AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್‌ಗಢ ಚುನಾವಣೆಗೆ ಮುನ್ನ, ಬಘೇಲ್ ಸರ್ಕಾರದ ವಿರುದ್ಧ ‘ಆರೋಪ ಪತ್ರ’ ಬಿಡುಗಡೆ ಮಾಡಿದ ಅಮಿತ್ ಶಾ

ಅಕ್ರಮ ಬೆಟ್ಟಿಂಗ್ ಆ್ಯಪ್ 'ಮಹದೇವ್ ಆನ್‌ಲೈನ್ ಬುಕ್'ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಉಲ್ಲೇಖಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಯುವಕರನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ತಳ್ಳುತ್ತಿರುವ ಬಘೇಲ್ ಸರ್ಕಾರ ಛತ್ತೀಸ್‌ಗಢದ ಜನರಿಗೆ ಬೇಕೇ ಅಥವಾ ಯುವಕರ ಅಭಿವೃದ್ಧಿಯ ಕೆಲಸವನ್ನು ಮಾಡುವ ಬಿಜೆಪಿ ಸರ್ಕಾರ ಬೇಕೇ ಎಂದು ಕೇಳಿದ್ದಾರೆ.

ಛತ್ತೀಸ್‌ಗಢ ಚುನಾವಣೆಗೆ ಮುನ್ನ, ಬಘೇಲ್ ಸರ್ಕಾರದ ವಿರುದ್ಧ 'ಆರೋಪ ಪತ್ರ' ಬಿಡುಗಡೆ ಮಾಡಿದ ಅಮಿತ್ ಶಾ
ಆರೋಪ್ ಪತ್ರ ಬಿಡುಗಡೆ ಮಾಡಿದ ಅಮಿತ್ ಶಾ
ರಶ್ಮಿ ಕಲ್ಲಕಟ್ಟ
|

Updated on: Sep 02, 2023 | 5:34 PM

Share

ರಾಯ್ಪುರ್ ಸೆಪ್ಟೆಂಬರ್ 02: ಛತ್ತೀಸ್‌ಗಢದ (Chhattisgarh) ಭೂಪೇಶ್ ಬಘೇಲ್ (Bhupesh Baghel)ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಶನಿವಾರ “ಆರೋಪ್ ಪತ್ರ” (ಆರೋಪ ಪತ್ರ) ಬಿಡುಗಡೆ ಮಾಡಿದ್ದಾರೆ. ಭೂಪೇಶ್ ಬಘೇಲ್ ಸರ್ಕಾರ ಹಗರಣ ಮತ್ತು ಲೂಟಿಯಲ್ಲಿ ತೊಡಗಿದೆ. ಇದು ರಾಜ್ಯದ ಜನರ ವಿರುದ್ಧ ದೌರ್ಜನ್ಯ ಎಸಗುತ್ತಿದೆ ಎಂದು ಶಾ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಬಘೇಲ್ ಅವರು ಛತ್ತೀಸ್‌ಗಢವನ್ನು “ಗಾಂಧಿ ಪರಿವಾರದ ಎಟಿಎಂ” ಆಗಿ ಮಾಡಿದ್ದಾರೆ ಎಂದು ಆರೋಪಿಸಿದ ಶಾ, ಈ ಸರ್ಕಾರ ಎಲ್ಲಾ ಭ್ರಷ್ಟಾಚಾರದ ದಾಖಲೆಗಳನ್ನು ಮುರಿದಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ತನ್ನ ಮತಬ್ಯಾಂಕ್ ರಾಜಕಾರಣಕ್ಕಾಗಿ ಛತ್ತೀಸ್‌ಗಢದ ಬುಡಕಟ್ಟು ಪ್ರದೇಶಗಳಲ್ಲಿ ಧಾರ್ಮಿಕ ಮತಾಂತರವನ್ನು ತಡೆಯುತ್ತಿಲ್ಲ ಎಂದು ಗೃಹ ಸಚಿವರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕೇಂದ್ರೀಯ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಕಲ್ಲಿದ್ದಲು, ಮದ್ಯ, ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಆಪಾದಿತ ಹಗರಣಗಳನ್ನು ಶಾ ಪಟ್ಟಿ ಮಾಡಿದ್ದು, ಕಾಂಗ್ರೆಸ್‌ನ ಹಗರಣಗಳು, ದೌರ್ಜನ್ಯಗಳು ಮತ್ತು ದುರಾಡಳಿತದಿಂದ ಛತ್ತೀಸ್‌ಗಢವನ್ನು ಬಿಜೆಪಿ ಮಾತ್ರ ಉಳಿಸಬಹುದು ಎಂದಿದ್ದಾರೆ.

ಅಕ್ರಮ ಬೆಟ್ಟಿಂಗ್ ಆ್ಯಪ್ ‘ಮಹದೇವ್ ಆನ್‌ಲೈನ್ ಬುಕ್’ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಉಲ್ಲೇಖಿಸಿದ ಅವರು, ಯುವಕರನ್ನು ಆನ್‌ಲೈನ್ ಬೆಟ್ಟಿಂಗ್‌ಗೆ ತಳ್ಳುತ್ತಿರುವ ಬಘೇಲ್ ಸರ್ಕಾರ ಛತ್ತೀಸ್‌ಗಢದ ಜನರಿಗೆ ಬೇಕೇ ಅಥವಾ ಯುವಕರ ಅಭಿವೃದ್ಧಿಯ ಕೆಲಸವನ್ನು ಮಾಡುವ ಬಿಜೆಪಿ ಸರ್ಕಾರ ಬೇಕೇ ಎಂದು ಕೇಳಿದ್ದಾರೆ.

ಸಾವಿರಾರು ಕೋಟಿ ಭ್ರಷ್ಟಾಚಾರ ಮಾಡಿರುವ ಭೂಪೇಶ್ ಬಘೇಲ್ ಸರ್ಕಾರ ಬೇಕೋ ಅಥವಾ ಅಭಿವೃದ್ಧಿಗೆ ನಾಂದಿ ಹಾಡುವ ಬಿಜೆಪಿ ಸರ್ಕಾರ ಬೇಕೋ ಎಂಬುದನ್ನು ಛತ್ತೀಸ್‌ಗಢದ ಜನರು ನಿರ್ಧರಿಸಬೇಕು. ಧಾರ್ಮಿಕ ಮತಾಂತರಗಳು ಪ್ರವರ್ಧಮಾನಕ್ಕೆ ಬರುತ್ತಿದ್ದರೂ ಆದಿವಾಸಿಗಳ ಹಕ್ಕುಗಳನ್ನು ರಕ್ಷಿಸುವ ಬಗ್ಗೆ ಮಾತನಾಡುವ ಬಘೇಲ್ ಸರ್ಕಾರ ಬೇಕೋ ಅಥವಾ ಆದಿವಾಸಿಗಳು ಮತ್ತು ಅವರ ಸಂಸ್ಕೃತಿಯನ್ನು ರಕ್ಷಿಸುವ ಮತ್ತು ಸಂರಕ್ಷಿಸುವ ಬಿಜೆಪಿ ಸರ್ಕಾರ ಬೇಕೋ ಎಂಬುದನ್ನು ನೀವು ನಿರ್ಧರಿಸಬೇಕು ಎಂದು ಅಮಿತ್ ಶಾ ಛತ್ತೀಸ್‌ಗಢದ ಜನರಲ್ಲಿ ಹೇಳಿದ್ದಾರೆ.

ಬಘೇಲ್ ನೇತೃತ್ವದ ಸರ್ಕಾರ ಭ್ರಷ್ಟಾಚಾರದ ಎಲ್ಲಾ ದಾಖಲೆಗಳನ್ನು ಮುರಿದಿದೆ ಬಿಜೆಪಿ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ. ಅದಕ್ಕೂ ಮೊದಲು ಛತ್ತೀಸ್‌ಗಢದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಕೋಟಕ್ ಮಹೀಂದ್ರಾ ಬ್ಯಾಂಕ್ ಎಂಡಿ ಮತ್ತು ಸಿಇಒ ಸ್ಥಾನಕ್ಕೆ ಉದಯ್ ಕೋಟಕ್ ರಾಜೀನಾಮೆ

ಛತ್ತೀಸ್‌ಗಢದ ಜನತೆಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ಎರಡು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ನೀರು ಪೂರೈಕೆ ಮಾಡುವುದಾಗಿ ಭರವಸೆ ನೀಡುತ್ತೇನೆ ಎಂದ ಅಮಿತ್ ಶಾ, ಆದಿತ್ಯ L-1 ಮಿಷನ್‌ನ ಯಶಸ್ವಿ ಉಡಾವಣೆಯ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ