ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ತೆರಳುತ್ತಿದ್ದಾಗ ಸಿಎಂ ಬೊಮ್ಮಾಯಿ ಕಾರು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್​​ಪೋಸ್ಟ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ.

Follow us
ಗಂಗಾಧರ​ ಬ. ಸಾಬೋಜಿ
|

Updated on:Mar 31, 2023 | 3:26 PM

ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಚೆಕ್​​ಪೋಸ್ಟ್​ ಬಳಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಅವರ ಕಾರನ್ನು ಚುನಾವಣಾ ಆಯೋಗದ ಅಧಿಕಾರಿಗಳು ಶುಕ್ರವಾರ (ಮಾ. 31) ತಪಾಸಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ಬಳಿಯ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸುತ್ತಿದ್ದಾಗ ಘಟನೆ ನಡೆದಿದೆ. ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದ ತಂಡವು ಸಿಎಂ ಬೊಮ್ಮಾಯಿ ಅವರ ಕಾರನ್ನು ಪರಿಶೀಲಿಸಿದರು. ಯಾವುದೇ ರೀತಿಯ ಆಕ್ಷೇಪಾರ್ಹ ವಸ್ತುಗಳು ಸಿಗದ ಹಿನ್ನೆಲೆ ತಪಸಣೆ ಮಾಡಿ ಕಳುಹಿಸಿದ್ದಾರೆ. ಭಾರತದ ಚುನಾವಣಾ ಆಯೋಗ ಮಾರ್ಚ್ 29 ರಂದು ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿದೆ. ಆ ಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಹಾಗಾಗಿ ಸಿಎಂ ಬೊಮ್ಮಾಯಿ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

ಘಾಟಿ ಸುಬ್ರಮಣ್ಯಗೆ ವಿಶೇಷ ಪೂಜೆ ಸಲ್ಲಿದ ಸಿಎಂ ಬೊಮ್ಮಾಯಿ

ಬಳಿಕ ವಿಶೇಷ ಪೂಜೆ ಸಲ್ಲಿಸಲು ಘಾಟಿ ಸುಬ್ರಮಣ್ಯಕ್ಕೆ ಸಿಎಂ ಬೊಮ್ಮಾಯಿ ಭೇಟಿ ನೀಡಿದರು. ಕಳೆದ ಒಂದೂವರೆ ತಿಂಗಳಿಂದೆಯೆ ಪೂಜೆಗೆ ಆಗಮಿಸಲು ಸಿದ್ದವಾಗಿದ್ದರು. ಆದರೆ ಆಗ ಭೇಟಿ ನೀಡಲು ಆಗದ ಕಾರಣ ಇದೀಗ ನರಸಿಂಹ ಸಮೇತ ದೇವಾಲಯಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Karnataka Polls: ಮೋದಿ ರಾಜ್ಯ ದಂಡಯಾತ್ರೆಗೆ 40 ಪರ್ಸೆಂಟ್ ಅಲ್ಲ, 200 ಪರ್ಸೆಂಟ್ ಡೀಲ್: ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದಲ್ಲಿ ಆಯುಷ್ಮಾನ್ ಭಾರತ್ ಕಾರ್ಡ್​ ವಿತರಣೆ ಸ್ಥಗಿತ 

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್​ ಗುರುತಿನ ಚೀಟಿ (Ayushman Bharat Card) ವಿತರಣೆ ಕಾರ್ಯ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ವಿತರಣೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಮಾಡಲಾಗಿದೆ. ಮಾತ್ರವಲ್ಲದೆ, ಗುರುತಿನ ಚೀಟಿ ಕುರಿತಂತೆ ಎಲ್ಲಾ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್​ ಹಾಕಲಾಗಿರುವುದರಿಂದ ರಾಜ್ಯದ ಜನರಿಗೆ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆಯ ಆಯುಷ್ಮಾನ್ ಭಾರತ್​ ಕಾರ್ಡ್​ ಸದ್ಯಕ್ಕೆ ಸಿಗುವುದಿಲ್ಲ.

ಇಂದಿನ ಕಾಲದಲ್ಲಿ ಆರೋಗ್ಯ ವಿಮಾ ಪಾಲಿಸಿಯನ್ನು ಹೊಂದುವುದು ಅತ್ಯಗತ್ಯ, ಏಕೆಂದರೆ ಹಣದುಬ್ಬರ ಏರಿಕೆಯೊಂದಿಗೆ ವೈದ್ಯಕೀಯ ಚಿಕಿತ್ಸೆಗಳ ಮೂಲ ವೆಚ್ಚಗಳು ಸಹ ಹೆಚ್ಚಾಗಿದೆ. ಆದ್ದರಿಂದ, ಸಮಾಜದಲ್ಲಿನ ವಿವಿಧ ಗುಂಪುಗಳ ಜನರಿಗೆ ಸಹಾಯ ಮಾಡಲು ಮತ್ತು ಬೆಂಬಲಿಸಲು ಭಾರತ ಸರ್ಕಾರವು ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ ಅಥವಾ ಆಯುಷ್ಮಾನ್ ಭಾರತ್ ಯೋಜನೆಯನ್ನು ಹೊರತಂದಿದೆ. ಇದರ ಅಡಿಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಜನರು ತಮ್ಮ ಹಣಕಾಸಿನ ಉಳಿತಾಯವನ್ನು ಸಂಪೂರ್ಣವಾಗಿ ಖಾಲಿ ಮಾಡದೆ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: ವಿನಯ್ ಕುಲಕರ್ಣಿ ಮೂಲಕ ಶಿಗ್ಗಾವಿಯಲ್ಲಿ ಬೊಮ್ಮಾಯಿ ಹಣೆಯಲು ಮುಂದಾದ ಕಾಂಗ್ರೆಸ್​ಗೆ ಒಳ ಏಟಿನ ಭೀತಿ

ಆಯುಷ್ಮಾನ್ ಭಾರತ್ ಯೋಜನೆಯ ಪಾಲಿಸಿದಾರರು ಕಾರ್ಡ್ ಅನ್ನು ಪಡೆಯುತ್ತಾರೆ, ಅದನ್ನು ಬಳಸಿಕೊಂಡು ಅವರು ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಮತ್ತು ವೈದ್ಯಕೀಯ ತುರ್ತು ಪರಿಸ್ಥಿತಿಯಲ್ಲಿ ತಮ್ಮ ಪಾಲಿಸಿಗಳನ್ನು ಕ್ಲೈಮ್ ಮಾಡಬಹುದು. ಯಾವುದೇ ತೊಂದರೆಗಳಿಲ್ಲದೆ ನಗದು ರಹಿತ ಕ್ಲೈಮ್‌ಗಳನ್ನು ಮಾಡಲು ಇದು ಅವರಿಗೆ ಅವಕಾಶ ನೀಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:26 pm, Fri, 31 March 23

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ