ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ರೆಸಾರ್ಟ್ ವಾಸದ ಬೆನ್ನಲ್ಲೇ  ತಮ್ಮ ಅಭ್ಯರ್ಥಿಗಳಿಗೆ ಕಾವಲಾಗಿ ನಿಂತ ಎಎಪಿ

Goa Assembly Election ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷವೂ ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೋವಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ರೆಸಾರ್ಟ್ ವಾಸದ ಬೆನ್ನಲ್ಲೇ  ತಮ್ಮ ಅಭ್ಯರ್ಥಿಗಳಿಗೆ ಕಾವಲಾಗಿ ನಿಂತ ಎಎಪಿ
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 09, 2022 | 3:17 PM

ಪಂಜಿಂ: ಗೋವಾದಲ್ಲಿ (Goa Election) ಕಾಂಗ್ರೆಸ್ ತನ್ನ ಶಾಸಕ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷವೂ(AAP) ತನ್ನ ಅಭ್ಯರ್ಥಿಗಳನ್ನು ಕಾವಲು ಕಾಯಲು ಮುಂದಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಎಎಪಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಾದಲ್ಲಿ ಅತಂತ್ರ  ಅಸೆಂಬ್ಲಿ ಮತ್ತು ಬಿಜೆಪಿಯೊಂದಿಗೆ ಕಾಂಗ್ರೆಸ್‌ನ  ಜಿದ್ದಾಜಿದ್ದಿ ಪೈಪೋಟಿ ಭವಿಷ್ಯವಾಣಿಯೊಂದಿಗೆ 2017 ರ ಪುನರಾವರ್ತನೆಯನ್ನು ತಪ್ಪಿಸಲು ಎಎಪಿ ಮತ್ತು ಕಾಂಗ್ರೆಸ್ ಎರಡೂ ತಮ್ಮ ಅಭ್ಯರ್ಥಿಗಳಿಗೆ ಕಾವಲಿರಲು ನಿರ್ಧರಿಸಿವೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಉತ್ತರ ಗೋವಾದ ರೆಸಾರ್ಟ್‌ಗೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. ಅವರು ಗುರುವಾರದ ಮತ ಎಣಿಕೆ ಮುಗಿದು ಫಲಿತಾಂಶ ಹೊರಬೀಳುವವರೆಗೆ ಅಲ್ಲಿಯೇ ಇರುತ್ತಾರೆ. ಚುನಾವಣೋತ್ತರ ಸಮೀಕ್ಷೆಗಳು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಮೂರು ಸ್ಥಾನಗಳನ್ನು ಭವಿಷ್ಯ ನುಡಿದಿವೆ. ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಸ್ಥಾನ ಸಿಗುವುದಿಲ್ಲ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿವೆ. ಆದರೆ ಕಳೆದ ಬಾರಿಯ ಫಲಿತಾಂಶವನ್ನು ಗಮನಿಸಿದರೆ ಕಾಂಗ್ರೆಸ್ ಯಾವುದೇ ಅವಕಾಶಗಳನ್ನು ತೆಗೆದುಕೊಳ್ಳುತ್ತಿಲ್ಲ. ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನ ಗೋವಾದಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಮಂಗಳವಾರ ಎನ್‌ಡಿಟಿವಿ ಜತೆ ಮಾತನಾಡಿದ್ದು ತಮ್ಮ ಪಕ್ಷವು “ಅಭ್ಯರ್ಥಿಗಳನ್ನು ಕದಿಯುವವರ” ವಿರುದ್ಧ ಕಾವಲು ಕಾಯುತ್ತಿದೆ ಎಂದು ಹೇಳಿದ್ದಾರೆ. 2017 ರ ಚುನಾವಣಾ ಫಲಿತಾಂಶಗಳನ್ನು ಉಲ್ಲೇಖಿಸಿ, ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ವಿಫಲವಾದಾಗ, ಪಕ್ಷವು ತನ್ನ ಮನೆಯನ್ನು ಹೆಚ್ಚು ಪ್ರಬಲವಾಗಿ ಕಾಪಾಡುತ್ತಿದೆ. ಈ ಬಾರಿ  ಅಭ್ಯರ್ಥಿಗಳನ್ನು “ಕಳವು” ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

“ಬಿಜೆಪಿ ವಿರೋಧಿ ರಂಗ”ಕ್ಕಾಗಿ ಕಾಂಗ್ರೆಸ್ ಇತರ ಪಕ್ಷಗಳೊಂದಿಗೆ ಸಂಪರ್ಕದಲ್ಲಿದೆ. ಬಂಗಾಳ ಮತ್ತು ದೆಹಲಿಯಂತಹ ಇತರ ರಾಜ್ಯಗಳಲ್ಲಿ ತಿಳಿದಿರುವ ವಿರೋಧಿಗಳಾದ ಎಎಪಿ ಮತ್ತು ಟಿಎಂಸಿಯೊಂದಿಗೆ ನೀವು ಸಂಪರ್ಕದಲ್ಲಿದ್ದಾರೆಯೇ ಎಂದು ಎನ್‌ಡಿಟಿವಿ ಕೇಳಿದ ಪ್ರಶ್ನೆಗೆ, ಚಿದಂಬರಂ ಅವರು, “ನಾವು ನೇರವಾಗಿ ಅಲ್ಲ, ಆದರೆ ನಮ್ಮ ಪಕ್ಷದ ಗೋವಾ ನಾಯಕರು ಇತರ ಪಕ್ಷಗಳ ಗೋವಾ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು ತೃಣಮೂಲ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಮೈತ್ರಿಯನ್ನು ಈ ಹಿಂದೆ ಪ್ರಸ್ತಾಪಿಸಿತ್ತು. ಆದರೆ ಚಿದಂಬರಂ ಅವರು ಗೋವಾದಲ್ಲಿ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾಪವನ್ನು “ಪರಿಗಣಿಸಲಾಗಿಲ್ಲ” ಎಂದು ಹೇಳಿದರು.

40 ಸದಸ್ಯ ಬಲದ ಗೋವಾ ವಿಧಾನಸಭೆಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: Goa Assembly Election: ಗೋವಾದಲ್ಲಿ ಅಧಿಕಾರಕ್ಕೇರಲು ಟಿಎಂಸಿ, ಆಮ್ ಆದ್ಮಿ ಜೊತೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್