ಸಿಎಂ ಬೊಮ್ಮಾಯಿ ತವರು ಕ್ಷೇತ್ರದ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ: ಬಿಜೆಪಿಗೆ ಆಘಾತ ನೀಡಿದ ಮಂಜುನಾಥ​ ಕುನ್ನೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಲಗೈ ಬಂಟ, ಪಂಚಮಸಾಲಿ ಸಮುದಾಯದ ಮುಖಂಡ, ಮಾಜಿ ಸಂಸದ ಮಂಜುನಾಥ​ ಕುನ್ನೂರು ಮತ್ತೆ ಕೈ ಹಿಡಿಯುವ ಮೂಲಕ ಕಮಲ ನಾಯಕರಿಗೆ ಆಘಾತ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ತವರು ಕ್ಷೇತ್ರದ ಪಂಚಮಸಾಲಿ ಮುಖಂಡ ಮರಳಿ ಕಾಂಗ್ರೆಸ್​ಗೆ: ಬಿಜೆಪಿಗೆ ಆಘಾತ ನೀಡಿದ ಮಂಜುನಾಥ​ ಕುನ್ನೂರು
ಮಂಜುನಾಥ ಕುನ್ನೂರು ಕಾಂಗ್ರೆಸ್​ ಸೇರ್ಪಡೆ
Follow us
ವಿವೇಕ ಬಿರಾದಾರ
|

Updated on:Mar 27, 2023 | 8:06 PM

ಬೆಂಗಳೂರು: ದೇಶದಲ್ಲಿ ವಿಧಾನಸಭೆ (Assembly Election) ಮತ್ತು ಲೋಕಸಭೆ ಚುನಾವಣೆ (Lok Sabha Election) ಹೊಸ್ತಿಲಿನಲ್ಲಿ ಪಕ್ಷಾಂತರ ಸಹಜ ಪ್ರಕ್ರಿಯೆಯಾಗಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಕಾವು ಜೋರಾಗಿಯೇ ಇದ್ದು, ಬೇಸಿಗೆಯ ಬಿಸಿಗಿಂತ, ಚುನಾವಣೆಯ ಬಿಸಿ ಜಾಸ್ತಿ ಇದೆ. ಚುನಾವಣೆಗೆ ದಿನ ಎಣಿಕೆ ಶುರುವಾಗಿದ್ದು, ಪಕ್ಷಾಂತರ ಹೆಚ್ಚುತ್ತಿದೆ. ಬಿಜೆಪಿಯ (BJP) ಹಲವು ನಾಯಕರು ಕಾಂಗ್ರೆಸ್ (Congress)​ ಸೇರ್ಪಡೆ ಮೂಲಕ ಬಿಜೆಪಿಗೆ ಬರೆ ಎಳೆಯುತ್ತಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಬಲಗೈ ಬಂಟ, ಪಂಚಮಸಾಲಿ ಸಮುದಾಯದ ಮುಖಂಡ, ಮಾಜಿ ಸಂಸದ ಮಂಜುನಾಥ​ ಕುನ್ನೂರು (Manjunath Kunnur) ಮತ್ತೆ ಕೈ ಹಿಡಿಯುವ ಮೂಲಕ ಕಮಲ ನಾಯಕರಿಗೆ ಆಘಾತ ನೀಡಿದ್ದಾರೆ.

ಇಂದು (ಮಾ.27) ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಾಜಿ ಸಂಸದ ಮಂಜುನಾಥ​ ಕುನ್ನೂರು, ಅವರ ಪುತ್ರ ರಾಜು ಕುನ್ನೂರು, ಚಿಂತಾಮಣಿಯ ನಾಯಕರಾದ ಎಂ.ಸಿ. ಸುಧಾಕರ್ ಹಾಗೂ ಕೆ.ಆರ್ ಪೇಟೆ ಕ್ಷೇತ್ರದ ಜೆಡಿಎಸ್​ ನಾಯಕ ಶ್ರೀ ಬಿ.ಎಲ್ ದೇವರಾಜು ಕಾಂಗ್ರೆಸ್​ಗೆ ಜೈ ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಕೂಡ ಯಾರೂ 2 ಕ್ಷೇತ್ರದಿಂದ ಸ್ಪರ್ಧಿಸಲ್ಲ: ಕಮಲ ನಾಯಕರಿಗೆ ಪ್ರಹ್ಲಾದ್​ ಜೋಶಿ ಶಾಕ್​​

ಮಂಜುನಾಥ್ ಕುನ್ನೂರು ಶಿಗ್ಗಾಂವಿ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 1989-1994 ಮತ್ತು 1994-1999 ರ ಅವಧಿಯಲ್ಲಿ ಶಾಸಕರಾಗಿದ್ದು, 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು. 2008ರಲ್ಲಿ ಕಾಂಗ್ರೆಸ್‌ನಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಪ್ರಹ್ಲಾದ್ ಜೋಶಿ ವಿರುದ್ಧ ಸೋತಿದ್ದರು 2018ರಲ್ಲಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿ ಬಿಜೆಪಿ ಸೇರಿದ್ದರು.

ಈ ವೇಳೆ ಮಾತನಾಡಿದ ಮಂಜುನಾಥ್​ ಕುನ್ನೂರು ಬಿಜೆಪಿ ನಿರ್ನಾಮ ಮಾಡುವುದಕ್ಕೆ ನಾನು ಕೆಲಸ ಮಾಡುತ್ತೇನೆ. ಈ ಹಿಂದೆ ನಾನು ಕಾಂಗ್ರೆಸ್ ಪಕ್ಷ ಬಿಟ್ಟು ದೊಡ್ಡ ತಪ್ಪು ಮಾಡಿದೆ. ಭಾರತೀಯ ಜನತಾ ಪಕ್ಷ ಕೇಡರ್ ಬೇಸ್ ಪಾರ್ಟಿ ಅಂತ ಹೇಳುತ್ತಾರೆ. ಬಿಜೆಪಿಗೆ ತತ್ವ ಸಿದ್ಧಾಂತವೇ ಇಲ್ಲ. ಪಂಚಮಸಾಲಿ ಸ್ವಾಮೀಜಿಗಳು ಹೋರಾಟ ಮಾಡಿದರೂ ಸ್ಪಂದಿಸಲಿಲ್ಲ. ನಮಗೂ ಮುಸ್ಲೀಂರಿಗೂ ಜಗಳ ಹಚ್ಚುವುದಕ್ಕೆ ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.

ಡಾ.ಎಂ.ಸಿ.ಸುಧಾಕರ್ 2008, 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದು, ಕಳೆದ ಚುನಾವಣೆಯಲ್ಲಿ ಅವರು ಬಿಜೆಪಿ ಸೇರಿದ್ದರು. ಆದರೆ, ಕೆಲ ತಿಂಗಳ ಹಿಂದೆ ಅವರು ಮತ್ತೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದಾರೆ. ಅವರನ್ನು ಬೆಂಬಲಿಸಿ 100ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್‌ ಸೇರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 pm, Mon, 27 March 23

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?