ಕೊನೆಗೂ ಛತ್ತೀಸ್‌ಗಢದ ಸಿಎಂ ಸ್ಥಾನಕ್ಕೆ ವಿಷ್ಣುದೇವ್ ಸಾಯಿ ಹೆಸರು ಫೈನಲ್, ಪ್ರಮಾಣ ವಚನ ಯಾವಾಗ?

Vishnu Deo Sai: ಛತ್ತೀಸ್​ಗಢದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇದ್ದ ಅನುಮಾನಗಳಿಗೆ ಇಂದು ತೆರೆ ಬಿದ್ದಿದೆ. ಸರ್ವಾನುಮತದಿಂದ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

ಕೊನೆಗೂ ಛತ್ತೀಸ್‌ಗಢದ ಸಿಎಂ ಸ್ಥಾನಕ್ಕೆ ವಿಷ್ಣುದೇವ್ ಸಾಯಿ ಹೆಸರು ಫೈನಲ್, ಪ್ರಮಾಣ ವಚನ ಯಾವಾಗ?
ವಿಷ್ಣದೇವ್
Follow us
ನಯನಾ ರಾಜೀವ್
|

Updated on:Dec 10, 2023 | 4:01 PM

ಛತ್ತೀಸ್​ಗಢದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇದ್ದ ಕುತೂಹಲಗಳಿಗೆ ಇಂದು ತೆರೆ ಬಿದ್ದಿದೆ. ಸರ್ವಾನುಮತದಿಂದ ವಿಷ್ಣುದೇವ್ ಸಾಯಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಯಲ್ಲಿ ಛತ್ತೀಸ್​ಗಢದ ನೂತನ ಮುಖ್ಯಮಂತ್ರಿಯನ್ನು ಆಯ್ಕೆಮಾಡಲಾಗಿದೆ. ವೀಕ್ಷರು ಸಭೆಯಲ್ಲಿ ವಿಷ್ಣುದೇವ್ ಅವರ ಹೆಸರನ್ನು ಸೂಚಿಸಿದ್ದಾರೆ. ಬಿಜೆಪಿ ವೀಕ್ಷಕರ ಪ್ರಸ್ತಾಪಕ್ಕೆ ಸರ್ವಾನುಮತದಿಂದ ಅಂಗೀಕಾರ ದೊರೆತಿದೆ.

ಈ ಸಭೆಯಲ್ಲಿ ಕೇಂದ್ರ ಸಚಿವರಾದ ಸರ್ಬಾನಂದ್ ಸೋನೋವಾಲ್, ಅರ್ಜುನ್ ಮುಂಡಾ ಮತ್ತು ದುಷ್ಯಂತ್ ಕುಮಾರ್ ಗೌತಮ್ ಅವರಲ್ಲದೇ ಛತ್ತೀಸ್​ಗಢ ಬಿಜೆಪಿ ಉಸ್ತುವಾರಿ ಓಂ ಮಾಥುರ್ ಕೂಡ ಉಪಸ್ಥಿತರಿದ್ದರು.

ಕೇಂದ್ರ ವೀಕ್ಷಕರು ಬೆಳಗ್ಗೆ 9 ಗಂಟೆ ಸುಮಾರಿಗೆ ರಾಯ್​ಪುರ್ ತಲುಪಿದ್ದರು. ಮಧ್ಯಾಹ್ನ 12 ಗಂಟೆಯಿಂದಲೇ ಮುಖ್ಯಮಂತ್ರಿ ಹೆಸರಿನ ಕುರಿತು ಚಿಂತನ ಮಂಥನ ಶುರುವಾಗಿತ್ತು. ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 90 ಸ್ಥಾನಗಳಲ್ಲಿ 54 ಸ್ಥಾನಗಳನ್ನು ಗೆದ್ದಿದೆ. ಆದರೆ 2018 ರಲ್ಲಿ 68 ಸ್ಥಾನಗಳನ್ನು ಗೆದ್ದಿದ್ದ ಕಾಂಗ್ರೆಸ್ 35 ಸ್ಥಾನಗಳಿಗೆ ಕುಸಿದಿದೆ.

ಮತ್ತಷ್ಟು ಓದಿ: ವಿಧಾನಸಭೆ ಚುನಾವಣೆ ಫಲಿತಾಂಶ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ ಬಿಜೆಪಿ ತೆಕ್ಕೆಗೆ, ತೆಲಂಗಾಣಕ್ಕೆ ಕಾಂಗ್ರೆಸ್ ‘ಗ್ಯಾರಂಟಿ’

ಗೊಂಡ್ವಾನಾ ಗಂತಂತ್ರ ಪಕ್ಷ (ಜಿಜಿಪಿ) ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಛತ್ತೀಸ್‌ಗಢದಲ್ಲಿ ಬುಡಕಟ್ಟು ಜನಸಂಖ್ಯೆಯು ಸುಮಾರು 32 ಪ್ರತಿಶತದಷ್ಟಿದೆ. ವಿಷ್ಣು ದೇವ್ ಸಾಯಿ ಕೂಡ ತಮ್ಮ ಸರಳತೆಗೆ ಹೆಸರಾದವರು. ಸಾಯಿ ರಾಯಗಢ ಲೋಕಸಭಾ ಕ್ಷೇತ್ರದ ಸಂಸದರೂ ಆಗಿದ್ದಾರೆ. ಪ್ರಧಾನಿ ಮೋದಿಯವರ ಮೊದಲ ಅವಧಿಯಲ್ಲಿ ಅವರು ಸಚಿವರಾಗಿದ್ದರು.ಹಲವು ಹೆಸರುಗಳು ರೇಸ್‌ನಲ್ಲಿದ್ದವುವಿಷ್ಣುದೇವ್ ಸಾಯಿ ಹೊರತುಪಡಿಸಿ, ರೇಣುಕಾ ಸಿಂಗ್ ಅವರ ಹೆಸರೂ ರೇಸ್‌ನಲ್ಲಿ ಸೇರಿತ್ತು.

ವಿಷ್ಣುದೇವ್ ಸಾಯಿ ಅವರು 21 ಫೆಬ್ರವರಿ 1964 ರಂದು ಜಶ್ಪುರದಲ್ಲಿ ರೈತ ಕುಟುಂಬದಲ್ಲಿ ಜನಿಸಿದರು. ಮೋದಿ ಸರ್ಕಾರದ ಮೊದಲ ಅವಧಿಯಲ್ಲಿ ಅವರು ಕೇಂದ್ರದ ಉಕ್ಕಿನ ರಾಜ್ಯ ಸಚಿವರಾಗಿದ್ದರು. 16ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢದಿಂದ ಗೆದ್ದು ಸಂಸದರಾದರು.

1990-98ರಲ್ಲಿ ಎರಡು ಬಾರಿ ಶಾಸಕರಾಗಿದ್ದರು. ಇದಾದ ಬಳಿಕ 1999ರಿಂದ 2014ರವರೆಗೆ ಸಂಸದರಾಗಿದ್ದರು. ಸಂಸದರಾಗಿದ್ದಾಗಲೇ ಹಲವು ಸಮಿತಿ, ಸ್ಥಾನಗಳನ್ನು ಅಲಂಕರಿಸಿದ್ದರು. ವಿದ್ಯಾಭ್ಯಾಸ ಮುಗಿಸಿ ರಾಜಕೀಯ ಪ್ರವೇಶಿಸಿದ ಅವರು 1980ರಲ್ಲಿ ಬಾಗಿಯಾದಿಂದ ಸರಪಂಚ್ ಚುನಾವಣೆಯಲ್ಲಿ ಅವಿರೋಧವಾಗಿ ಗೆದ್ದರು. ಇದಾದ ನಂತರ 1990ರಲ್ಲಿ ಮೊದಲ ಬಾರಿಗೆ ತಮ್ಮ ಆಸ್ತಿಯಲ್ಲಿ ಒಂದಷ್ಟು ಭಾಗವನ್ನು ಮಾರಿ ಶಾಸಕರ ಚುನಾವಣೆಗೆ ಸ್ಪರ್ಧಿಸಿ ಗೆದ್ದರು.

ಬುಡಕಟ್ಟು ಸಮುದಾಯಕ್ಕೆ ಸೂಕ್ತ ಗೌರವ ನೀಡಲಾಗುವುದು ಎಂದು ಬಿಜೆಪಿ ಈಗಾಗಲೇ ಹೇಳಿತ್ತು. ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಹಲವು ನಾಯಕರ ಹೆಸರುಗಳು ರೇಸ್‌ನಲ್ಲಿ ಹರಿದಾಡುತ್ತಿವೆ. ಆದರೆ ಈಗ ಸಸ್ಪೆನ್ಸ್‌ಗೆ ತೆರೆ ಬಿದ್ದಿದೆ. ಇತ್ತೀಚೆಗೆ ವಿಷ್ಣುದೇವ್ ಸಾಯಿ ಅವರ ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಛತ್ತೀಸ್‌ಗಢದಲ್ಲಿ ಅಜಿತ್ ಜೋಗಿ ನಂತರ ವಿಷ್ಣುದೇವ್ ಸಾಯಿ ಎರಡನೇ ಬುಡಕಟ್ಟು ಮುಖ್ಯಮಂತ್ರಿಯಾಗಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:47 pm, Sun, 10 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ