Channapatana ByPoll Result: ಹ್ಯಾಟ್ರಿಕ್​ ಸೋಲಿನ ಕಹಿ ಉಂಡ ನಿಖಿಲ್​ ಕುಮಾರಸ್ವಾಮಿ ಫಸ್ಟ್​ ರಿಯಾಕ್ಷನ್​

ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಸೋತಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಸತತ ಮೂರನೇ ಸೋಲಾಗಿದೆ. ಇಂದಿನ ಚನ್ನಪಟ್ಟಣ ಫಲಿತಾಂಶದ ಬಗ್ಗೆ ನಿಖಿಲ್​ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

Channapatana ByPoll Result: ಹ್ಯಾಟ್ರಿಕ್​ ಸೋಲಿನ ಕಹಿ ಉಂಡ ನಿಖಿಲ್​ ಕುಮಾರಸ್ವಾಮಿ ಫಸ್ಟ್​ ರಿಯಾಕ್ಷನ್​
ನಿಖಿಲ್​ ಕುಮಾರಸ್ವಾಮಿ
Follow us
ವಿವೇಕ ಬಿರಾದಾರ
|

Updated on:Nov 23, 2024 | 3:02 PM

ಬೆಂಗಳೂರು, ನವೆಂಬರ್​ 23: ಚನ್ನಪಟ್ಟಣ ಕ್ಷೇತ್ರದ (Channapatana ByPoll) ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇನೆ. 87 ಸಾವಿರ ಮತ ನೀಡಿದ ಚನ್ನಪಟ್ಟಣ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಜೆಡಿಎಸ್​, ಬಿಜೆಪಿ ಕಾರ್ಯಕರ್ತರಿಗೂ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ಜೆಡಿಎಸ್​ ಯುವ ಘಟಕ ಅಧ್ಯಕ್ಷ ನಿಖಿಲ್​ ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿನ ತೋಟದ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಯಲ್ಲಿ ಎಲ್ಲರಿಗೂ ಧ್ವನಿಯಾಗಿ ಕೆಲಸ ಮಾಡ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ತೀರ್ಮಾನವೇ ಅಂತಿಮ. ಎಲ್ಲಿ ಎಡವಿದ್ದೇವೆ ಅಂತ ಚರ್ಚೆ ಮಾಡುತ್ತೇವೆ. ಈ ಸೋಲನ್ನು ನಾನೇ ಸ್ವೀಕಾರ ಮಾಡ್ತೇನೆ. ಸೋತಿದ್ದೇನೆ ಅಂತ ಸುಮ್ಮನೇ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದರು.

ಹೆಚ್​ಡಿ ದೇವೇಗೌಡ, ಹೆಚ್​ಡಿ ಕುಮಾರಸ್ವಾಮಿ ಅವರನ್ನು ಬೆಳೆಸಿದ್ದು ರಾಮನಗರ ಜಿಲ್ಲೆಯ ಜನ. ಚುನಾವಣೆ ಸಂದರ್ಭದಲ್ಲಿ ಜನರಿಗೆ ನಾನು ಭರವಸೆ ಕೊಟ್ಟಿದ್ದೆ. ಆ ಭರವಸೆ ಕೇವಲ ಚುನಾವಣೆಗೆ ಸಂಬಂಧಪಟ್ಟಿದ್ದಲ್ಲ. ನಾನು ಕೊಟ್ಟ ಮಾತನ್ನು ಹಿಂಪಡೆಯಲ್ಲ ಎಂದರು.

ನಾನು ರಾಮನಗರದಲ್ಲಿ ಜನಿಸಿಲ್ಲ, ಆದರೆ, ಭಾವನಾತ್ಮಕ ಸಂಬಂಧವಿದೆ. ನಾನು ಹೆಚ್​ಡಿ ಕುಮಾರಸ್ವಾಮಿ ಅವರ ಜೊತೆ ಸೇರಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ದುಡಿದಿದ್ದಾರೆ. ಒಂದು ಸಮುದಾಯದ ಮತದಾರರು ಕಾಂಗ್ರೆಸ್​ ಪರ ನಿಂತಿದ್ದಾರೆ. ಸೋಲಿನಿಂದ ಎದೆಗುಂದುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯತ್ತ ಕರ್ನಾಟಕ ಜನರ ಚಿತ್ತ ನೆಟ್ಟಿತ್ತು. ಈ ಚುನಾವಣೆ ಅಕ್ಷರಶಃ ವ್ಯಕ್ತಿ ಪ್ರತಿಷ್ಠೆಯ ಕಣವಾಗಿತ್ತು. ಬಿಜೆಪಿ ತೊರೆದು “ಕೈ” ಹಿಡಿದ ಸಿಪಿ ಯೋಗೇಶ್ವರ್​ ಅವರು ಕಾಂಗ್ರೆಸ್​ನಿಂದ ಕಣಕ್ಕೆ ಇಳಿದಿದ್ದರು. ಇನ್ನು, ಎನ್​ಡಿಎ ಮೈತ್ರಿಕೂಟದಿಂದ ಯಾರು ಅಭ್ಯರ್ಥಿ ಎಂಬ ಪ್ರಶ್ನೆ ಮೂಡಿದಾಗ, ಕೊನೆ ಹಂತದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪುತ್ರ ನಿಖಿಲ್​ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು.

ಆಗ, ಚನ್ನಪಟ್ಟಣ ಚುನಾವಣೆ ಪ್ರತಿಷ್ಠೆಯಾಗಿ ಮಾರ್ಪಟ್ಟಿತ್ತು. ಡಿಕೆ ಬ್ರದರ್ಸ್​ vs ಹೆಚ್​ಡಿ ಕುಮಾರಸ್ವಾಮಿಯಾಗಿ ಚುನಾವಣಾ ಅಖಾಡ ಬದಲಾಯಿತು. ಕೊನೆಗೆ ನವೆಂಬರ್​ 13 ರಂದು ಮತದಾನ ನಡೆದು, ಈಗ ಫಲಿತಾಂಶ ಪ್ರಕಟವಾಗಿದೆ.

ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಅವರು ನಿಖಿಲ್​ ಕುಮಾರಸ್ವಾಮಿ ಅವರ ವಿರುದ್ಧ 25 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲವು ಸಾಧಿಸಿದ್ದಾರೆ. ನಿಖಿಲ್​ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Sat, 23 November 24

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ