AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಮೊದಲ ಪಟ್ಟಿಯನ್ನು ಏಪ್ರಿಲ್ 6 ಅಥವಾ 7 ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್‌ ಜೋಶಿ ಶುಕ್ರವಾರ ತಿಳಿಸಿದ್ದಾರೆ.

ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿಕೆ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಗಂಗಾಧರ​ ಬ. ಸಾಬೋಜಿ
|

Updated on:Mar 31, 2023 | 11:11 PM

Share

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಯ ಮೊದಲ ಪಟ್ಟಿಯನ್ನು ಏಪ್ರಿಲ್ 6 ಅಥವಾ 7 ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ್‌ ಜೋಶಿ (Pralhad Joshi) ಶುಕ್ರವಾರ ತಿಳಿಸಿದ್ದಾರೆ. ಬೆಳಗಾವಿಯಲ್ಲಿಂದು ಮಾತನಾಡಿದ ಅವರು, ನಾವು ಹಲವರ ಅಭಿಪ್ರಾಯಗಳನ್ನು ಸಂಗ್ರಹಿಸುತ್ತಿದ್ದೇವೆ. ಏಪ್ರಿಲ್ 6 ಅಥವಾ 7 ರೊಳಗೆ ಮೊದಲ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದರು. ಕರ್ನಾಟಕ ರಾಜ್ಯದಾದ್ಯಂತ, ಶುಕ್ರವಾರ ಬಿಜೆಪಿಯು ಎಲ್ಲಾ 39 ಸಂಘಟನಾ ಜಿಲ್ಲೆಗಳಲ್ಲಿ ಸ್ಥಳೀಯ ಮುಖಂಡರಿಂದ ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಲು ಅಭಿಪ್ರಾಯಗಳನ್ನು ಸಂಗ್ರಹಿಸಿದೆ. ಬಿಜೆಪಿ ಪಕ್ಷವು ವಿವಿಧ ಜಿಲ್ಲೆಗಳಲ್ಲಿ 97 ವೀಕ್ಷಕರನ್ನು ನೇಮಿಸಿದ್ದು, ಅವರ ನೇತೃತ್ವದಲ್ಲಿ ಚುನಾವಣೆ ನಡೆದಿದೆ. ಏಪ್ರಿಲ್ 1 ಮತ್ತು 2 ರಂದು ನಿಗದಿಯಾಗಿರುವ ಕೋರ್ ಕಮಿಟಿ ಸಭೆಯಲ್ಲಿ ಹೆಸರುಗಳನ್ನು ಚರ್ಚಿಸಲಾಗುತ್ತದೆ.

ಇಬ್ಬರು ಮಾಜಿ ಮುಖ್ಯಮಂತ್ರಿಗಳು, 4 ಕೇಂದ್ರ ಸಚಿವರು, 9 ಸಚಿವರು, 11 ಸಂಸದರು, 13 ಶಾಸಕರು ಮತ್ತು 24 ಎಂಎಲ್‌ಸಿಗಳಿಗೆ ಸ್ಥಳೀಯ ಮುಖಂಡರ ಅಭಿಪ್ರಾಯ ಸಂಗ್ರಹಿಸುವ ಜವಾಬ್ದಾರಿ ನೀಡಲಾಗಿತ್ತು. ಕೋರ್ ಕಮಿಟಿ ಸಭೆಯು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಅಭ್ಯರ್ಥಿಗಳ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡುತ್ತದೆ ಮತ್ತು ಅದು ಹೆಸರನ್ನು ಅಂತಿಮಗೊಳಿಸುತ್ತದೆ. ಬೆಂಗಳೂರು ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಬಿಜೆಪಿ ಕೋರ್ ಕಮಿಟಿ ಎರಡು ದಿನಗಳ ಕಾಲ ನಡೆಯಲಿದೆ ಎಂದು ಜೋಶಿಯವರು ಮಾಹಿತಿ ನೀಡಿದರು.

ಇದನ್ನೂ ಓದಿ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ, ಹೈಕಮಾಂಡ್​ ಒಪ್ಪಿದರೂ ವರುಣಾ ಸ್ಪರ್ಧೆ ಬೇಡ ಎಂದರಾ ಬಿಎಸ್ ಯಡಿಯೂರಪ್ಪ?

ಕರ್ನಾಟಕದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಡಿರುವ ಬಿಜೆಪಿ ಹೈಕಮಾಂಡ್‌, ಟಿಕೆಟ್‌ ನೀಡುವ ಕುರಿತು ಸಾಕಷ್ಟು ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಈಗಾಗಲೇ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದು, ರಾಜ್ಯದಲ್ಲಿ ಗೆಲ್ಲುವ ಕುದುರೆಗೆ ಟಿಕೆಟ್‌ ನೀಡಲು ನಿರ್ಧರಿಸಿದೆ. ಇನ್ನೂ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದ್ದು, ಟಿಕೆಟ್‌ ವಿಚಾರದಲ್ಲಿ ಯಾವುದೇ ಗೊಂದಲಗಳು ಹಾಗೂ ಭಿನ್ನಮತಗಳು ಉಂಟಾಗದ ರೀತಿಯಲ್ಲಿ ಟಿಕೆಟ್‌ ಘೋಷಿಸುವ ಲೆಕ್ಕಾಚಾರವನ್ನು ಬಿಜೆಪಿ ಹೈಕಮಾಂಡ್ ಹಾಕಿಕೊಂಡಿದೆ.

ಇದನ್ನೂ ಓದಿ: Karnataka Assembly Election 2023: ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ: ಬಿಎಸ್​ ಯಡಿಯೂರಪ್ಪ

ಸದ್ಯ ಕರ್ನಾಟಕದಲ್ಲಿ ಅಭ್ಯರ್ಥಿ ಕುರಿತು ಜನಾಭಿಪ್ರಾಯವನ್ನು ಬಿಜೆಪಿ ಹೈಕಮಾಂಡ್ ಸಂಗ್ರಹಿಸಿದೆ. ಆಯಾ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆದಿದೆ. ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲು ಪ್ಲಾನ್ ಮಾಡಲಾಗಿದೆ. ಏಪ್ರಿಲ್ 8 ರಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆತ ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:11 pm, Fri, 31 March 23

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ