ಮತಗಟ್ಟೆ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌ ತೀವ್ರ ಪೈಪೋಟಿ

Madhya Pradesh Assembly Election Exit poll: ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್‌ನ ಮತಗಟ್ಟೆ ಸಮೀಕ್ಷೆ ಪ್ರಕಾರ ಮದ್ಯಪ್ರದೇಶದಲ್ಲಿ ಬಿಜೆಪಿ 118 ರಿಂದ 130 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ 97-107 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ. ಇತರ ಪಕ್ಷಗಳು 0-2 ಗಳಿಸಲಿವೆ ಎಂದು ಭವಿಷ್ಯ ನುಡಿದಿದೆ.

ಮತಗಟ್ಟೆ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್‌ ತೀವ್ರ ಪೈಪೋಟಿ
ಕಮಲ್ ನಾಥ್- ಶಿವರಾಜ್ ಸಿಂಗ್ ಚೌಹಾಣ್
Follow us
ರಶ್ಮಿ ಕಲ್ಲಕಟ್ಟ
|

Updated on: Nov 30, 2023 | 7:17 PM

ದೆಹಲಿ ನವೆಂಬರ್ 30: ಮಧ್ಯಪ್ರದೇಶದಲ್ಲಿ (Madhya Pradesh) ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ ಎಂದು  ಮತಗಟ್ಟೆ ಸಮೀಕ್ಷೆ ಹೇಳುತ್ತಿದೆ .2005 ರಿಂದ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್, 2018 ಮತ್ತು 2020 ರ ನಡುವಿನ ಅಲ್ಪಾವಧಿಯನ್ನು ಹೊರತುಪಡಿಸಿ, ಐದನೇ ಅವಧಿಗೆ ನಿರೀಕ್ಷೆಯಲ್ಲಿದ್ದಾರೆ, ಆದರೆ ಅವರ ಪಕ್ಷವು ಅವರನ್ನು ಈ ಬಾರಿ ಉನ್ನತ ಹುದ್ದೆಗೆ ಅಭ್ಯರ್ಥಿಯಾಗಿ ಘೋಷಿಸಿಲ್ಲ. ಇತ್ತ ರಾಜ್ಯ ಘಟಕದ ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರಚಾರ ನಡೆಸುತ್ತಿದ್ದು, ಅವರನ್ನು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಬೆಂಬಲಿಸಿದ್ದಾರೆ. ರಾಜ್ಯದಲ್ಲಿ 230 ಸ್ಥಾನಗಳಿದ್ದು ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ.

ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್‌ನ ಎಕ್ಸಿಟ್ ಪೋಲ್ ಬಿಜೆಪಿ 118 ರಿಂದ 130 ಸ್ಥಾನಗಳನ್ನು ಗೆಲ್ಲುತ್ತದೆ  ಕಾಂಗ್ರೆಸ್ 97-107 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ. ಇತರ ಪಕ್ಷಗಳು 0-2 ಗಳಿಸಲಿವೆ ಎಂದು ಭವಿಷ್ಯ ನುಡಿದಿದೆ. ಪೋಲ್‌ಸ್ಟ್ರಾಟ್‌ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್ ಪಕ್ಷವು 111 ರಿಂದ 121 ಸ್ಥಾನಗಳನ್ನು ಗೆಲ್ಲುತ್ತದೆ ಮತ್ತು ಬಿಜೆಪಿ 106-116 ಸೀಟು ಲಭಿಸಲಿದೆ. ಇತರ ಪಕ್ಷಗಳು 0-6 ಸೀಟು ಗಳಿಸಲಿವೆ.

ಜನ್ ಕಿ ಬಾತ್ ತನ್ನ ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್‌ಗೆ 102-125, ಆಡಳಿತಾರೂಢ ಬಿಜೆಪಿಗೆ 100-123 ಮತ್ತು ಇತರರಿಗೆ ಐದು ಸ್ಥಾನಗಳನ್ನು ನಿರೀಕ್ಷಿಸಿದೆ.

ದೈನಿಕ್ ಭಾಸ್ಕರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಬಿಜೆಪಿಗೆ 95- 115, ಕಾಂಗ್ರೆಸ್ 105- 120, ಬಿಎಸ್ಪಿ-0, ಇತರೆ 0-15 ಸ್ಥಾನ ಗಳಿಸಲಿದೆ. ನ್ಯೂಸ್ 24- ಟುಡೇಸ್ ಚಾಣಕ್ಯ ಸಮೀಕ್ಷೆ ಪ್ರಕಾರ ಬಿಜೆಪಿ 151, ಕಾಂಗ್ರೆಸ್ 71, ಬಿಎಸ್ಪಿ-0, ಇತರೆ 5 ಸೀಟುಗಳನ್ನು ಗಳಿಸಲಿದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಗೆಹ್ಲೋಟ್ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ? ಭವಿಷ್ಯ ನುಡಿದ ಎರಡು ಎಕ್ಸಿಟ್ ಪೋಲ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಪ್ರಚಾರ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಗೆದ್ದರೆ ಶಿವರಾಜ್ ಸಿಂಗ್ ಚೌಹಾಣ್ ಮುಖ್ಯಮಂತ್ರಿಯಾಗುತ್ತಾರೆಯೇ ಎಂಬ ಬಗ್ಗೆ ಪಕ್ಷ ಸ್ಪಷ್ಟ ಉತ್ತರ ನೀಡುವುದನ್ನು ತಪ್ಪಿಸಿದೆ. ವಿಧಾನಸಭೆ ಚುನಾವಣೆಗೆ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್ ಮತ್ತು ಫಗ್ಗನ್ ಸಿಂಗ್ ಕುಲಸ್ತೆ ಸೇರಿದಂತೆ ಏಳು ಸಂಸದರನ್ನು ಪಕ್ಷವು ಕಣಕ್ಕಿಳಿಸಿದೆ.

ಈ ಅಂಶಗಳು ಬಿಜೆಪಿಯು ಚೌಹಾಣ್ ಅವರನ್ನು ಮೀರಿ ಉನ್ನತ ಹುದ್ದೆಗಾಗಿ ನೋಡುತ್ತಿರಬಹುದು ಎಂಬ ಊಹಾಪೋಹಗಳಿಗೆ ಕಾರಣವಾಯಿತು, ಆದರೆ ‘ಮಾಮಾ’ ಎಂದೂ ಕರೆಯಲ್ಪಡುವ ಹಿರಿಯ ನಾಯಕ ರಾಜ್ಯದಲ್ಲಿ ಪಕ್ಷದ ಅತ್ಯಂತ ಜನಪ್ರಿಯ ನಾಯಕರಾಗಿ ಉಳಿದಿದ್ದಾರೆ ಎಂದು ಹಲವಾರು ತಜ್ಞರು ಗಮನಸೆಳೆದಿದ್ದಾರೆ.

ಕಾಂಗ್ರೆಸ್‌ನ ರಾಜ್ಯ ಘಟಕದ ಮುಖ್ಯಸ್ಥರಾಗಿರುವ ಕಮಲ್ ನಾಥ್‌ಗೆ, 2020 ರಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಅವರ ಬಂಡಾಯದ ನಂತರ ಈ ಚುನಾವಣೆಗಳು ಎರಡು ಪಟ್ಟು ಮಹತ್ವದ್ದಾಗಿವೆ, ಇದು ಕೇವಲ 15 ತಿಂಗಳ ನಂತರ ಅವರ ಸರ್ಕಾರ ಪತನಕ್ಕೆ ಕಾರಣವಾಯಿತು. ಚುನಾವಣೆಗೆ ಮುಂಚಿತವಾಗಿ ಬಂಡಾಯದ ಕುರಿತು ಕೇಳಲಾದ ಪ್ರಶ್ನೆಗೆ, ಕಮಲ್ ನಾಥ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಮತ್ತು ಹಾಗೆ ಮಾಡಲು ಸಿಂಧಿಯಾ ಅಗತ್ಯವಿಲ್ಲ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ