Mallikarjun Khuba: ಬಿಜೆಪಿ ತೊರೆದು ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

|

Updated on: Mar 31, 2023 | 4:40 PM

ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಇಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಮರಳಿ ಜೆಡಿಎಸ್​ ಸೇರ್ಪಡೆ ಆಗಿದ್ದಾರೆ.

Mallikarjun Khuba: ಬಿಜೆಪಿ ತೊರೆದು ಜೆಡಿಎಸ್​ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ
ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್​ ಸೇರ್ಪಡೆಯಾದ ಮಲ್ಲಿಕಾರ್ಜುನ ಖೂಬಾ
Follow us on

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ (Mallikarjun Khuba) ಅವರು ಇಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಮರಳಿ ಜೆಡಿಎಸ್​ ಸೇರ್ಪಡೆ ಆಗಿದ್ದಾರೆ. ಜೆ.ಪಿ.ನಗರದಲ್ಲಿರುವ ಕುಮಾರಸ್ವಾಮಿ ನಿವಾಸದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಜೆಡಿಎಸ್​​ ಪಕ್ಷದ ಶಾಲು ಹಾಕುವ ಮೂಲಕ ಮಲ್ಲಿಕಾರ್ಜುನ ಖೂಬಾ ಅವರನ್ನು ಕುಮಾರಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು. ಮಲ್ಲಿಕಾರ್ಜುನ ಖೂಬಾ ಜೆಡಿಎಸ್​​ ಪಕ್ಷದಿಂದ ಬಸವ ಕಲ್ಯಾಣ ಕ್ಷೇತ್ರದಿಂದ ಈ ಮುಂಚೆ ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಕಾಂಗ್ರೆಸ್​​ ಅಭ್ಯರ್ಥಿ ಬಿ. ನಾರಾಯಣ ರಾವ್​ ವಿರುದ್ಧ ಸೋಲುಂಡಿದ್ದರು. 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದು, ಆದರೆ ಬಿಜೆಪಿ ಖೂಬಾ ಅವರಿಗೆ ಟಿಕೆಟ್​ ನೀಡದೆ ಶರಣು ಸಲಗಾರಗೆ ಟಿಕೆಟ್​ ನೀಡಲಾಗಿತ್ತು. ಇದರಿಂದ ಅವರು ಅಸಮಾಧಾನಗೊಂಡಿದ್ದರು.

ಖೂಬಾ ಅವರು ಮರಳಿ ತಮ್ಮ ಮನೆಗೆ ಬಂದಿದ್ದಾರೆ: ಹೆಚ್​.ಡಿ ಕುಮಾರಸ್ವಾಮಿ

ಜೆಡಿಎಸ್​ ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಖೂಬಾ, ಶುಭ ಸಮಯ ಇದ್ದ ಕಾರಣಕ್ಕೆ ಮಾಜಿ ಸಿಎಂ ನಿವಾಸಕ್ಕೆ ತೆರಳಿ ಪಕ್ಷಕ್ಕೆ ಸೇರ್ಪಡೆ ಆಗಿದ್ದೇನೆ ಎಂದು ಹೇಳಿದರು. ಬಳಿಕ ಮಾತನಾಡಿದ ಹೆಚ್​.ಡಿ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖೂಬಾ ಅವರು ಈ ಮುಂಚೆ ಜೆಡಿಎಸ್​ ಪಕ್ಷದಲ್ಲೇ ಇದ್ದವರು. ಕಾರಣಾಂತರಳಿಂದ ಪಕ್ಷ ತೋರಿದ್ದರು. ಈಗ ಮರಳಿ ತಮ್ಮ ಮನೆಗೆ ಬಂದಿದ್ದಾರೆ.

ಇದನ್ನೂ ಓದಿ: Karnataka Assembly Election 2023: ಇಂದು ಒಂದೇ ದಿನ ಬಿಜೆಪಿ, ಜೆಡಿಎಸ್​ ಶಾಸಕರು ರಾಜೀನಾಮೆ: ಸರದಿಯಲ್ಲಿ ಮತ್ತೋರ್ವ ಶಾಸಕ

ಶೀಘ್ರದಲ್ಲಿಯೇ ಅವರು ಪಕ್ಷದ ಕಚೇರಿಯಲ್ಲಿ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್​ ಮತ್ತಿತರೆ ಹಿರಿಯ ನಾಯಕರ ಸಮಕ್ಷಮದಲ್ಲಿ ಅಧೀಕೃತವಾಗಿ ಪಕ್ಷ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದರು.

ಸ್ಪೀಕರ್ ಕಾಗೇರಿಗೆ ಗೋಪಾಲ ಕೃಷ್ಣ ರಾಜೀನಾಮೆ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಬಿಜೆಪಿ ಶಾಸಕ ಗೋಪಾಲ ಕೃಷ್ಣ ಸಹ ಅಧಿಕೃತ ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಜತೆ ಶಿರಸಿಗೆ ಹೋಗಿ ಸ್ಫೀಕರ್ ವಿಶ್ವೇಶ್ವರ ಹೆಗಡೆ ಅವರಿಗೆ ರಾಜೀನಾಮೆ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಇನ್ನು ರಾಜೀನಾಮೆ ಬಳಿಕ ಟಿವಿ9 ಜೊತೆ ಮಾತನಾಡಿದ ಗೋಪಾಲ ಕೃಷ್ಣ, ನನಗೆ ಬಿಜೆಪಿಯಿಂದ ಬೇಜಾರಾಗಿಲ್ಲ. ಮನಸಿಗೆ ನೋವಾಗಿಲ್ಲ. ಪಕ್ಷ ಎಲ್ಲ ಸಹಾಯ ಮಾಡಿದೆ. ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ‌ಕೊಟ್ಟಿದ್ದೇನೆ. ನಾನೇನು ಟಿಕೆಟ್ ಗಾಗಿ ಬೇಡಿಕೆ ಇಟ್ಟಿಲ್ಲ. ಕಾಂಗ್ರೆಸ್ ಟಿಕೆಟ್ ಕೊಟ್ಟರೇ ನೋಡೋಣ ಎಂದಯ ಪರೋಕ್ಷವಾಗಿ ಈ ಬಾರಿಯೂ ಚುನಾವಣೆ ಅಖಾಡಕ್ಕಿಳಿಯುವುದಾಗಿ ಹೇಳಿದರು.

ಇದನ್ನೂ ಓದಿ:

ರಾಜೀನಾಮೆ ಸರದಿಯಲ್ಲಿ ಮತ್ತೋರ್ವ ಶಾಸಕ

ಇಂದು ಇಬ್ಬರು ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡಿದ್ದಾರೆ. ಅರಸಿಕೆರೆ ಜೆಡಿಎಸ್​ ಶಾಸಕ ಶಿವಲಿಂಗೇಗೌಡ ಸಹ ರಾಜೀನಾಮೆ ನೀಡುವ ಸರದಿಯಲ್ಲಿದ್ದಾರೆ. ಈಗಾಗಲೇ ಅವರು ಕಾಂಗ್ರೆಸ್​ ಸೇರುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅಥವಾ ನಾಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿಡುವ ಸಾಧ್ಯತೆಗಳಿವೆ. ಇನ್ನು  ಗುಬ್ಬಿ ಕ್ಷೇತ್ರದ ಜೆಡಿಎಸ್​ ಶಾಸಕ ಶ್ರೀನಿವಾಸ್​ ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಿನ್ನೆ ಅಷ್ಟೇ ಅವರು ಅಧಿಕೃತವಾಗಿ ಕಾಂಗ್ರೆಸ್​ ಸೇರಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 4:39 pm, Fri, 31 March 23