
Channapatna Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಗೆಲುವಿನ ನಗೆ ಬೀರಿದ್ದಾರೆ. 15915 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ (Channapatna Assembly Constituency) ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸ್ಪರ್ಧಿಸಿದ್ದಾರೆ. ಮತದಾನಕ್ಕೆ ಕೆಲವು ದಿನಗಳ ಹಿಂದೆ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹೆಚ್ಡಿ ಕುಮಾರಸ್ವಾಮಿ ಡಿಸ್ಚಾರ್ಜ್ ಆಗಿ ಭರ್ಜರಿ ಪ್ರಚಾರ ನಡೆಸಿದ್ದರು. ಹೆಚ್ಡಿ ದೇವೇಗೌಡ ಕೂಡ ತಮ್ಮ ಆರೋಗ್ಯ ಲೆಕ್ಕಿಸದೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇದು ನನ್ನ ಕಡೇ ಚುನಾವಣೆ ಮುಂದಿನ ಭಾರಿ ಇಲ್ಲಿ ಸ್ಥಳೀಯ ಕಾರ್ಯಕರ್ತರನ್ನು ನಿಲ್ಲಿಸುತ್ತೇನೆ ಎನ್ನುವ ಮೂಲಕ ಕಾರ್ಯಕರ್ತರಲ್ಲಿ ಹೆಚ್ಡಿಕೆ ಹೊಸ ಹುರುಪು ತುಂಬಿದ್ದರು. ಪಂಚರತ್ನ, ಬಮೂಲ್ ಉತ್ಸವಗಳ ಮೂಲಕ ಅಬ್ಬರಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಸಿ.ಪಿ. ಯೋಗೇಶ್ವರ್ ವಿರುದ್ಧ ಗೆಲುವು ಸಾಧಿಸಿದ್ದ ಹೆಚ್ಡಿ ಕುಮಾರಸ್ವಾಮಿಗೆ ಈ ಬಾರಿಯೂ ಮತದಾರ ಪ್ರಭುಗಳು ಕೈ ಹಿಡಿಯಲಿದ್ದಾರಾ ಕಾದು ನೋಡಬೇಕು.
ಸಿನಿಮಾ ಸ್ಟಾರ್ ಆಗಿ ಹೆಸರು ಮಾಡಿದ್ದ ಸಿ. ಪಿ. ಯೋಗೇಶ್ವರ್ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಚನ್ನಪಟ್ಟಣದಲ್ಲಿ ಸಿ. ಪಿ. ಯೋಗೇಶ್ವರ್ ಆರ್ಭಟ ಆರಂಭವಾಗಿದ್ದು, 1999ರಿಂದ. ನಂತರ 2004, 2008ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜೆಡಿಎಸ್‌ನ ಎಂ.ಸಿ.ಅಶ್ವಥ್ ಅವರನ್ನು ಎರಡು ಬಾರಿ ಮಣಿಸಿದ್ದರು. ಇನ್ನು 2009ರಲ್ಲಿ ಸಿ. ಪಿ. ಯೋಗೇಶ್ವರ್ ಬಿಜೆಪಿ ಸೇರಿದ ಪರಿಣಾಮ ಉಪ ಚುನಾವಣೆ ಎದುರಾಯ್ತು. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಂ.ಸಿ. ಅಶ್ವಥ್ ಅವರು ಗೆಲುವು ಸಾಧಿಸಿದರಾದ್ರೂ, ಮುಂದಿನ ದಿನಗಳಲ್ಲಿ ಅವರೂ ಕೂಡಾ ಬಿಜೆಪಿ ಸೇರಿದರು. ಹೀಗಾಗಿ, 2011ರಲ್ಲಿ ಚನ್ನಪಟ್ಟಣ ಕ್ಷೇತ್ರ ಮತ್ತೊಂದು ಉಪ ಚುನಾವಣೆಯನ್ನು ಎದುರಿಸಬೇಕಾಯ್ತು. ಈ ವೇಳೆ, ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಸ್.ಎಲ್. ನಾಗರಾಜ್ ಅವರನ್ನು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಮಣಿಸಿದರು. ನಂತರ 2013ರ ಚುನಾವಣೆ ವೇಳೆಗೆ ಎಸ್‌ಪಿಗೆ ಹಾರಿದ್ದ ಸಿ.ಪಿ. ಯೋಗೇಶ್ವರ್ ಆ ಚುನಾವಣೆಯಲ್ಲೂ ಗೆಲುವು ಸಾಧಿಸಿದರು. ನಂತರ 2018ರ ಚುನಾವಣೆ ವೇಳೆಗೆ ಮತ್ತೆ ಬಿಜೆಪಿಗೆ ಬಂದ ಸಿ.ಪಿ. ಯೋಗೇಶ್ವರ್‌ಗೆ ಟಕ್ಕರ್ ಕೊಟ್ಟಿದ್ದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ. ಚನ್ನಪಟ್ಟಣದ ಜೆಡಿಎಸ್ ಅಭ್ಯರ್ಥಿಯಾಗಿ ಖುದ್ದು ಕುಮಾರಸ್ವಾಮಿ ಅವರೇ ಸ್ಪರ್ಧಿಸಿ, ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್‌ಗೆ ಸೋಲಿನ ರುಚಿ ತೋರಿಸಿದರು. ಸದ್ಯ ಕುಮಾರಸ್ವಾಮಿಯನ್ನು ಸೋಲಿಸಲು ಭರ್ಜರಿ ಪ್ರಚಾರ ನಡೆಸಿದ್ದರು.
Published On - 1:02 am, Sat, 13 May 23