AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ಉಪ ಚುನಾವಣೆ ಸಮರದಲ್ಲಿ ತೀವ್ರ ಪೈಪೋಟಿಗೆ, ಜಿದ್ದಾಜಿದ್ದಿಗೆ ಸಾಕ್ಷಿಯಾಗಿದ್ದ ಮತ್ತು ಕಾಂಗ್ರೆಸ್ ಹಾಗೂ ಎನ್​ಡಿಎ ಮಿತ್ರಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಚನ್ನಪಟ್ಟಣದಲ್ಲಿ ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್, ಯೋಗೇಶ್ವರ್ ಪ್ರತಿಷ್ಠೆಗೆ ಗೆಲುವಾಗಿದೆ. ಈ ಮೂಲಕ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿಗೆ ಟಕ್ಕರ್ ಕೊಡುವಲ್ಲಿ ಯೋಗೇಶ್ವರ್ ಯಶಸ್ವಿಯಾಗಿದ್ದಾರೆ.

Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು
ಸಿಪಿ ಯೋಗೇಶ್ವರ್ ಹಾಗೂ ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on:Nov 23, 2024 | 3:24 PM

Share

ಚನ್ನಪಟ್ಟಣ, ನವೆಂಬರ್ 23: ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್​ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ ಯೋಗೇಶ್ವರ್​​ ಅವರನ್ನು ಮತದಾರರು ‘ಕೈ’ ಹಿಡಿದಿದ್ದಾರೆ. ಅತ್ತ ನಿಖಿಲ್​ಗೆ ಮೂರನೇ ಬಾರಿಯೂ ಮುಖಭಂಗವಾಗಿದೆ. ಈ ಹಿಂದೆ ಮಂಡ್ಯದಿಂದ ಲೋಕಸಭೆ ಚುನಾವಣೆ, ರಾಮನಗರದಿಂದ ವಿಧಾನಸಭೆ ಚುನಾವಣೆ ಸ್ಪರ್ಧಿಸಿ ಸೋಲುಂಡಿದ್ದ ಅವರು, ಇದೀಗ ಮೂರನೇ ಪ್ರಯತ್ನದಲ್ಲಿಯೂ ವಿಫಲರಾಗಿದ್ದಾರೆ.

25,515 ಮತಗಳ ಅಂತರದ ಗೆಲುವು

ಚನ್ನಪಟ್ಟಣ ಉಪಚುನಾವಣೆ ಮತ ಎಣಿಕೆ ಮುಕ್ತಾಯವಾಗಿದ್ದು, ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಯೋಗೇಶ್ವರ್​ಗೆ 1,12,642 ಮತ ದೊರೆತರೆ, ಎನ್​ಡಿಎ ಅಭ್ಯರ್ಥಿ ನಿಖಿಲ್‌ಗೆ 87,229 ಮತಗಳು ದೊರೆತಿವೆ. ಪಕ್ಷೇತರ ಅಭ್ಯರ್ಥಿಗಳಾದ ನಿಂಗರಾಜುಗೆ 2352, ಜೆ.ಟಿ.ಪ್ರಕಾಶ್‌ಗೆ 1649 ಮತಗಳು ದೊರೆತಿವೆ.

ಯೋಗೇಶ್ವರ್ ಗೆಲುವಿಗೆ ಕಾರಣವೇನು?

ಚನ್ನಪಟ್ಟಣದಲ್ಲಿ ಎರಡು ಬಾರಿ ಸೋತಿರುವ ಅನುಕಂಪ ಯೋಗೇಶ್ವರ್​ ಕೈ ಹಿಡಿದಿರಬಹುದು. ಇಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಯೋಗೇಶ್ವರ್ ಅವರಿಗೆ ಅವರದ್ದೇ ಆದ ವೈಯಕ್ತಿಕ ವರ್ಚಸ್ಸು ಇದೆ. ಯೋಗೇಶ್ವರ್ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿರುವುದರಿಂದ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಪ್ಲಸ್ ಆಗುರಬಹುದು. ಜೊತೆ ಡಿಕೆ ಸಹೋದರರು ಯೋಗೇಶ್ವರ್​ ಬೆನ್ನಿಗೆ ನಿಂತಿರುವುದು ಕೂಡ ನೆರವಾಗಿದೆ. ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಒಗ್ಗಟ್ಟು ಪ್ರದರ್ಶನ ಸೇರಿ ಹಲವು ವಿಚಾರಗಳು ಸಿಪಿವೈಗೆ ವರವಾಗಿ ಪರಿಣಮಿಸಿದವು.

ಮತ್ತೆ ಅದೃಷ್ಟಪರೀಕ್ಷೆಯಲ್ಲಿ ಸೋತ ನಿಖಿಲ್

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಸೋಲು. 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಸೋಲು. ಹೀಗೆ ಎರಡು ಸೋಲು ಕಂಡಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ ಈಬಾರಿ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಅತ್ತ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಸಿಪಿ ಯೋಗೇಶ್ವರ್​ಗೆ ಕೂಡಾ ಈ ಚುನಾವಣೆ ಅಗ್ನಿ ಪರೀಕ್ಷೆಯಾಗಿತ್ತು. ನಿಖಿಲ್, ಯೋಗೇಶ್ವರ್ ಅಭ್ಯರ್ಥಿಯಾದರೂ, ಇದು ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಯುದ್ಧವೇ ಆಗಿತ್ತು.

ನಿಖಿಲ್​ಗೆ ಹಿನ್ನಡೆಯಾದ ಅಂಶಗಳೇನು?

ನಿಖಿಲ್​ಗೆ ಮೈನಸ್ ಆಗಿರುವ ಮೊದಲನೇ ಪಾಯಿಂಟ್ ಅಂದರೆ ಕುಟುಂಬ ರಾಜಕಾರಣ ಮತ್ತು ಕೊನೇ ಕ್ಷಣದಲ್ಲಿ ಸ್ಪರ್ಧೆ ಮಾಡಿರುವುದು. ಅಲ್ಲದೆ, ಕುಮಾರಸ್ವಾಮಿ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮಂಡ್ಯ ಸಂಸದ ಸ್ಥಾನಕ್ಕೆ ಹೋಗಿರುವ ಅಂಶ ಕೂಡಾ ಮುಖ್ಯವಾಯಿತು. ಇನ್ನು ಯೋಗೇಶ್ವರ್​ಗೆ ಟಿಕೆಟ್ ಕೊಡಲಿಲ್ಲ ಎಂಬ ಅನುಕಂಪ ನಿಖಿಲ್​ಗೆ​ ಮೈನಸ್ ಆಯಿತು ಎಂದೂ ಹೇಳಲಾಗುತ್ತಿದೆ. ಜೊತೆಗೆ ತಳ ಮಟ್ಟದಲ್ಲಿ ಬಿಜೆಪಿಯಿಂದ ಅಷ್ಟಾಗಿ ಸಹಕಾರ ಸಿಗದೇ ಹೋಗಿರುವ ಸಾಧ್ಯತೆಯೂ ಇಇದೆ. ಅಂತಿಮವಾಗಿ ಅವರದ್ದೇ ಕುಟುಂಬದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ವಿಚಾರವೂ ನಿಖಿಲ್​ಗೆ ಮೈನಸ್ ಆಗಿರಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: ಚುನಾವಣೆ ಫಲಿತಾಂಶದ ಲೈವ್ ಅಪ್​ಡೇಟ್ ಇಲ್ಲಿದೆ

ಚುನಾವಣೆ ಫಲಿತಾಂಶ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Sat, 23 November 24

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ