Chhattisgarh Election 2023 Results: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ಗೆ ಗರ್ವಭಂಗ ಮಾಡಿದ ಬಿಜೆಪಿ

ಛತ್ತೀಸ್​ಗಢ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಜಯಭೇರಿ ಬಾರಿಸಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ, ನವೆಂಬರ್‌ನಲ್ಲಿ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಸೆಮಿಫೈನಲ್ ಎಂದು ಪರಿಗಣಿಸಲಾಗುತ್ತಿದೆ.

Chhattisgarh Election 2023 Results: ಛತ್ತೀಸ್​ಗಢದಲ್ಲಿ ಕಾಂಗ್ರೆಸ್​ಗೆ ಗರ್ವಭಂಗ ಮಾಡಿದ ಬಿಜೆಪಿ
ಭೂಪೇಶ್ ಬಾಘೇಲ್
Edited By:

Updated on: Dec 03, 2023 | 5:39 PM

ಛತ್ತೀಸ್​ಗಢ ವಿಧಾನಸಭಾ ಚುನಾವಣಾ ಫಲಿತಾಂಶ(Chhattisgarh Assembly Election Result) ಹೊರಬಿದ್ದಿದ್ದು ಕಾಂಗ್ರೆಸ್​ ವಿರುದ್ಧ ಬಿಜೆಪಿ(BJP) ಜಯಭೇರಿ ಬಾರಿಸಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ, ನವೆಂಬರ್‌ನಲ್ಲಿ ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಸೆಮಿಫೈನಲ್ ಎಂದು ಪರಿಗಣಿಸಲಾಗುತ್ತಿದೆ.

ಇಲ್ಲಿನ ಸೋಲು-ಗೆಲುವು ಭವಿಷ್ಯದ ರಾಜಕೀಯದ ಚಿತ್ರಣ ನೀಡಬಲ್ಲದು. ಕಳೆದ ತಿಂಗಳು ನಡೆದ ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಿಜೋರಾಂನ ಮತಗಳ ಎಣಿಕೆ ನಾಳೆ (ಡಿಸೆಂಬರ್ 4) ನಡೆಯಲಿದೆ.

ಕೇಂದ್ರ ಸಚಿವೆ ರೇಣುಕಾ ಸಿಂಗ್ ಅವರು ಛತ್ತೀಸ್‌ಗಢದ ಭರತ್‌ಪುರ್-ಸೋನ್‌ಹಟ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ, ಇವರಲ್ಲದೆ, ಪ್ರಮುಖ ಅಭ್ಯರ್ಥಿಗಳಲ್ಲಿ ಭೂಪೇಶ್ ಬಾಘೇಲ್, ಟಿಎಸ್ ಸಿಂಗ್ ದೇವೋ, ಡಾ. ರಮಣ್ ಸಿಂಗ್, ವಿಜಯ್ ಬಾಘೇಲ್, ಚರಣದಾಸ್ ಮಹಂತ್, ಅರುಣ್ ಸಾವೋ ಸೇರಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇಕೆ ಮತದಾರ? ಇಲ್ಲಿದೆ ಕಾರಣ

ಈ ಬಾರಿ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಪುತ್ರ ಹಾಗೂ ಜನತಾ ಕಾಂಗ್ರೆಸ್ ಛತ್ತೀಸ್ ಗಢ (ಜೆ) ರಾಜ್ಯಾಧ್ಯಕ್ಷ ಅಮಿತ್ ಜೋಗಿ ಕೂಡ ಕಣದಲ್ಲಿದ್ದರು. ಈ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆಮ್ ಆದ್ಮಿ ಪಕ್ಷ (ಎಎಪಿ) ಅಮಿತ್ ಕುಮಾರ್ ಹಿರ್ವಾನಿ ಅವರಿಗೆ ಪಟಾನ್ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಛತ್ತೀಸ್​ಗಢದಲ್ಲಿ ಬಿಜೆಪಿ 54 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಕಾಂಗ್ರೆಸ್​ 36 ಸ್ಥಾನಗಳನ್ನು ಗಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ