಟ್ ಮಾಡಲು ಬಿಜೆಪಿಗರು ಮುಂದಾಗಿದ್ದು, ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದವೇ ಕಮಲಧಾರಿಗಳ ಅಸ್ತ್ರವಾಗಲಿದೆ.

ಬಿಜೆಪಿಗೆ ಸೇರಲಿದ್ದಾರೆ ಹಾಲಿ ಹಾಗೂ ಮಾಜಿ ಶಾಸಕರು..?

ಮಂಡ್ಯದಲ್ಲಿ ಚುನಾವಣೆಗೂ ಮುನ್ನವೆ ಪಕ್ಷಾಂತರ ಪರ್ವ ಶುರುವಾಗಲಿದೆ ಎಂಬ ವಂದತಿಗಳು ಕೇಳಿಬರುತ್ತಿವೆ. ಬಿಜೆಪಿಗೆ ಸೇರಲಿರುವ ಪ್ರಮುಖ ಕೈ ಮುಖಂಡರು ಹಾಗೂ ಜೆಡಿಎಸ್ ನಾಯಕರ ಬಗ್ಗೆ ಮಂಡ್ಯ ಬಿಜೆಪಿ ಜಿಲ್ಲಾ ಅಧ್ಯಕ್ಷ ಟಿವಿ9ಗೆ ಗುಟ್ಟು ಬಿಟ್ಟು ಕೊಟ್ಟಿದ್ದಾರೆ. ಎರಡು ಪಕ್ಷದ ಪ್ರಮುಖ ನಾಯಕರು ಈಗಾಗಲೆ ಬಿಜೆಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿಗೆ ಈ ಬಾರಿ ವರದಾನ ಆಗಲಿರೊ ಅಂಶಗಳು

ಜೆಡಿಎಸ್​ನಲ್ಲಿ ಆಂತರಿಕ ಭಿನ್ನಮತ ಎದ್ದಿದೆ. ಬಿಲ್.ಎಲ್ ದೇವರಾಜ್ ಕೆ.ಆರ್ ಪೇಟೆಯಲ್ಲಿ ಬಹಿರಂಗವಾಗಿ ಭಿನ್ನಮತವನ್ನು ಹೊರ ಹಾಕಿದ್ದಾರೆ. ದೇವರಾಜ್ ಜೆಡಿಎಸ್ ಟಿಕೆಟ್ ಕೈ ತಪ್ಪಿದರೇ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಚಿಂತನೆ ನಡೆಸಿದ್ದಾರೆ. ಹಾಗೇ ಜೆಡಿಎಸ್​ನಿಂದ ಉಚ್ಚಾಟಿತರಾಗಿರುವ ಎಲ್.ಆರ್​ ಶಿವರಾಮೇಗೌಡ ನಾಗಮಂಗಲದಲ್ಲಿ ಪಕ್ಷೇತರವಾಗಿ ಕಣಕ್ಕಿಳಿಯಲಿದ್ದಾರೆ. ಎಲ್.ಆರ್.ಶಿವರಾಮೇಗೌಡ ಸ್ಪರ್ಧೆ ಮಾಡಿದರೆ ಜೆಡಿಎಸ್ ಮತಗಳು ಪಕ್ಕಾ ವಿಭಜನೆಯಾಗಲಿವೆ. ಮಂಡ್ಯ ಕ್ಷೇತ್ರದಲ್ಲಿ ಹಾಲಿ ಶಾಸಕರ ವಿರುದ್ದ ಅಸಮಧಾನ ಬುಗಿಲೆದ್ದು, ಅನಾರೋಗ್ಯದ ಸಮಸ್ಯೆಯಿಂದ ಜೆಡಿಎಸ್ ಶಾಸಕ ಶ್ರೀನಿವಾಸ್ ಜನರ ಸಂಪರ್ಕಕ್ಕೆ ಸಿಗುತ್ತಿಲ್ಲ.

ಇದನ್ನೂ ಓದಿ:  ಕೋಲಾರದಲ್ಲಿ ಸಿದ್ದರಾಮಯ್ಯ ಹಣಿಯಲು ಬಿಜೆಪಿ, ಜೆಡಿಎಸ್ ಸಜ್ಜು; ಪ್ರತಿತಂತ್ರ ಹೆಣೆದ ಸಿದ್ದು

ಹಿಂದುತ್ವ ಅಜೆಂಡಾ\ಮಂಡ್ಯ ಜಿಲ್ಲೆ ಹಿಜಾಬ್ ವಿಚಾರವಾಗಿ ದೇಶಾದ್ಯಂತ ಸುದ್ದಿಯಾಗಿತ್ತು. ಅಲ್ಲಾವೊ ಅಕ್ಬರ್ ಎಂದು ಘೋಷಣೆ ಕೂಗಿದ್ದ ಮುಸ್ಕಾನ್​ರನ್ನ ಅಲ್ ಖೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಝವಾಹಿರಿ ಹಾಡಿ ಹೊಗಳಿದ್ದನು. ಅಲ್ ಝವಾಹಿರಿ ಹೇಳಿಕೆ ದೇಶಾದ್ಯಂತ ಚರ್ಚಗೆ ಗ್ರಾಸವಾಗಿತ್ತು. ಆಜಾನ್ ಹಾಗೂ ಹನುಮಾನ್ ಚಾಲೀಸ ವಿಚಾರವಾಗಿ ಮಂಡ್ಯ ಸುದ್ದಿಯಾಗಿತ್ತು. ಜಾಮಿಯಾ ಮಸೀದಿ ವಿವಾದ ಹನುಮ ಮಾಲಾದಾರಿಗಳ ಯಾತ್ರೆ, ಶ್ರೀರಂಗಪಟ್ಟ ಹಾಗೂ ಮೇಲುಕೋಟೆಯಲ್ಲಿ ಟಿಪ್ಪು ಆಡಳಿತದ ವೇಳೆ ಹಿಂದೂ ದೇಗುಲ ಹಾಗೂ ಹಿಂದೂ ಜನರ ಮಾರಣ ಹೋಮದ ಕುರಿತು ಬಿಜೆಪಿ ಹೆಚ್ಚಿನ ಪ್ರಚಾರ ಮಾಡುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬೋಮ್ಮಾಯಿ ಸರ್ಕಾರ ಮೈ ಶುಗರ್ ಸಕ್ಕರೆ ಕಾರ್ಖಾನೆ ರೀ ಓಪನ್ ಮಾಡಿದ ಕ್ರೆಡಿಟ್ ಪಡೆದಿದೆ.

ಜಾತಿವಾರು ಲೆಕ್ಕಾಚಾರ

ಒಕ್ಕಲಿಗ ಮತದಾರರೇ ಹೆಚ್ಚಿರುವ ಮಂಡ್ಯ ಜಿಲ್ಲೆಯಲ್ಲಿ ಒಕ್ಕಲಿಗ ನಾಯಕರನ್ನು ಕಣಕ್ಕಿಳಿಸಿರುವ ಬಿಜೆಪಿ ಅಶ್ವಥ್ ನಾರಾಯಣ, ಆರ್.ಅಶೋಕ್, ಸಿಟಿ ರವಿ, ಗೋಪಾಲಯ್ಯ, ನಾರಾಯಣಗೌಡರಿಗೆ ಮಂಡ್ಯದ ಹೊಣೆ ನೀಡಿದೆ. ಮಂಡ್ಯದಲ್ಲಿಯೂ ಕಾಂಗ್ರೆಸ್​ ಬಣದ ರಾಜಕೀಯ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಿದ್ದು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಬಣದಲ್ಲಿ ಗುರುತಿಸಿಕೊಂಡಿರುವ ಮಂಡ್ಯದ ಕೈ ನಾಯಕರನ್ನು ಸೆಳೆಯುವ ಸಾಧ್ಯತೆ ಇದೆ. ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡರೇ ಇತ್ತ ರಮೇಶ್ ಬಾಬು, ಬಂಡಿಸಿದ್ದೇಗೌಡ, ಗಣಿಗ ರವಿ, ಡಿಕೆ ಶಿವಕುಮಾರ್​ ಬಣದಲ್ಲಿ ಆಕ್ಟೀವ್ ಆಗಿದ್ದಾರೆ. ಕಾಂಗ್ರೆಸ್​ನ ಬಣ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳು ಬಿಜೆಪಿ ಪ್ಯ್ಲಾನ್​​ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ