ಕರ್ನಾಟಕದಲ್ಲಿ ಸುಳ್ಳು ಭರವಸೆ ನೀಡಿದ ಕಾಂಗ್ರೆಸನ್ನು ಮಹಾರಾಷ್ಟ್ರದಿಂದ ದೂರವಿಡಿ; ಪುಣೆಯಲ್ಲಿ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಪುಣೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ಎಂದಿಗೂ ದಲಿತರು, ಹಿಂದುಳಿದ ವರ್ಗಗಳು ಮತ್ತು ಆದಿವಾಸಿಗಳ ಪ್ರಗತಿಗೆ ಅವಕಾಶ ನೀಡಲಿಲ್ಲ ಎಂದು ಹೇಳಿದ್ದಾರೆ. ಹಾಗೇಮ ಕರ್ನಾಟಕದಲ್ಲಿ ಸುಳ್ಳು ಭರವಸೆಯ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವನ್ನು ಮಹಾರಾಷ್ಟ್ರದಿಂದ ದೂರವಿಡಿ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದಲ್ಲಿ ಸುಳ್ಳು ಭರವಸೆ ನೀಡಿದ ಕಾಂಗ್ರೆಸನ್ನು ಮಹಾರಾಷ್ಟ್ರದಿಂದ ದೂರವಿಡಿ; ಪುಣೆಯಲ್ಲಿ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
ಸುಷ್ಮಾ ಚಕ್ರೆ
|

Updated on: Nov 12, 2024 | 8:58 PM

ಪುಣೆ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ಲೂಟಿ ಮಾಡುತ್ತಿದೆ. ಜನರ ಹಣವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಪುಣೆಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ಮಹಾರಾಷ್ಟ್ರ ಮತ್ತು ಪುಣೆಯಲ್ಲಿ “ಡಬಲ್ ಇಂಜಿನ್” ಸರ್ಕಾರವು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿದರು. ಬಿಜೆಪಿ ಯಾವಾಗಲೂ ಮಧ್ಯಮ ವರ್ಗಕ್ಕೆ ಆದ್ಯತೆ ನೀಡುತ್ತದೆ ಎಂದು ಹೇಳಿದರು.

ಮಹಾರಾಷ್ಟ್ರವನ್ನು ಉಳಿಸಲು ಕಾಂಗ್ರೆಸ್ ಅನ್ನು ದೂರ ಇಡಬೇಕು. ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳು ಹೇಳಿ ಜನರಿಗೆ ಮತ ನೀಡುವಂತೆ ಒತ್ತಾಯಿಸಿತು. ಬಳಿಕ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸಿತು. ಆದರೆ, ಕಾಂಗ್ರೆಸ್​ಗೆ ತನ್ನ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಲಿಲ್ಲ. ಅದರ ಬದಲಿಗೆ, ಕಾಂಗ್ರೆಸ್ ಕರ್ನಾಟಕದಲ್ಲಿ ಸುಲಿಗೆ ಪ್ರಚಾರ ನಡೆಸುತ್ತಿದೆ. ಕರ್ನಾಟಕದಲ್ಲಿ ದಿನಕ್ಕೊಂದು ಹಗರಣಗಳು ಬಯಲಾಗುತ್ತಿವೆ. ಕಾಂಗ್ರೆಸ್ ಹಗಲು ಹೊತ್ತಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ದೂರವಿಡುವ ಜವಾಬ್ದಾರಿ ನಿಮ್ಮದಿ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರಝಾಕಾರರು ಹಚ್ಚಿದ ಬೆಂಕಿಯಿಂದ ನಿಮ್ಮ ಕುಟುಂಬವೇ ನಾಶವಾಗಿದ್ದನ್ನು ಮರೆಯಬೇಡಿ; ಖರ್ಗೆಗೆ ನೆನಪಿಸಿದ ಯೋಗಿ

“ಪುಣೆಯ ಜನರನ್ನು ಸಬಲೀಕರಣಗೊಳಿಸಲು ಮೂಲಸೌಕರ್ಯ, ಹೂಡಿಕೆ ಮತ್ತು ಕೈಗಾರಿಕೆ ಈ ಮೂರೂ ಅಗತ್ಯವಿದೆ. ನಾವು ಅದರ ಪ್ರತಿಯೊಂದು ಅಂಶದಲ್ಲೂ ಕೆಲಸ ಮಾಡಿದ್ದೇವೆ. ಕಳೆದ 10 ವರ್ಷಗಳಲ್ಲಿ ಎಫ್‌ಡಿಐ ಗಣನೀಯವಾಗಿ ಹೆಚ್ಚಾಗಿದೆ. ಹೂಡಿಕೆ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ. ಪುಣೆ ಯಾವಾಗಲೂ ಬಿಜೆಪಿಯ ಸಿದ್ಧಾಂತ ಮತ್ತು ದೃಷ್ಟಿಕೋನವನ್ನು ಬೆಂಬಲಿಸುತ್ತದೆ. ಈ ವಿಶ್ವಾಸಕ್ಕಾಗಿ ಪುಣೆಯ ಜನರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಹೊಸ ಮಹಾಯುತಿ ಸರ್ಕಾರವು ಪುಣೆ ಮತ್ತು ಮಹಾರಾಷ್ಟ್ರದ ಅಭಿವೃದ್ಧಿಗೆ ವೇಗವಾಗಿ ಕೆಲಸ ಮಾಡುತ್ತದೆ ಎಂದು ನಿಮಗೆ ಭರವಸೆ ನೀಡಲು ಬಂದಿದ್ದೇನೆ ಎಂದು ಮೋದಿ ಭಾಷಣದಲ್ಲಿ ಹೇಳಿದ್ದಾರೆ.

ಪ್ರಧಾನಿ ಮೋದಿ ಇಂದು ಮಹಾರಾಷ್ಟ್ರದಲ್ಲಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಪುಣೆ ಹೊರತಾಗಿ ಚಿಮೂರ್ ಮತ್ತು ಸೊಲ್ಲಾಪುರದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಮಹಾರಾಷ್ಟ್ರದ 288 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 20ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ