ಮಾ. 4ರಂದು ಕರ್ನಾಟಕಕ್ಕೆ ಅರವಿಂದ ಕೇಜ್ರಿವಾಲ್, ದಾವಣಗೆರೆಯಲ್ಲಿ ಎಎಪಿ ಬೃಹತ್ ಸಮಾವೇಶ

|

Updated on: Feb 22, 2023 | 7:56 PM

ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ಮಾರ್ಚ್ 4ರಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ದಾವಣಗೆರೆಗೆ ಭೇಟಿ ನೀಡಲಿದ್ದಾರೆ.  

ಮಾ. 4ರಂದು ಕರ್ನಾಟಕಕ್ಕೆ ಅರವಿಂದ ಕೇಜ್ರಿವಾಲ್,  ದಾವಣಗೆರೆಯಲ್ಲಿ ಎಎಪಿ ಬೃಹತ್ ಸಮಾವೇಶ
ಅರವಿಂದ ಕೇಜ್ರಿವಾಲ್ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ವಿಧಾನಸಭಾ ಕ್ಷೇತ್ರದ ಚುನಾವಣೆ (election) ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆಯ ದಿನಾಂಕ ಘೋಷಣೆಗೆ ಮುನ್ನವೇ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಭರ್ಜರಿ ಮತಬೇಟೆಗಿಳಿದಿವೆ. ಮೂರು ಪಕ್ಷಗಳು ಯಾತ್ರೆಗಳ ಮೂಲಕ ರಾಜ್ಯದ ಮೂಲೆ-ಮೂಲೆಗಳಲ್ಲಿ ಸುತ್ತಾಡುತ್ತಿವೆ. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್​ ಶಾ ಮೇಲಿಂದ ಮೇಲೆ ಭೇಟಿ ನೀಡುತ್ತಿದ್ದಾರೆ. ಇತ್ತ ಆಮ್ ಆದ್ಮಿ ಕೂಡ ತನ್ನ ಮತದಾರರನ್ನು ಸೆಳೆಯಲು ಕಸರತ್ತು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 4ರಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ (Arvind Kejriwal) ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ಆಮ್ ಆದ್ಮಿ ಪಾರ್ಟಿಯಿಂದ ಆಯೋಜಿಸಲಿರುವ ಬೃಹತ್ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಕೇಜ್ರಿವಾಲ್ ಭಾಷಣ ಮಾಡಲಿದ್ದಾರೆ.

ಫೆ. 27ರಂದು ಬೆಳಗಾವಿಗೆ ಪ್ರಧಾನಿ ಮೋದಿ ಭೇಟಿ

ಇತ್ತ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ. ಫೆ.27 ಪ್ರಧಾನಿ ನರೇಂದ್ರ ಮೋದಿ ಭೇಟಿ ಫಿಕ್ಸ್ ಹಿನ್ನೆಲೆ ಬೆಳಗಾವಿಯ ಸರ್ಕ್ಯೂಟ್ ಹೌಸ್​ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದರು. ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸರಾನಾ ನೇತೃತ್ವದಲ್ಲಿ ಸಭೆ ಮಾಡಿದ್ದು, ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸೇರಿ ಅನೇಕರು ಪ್ರಮುಖರು ಭಾಗಿಯಾಗಿದ್ದರು.

ಇದನ್ನೂ ಓದಿ: ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು

ರೈಲು ನಿಲ್ದಾಣ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ಮದ್ಯಾಹ್ನ 2 ಗಂಟೆಗೆ ಆಗಮಿಸಿ 3.30ರ ವರೆಗೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯಿಂದ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣವನ್ನು ಬೆಳಗಾವಿಯಿಂದಲೇ ಬಿಡುಗಡೆ ಮಾಡಲಿದ್ದಾರೆ. ನಂತರ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ಮಾಸ್ಟರ್ ಪ್ಲ್ಯಾನ್

ಸಾವಗಾಂವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಜಾಗ ಪರಿಶೀಲನೆ ಮಾಡಿದ್ದು, ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ಬಳಿಕ ಸಮಾವೇಶ ಸ್ಥಳ ನಿಗದಿ ಮಾಡಲಾಗುತ್ತದೆ. ಜಿಲ್ಲೆಯ 18 ಕ್ಷೇತ್ರಗಳಿಂದ 3 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಆ ಮೂಲಕ ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್​ ರೂಪಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 pm, Wed, 22 February 23