Assembly Election Result 2023: ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಇದು ಮೋದಿ ಮ್ಯಾಜಿಕ್ ಎಂದ ಸ್ಮೃತಿ ಇರಾನಿ

|

Updated on: Dec 03, 2023 | 12:55 PM

ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ(Assembly Election)ಯ ಫಲಿತಾಂಶ ಹೊರಬಲಿದೆ. ಮತ ಎಣಿಕೆ ನಡೆಯುತ್ತಿದೆ. ಆ ಪೈಕಿ ಛತ್ತೀಸ್​ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಇದನ್ನು ಸಚಿವೆ ಸ್ಮೃತಿ ಇರಾನಿ(Smriti Irani) ‘ಮೋದಿ ಮ್ಯಾಜಿಕ್’ ಎಂದು ಕರೆದಿದ್ದಾರೆ.

Assembly Election Result 2023: ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಇದು ಮೋದಿ ಮ್ಯಾಜಿಕ್ ಎಂದ ಸ್ಮೃತಿ ಇರಾನಿ
ಸ್ಮೃತಿ
Image Credit source: India TV
Follow us on

ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ(Assembly Election)ಯ ಫಲಿತಾಂಶ ಹೊರಬಲಿದೆ. ಮತ ಎಣಿಕೆ ನಡೆಯುತ್ತಿದೆ. ಆ ಪೈಕಿ ಛತ್ತೀಸ್​ಗಢ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಇದನ್ನು ಸಚಿವೆ ಸ್ಮೃತಿ ಇರಾನಿ(Smriti Irani) ‘ಮೋದಿ ಮ್ಯಾಜಿಕ್’ ಎಂದು ಕರೆದಿದ್ದಾರೆ.

ಮೂರು ರಾಜ್ಯಗಳಾದ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಗೆಲುವಿನತ್ತ ದಾಪುಗಾಲಿಡುತ್ತಿರುವಾಗ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪ್ರಧಾನಿ ಮೋದಿಯವರಿಗೆ ಯಶಸ್ಸಿನ ಶ್ರೇಯಸ್ಸನ್ನು ನೀಡಿದ್ದಾರೆ.

ಚುನಾವಣಾ ಆಯೋಗದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಬಹುತೇಕ ಗೆಲುವು ಸಾಧಿಸಿದೆ. ಚುನಾವಣಾ ಆಯೋಗದ ಟ್ರೆಂಡ್‌ಗಳ ಪ್ರಕಾರ ರಾಜಸ್ಥಾನದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳು 114 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ 68 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮತ್ತಷ್ಟು ಓದಿ: ಯಾರಾಗಲಿದ್ದಾರೆ ಮಧ್ಯ ಪ್ರದೇಶ ಸಿಎಂ? ಶಿವರಾಜ್ ಸಿಂಗ್ ಚೌಹಾಣ್ ಭೇಟಿಯಾದ ಸಿಂಧಿಯಾ

ಸರಣಿ ಪೋಸ್ಟ್​ ಮಾಡಿರು  ಕೇಂದ್ರ ಸಚಿವರು ಪ್ರಧಾನಿ ಮೋದಿಯನ್ನು ಹೊಗಳಿದರು. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರಕ್ಕೆ ಮನ್ನಣೆ ನೀಡಿದ್ದಾರೆ. ಜನರು ಅವರ ಮೇಲೆ ಅಪಾರ ನಂಬಿಕೆ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಡಬಲ್ ಇಂಜಿನ್ ಸರ್ಕಾರದ (ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ) ಕಲ್ಯಾಣ ಯೋಜನೆಗಳನ್ನು ಅವರು ಸರಿಯಾಗಿ ಜಾರಿಗೊಳಿಸಿದ್ದಾರೆ ಎಂದು ಚೌಹಾಣ್ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:53 pm, Sun, 3 December 23