Goa Assembly Election: ಗೋವಾದಲ್ಲಿ ಅಧಿಕಾರಕ್ಕೇರಲು ಟಿಎಂಸಿ, ಆಮ್ ಆದ್ಮಿ ಜೊತೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ

ದೆಹಲಿ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಕಡು ಪ್ರತಿಸ್ಪರ್ಧಿಗಳಾದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಗೋವಾದಲ್ಲಿ ಮೈತ್ರಿಗೆ ಸಿದ್ಧವಿದ್ದೇವೆ ಎಂದು ಕಾಂಗ್ರೆಸ್ ಘೋಷಿಸಿದೆ.

Goa Assembly Election: ಗೋವಾದಲ್ಲಿ ಅಧಿಕಾರಕ್ಕೇರಲು ಟಿಎಂಸಿ, ಆಮ್ ಆದ್ಮಿ ಜೊತೆ ಮೈತ್ರಿಗೆ ಕಾಂಗ್ರೆಸ್ ಸಿದ್ಧತೆ
ಕಾಂಗ್ರೆಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 09, 2022 | 1:45 PM

ನವದೆಹಲಿ: 5 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಉಳಿದಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ, ಗೋವಾ ರಾಜ್ಯಗಳಲ್ಲಿ ಚುನಾವಣೆ ನಡೆದಿದ್ದು, ಮಾ. 10ರಂದು ಚುನಾವಣಾ ಫಲಿತಾಂಶ (Elections Result) ಪ್ರಕಟವಾಗಲಿದೆ. ಗೋವಾದಲ್ಲಿ ಅಧಿಕಾರಕ್ಕಾಗಿ ಬಿಜೆಪಿ (BJP) ದೊಡ್ಡ ಸಭೆಗಳನ್ನು ನಡೆಸಿ, ಚಟುವಟಿಕೆಗಳನ್ನು ತೀವ್ರಗೊಳಿಸಿದೆ. ಆದರೆ, ಗೋವಾದಲ್ಲಿ (Goa Assembly Election) ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವುದಿಲ್ಲ ಎಂದು ಎಕ್ಸಿಟ್ ಪೋಲ್‌ಗಳು (Exit Polls Result) ಭವಿಷ್ಯ ನುಡಿದಿವೆ. ಈ ಹಿನ್ನೆಲೆಯಲ್ಲಿ ಗೋವಾ ವಿಧಾನಸಭಾ ಚುನಾವಣೆಯ ಪ್ರಮುಖ 10 ಬೆಳವಣಿಗೆಗಳು ಇಲ್ಲಿವೆ:

  1. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದಾರೆ. ಗೋವಾದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ವಿವರಿಸಿದ್ದಾರೆ. ಅದಾದ ನಂತರ ಸಾವಂತ್ ಅವರು ಬಿಜೆಪಿಯ ಗೋವಾ ಉಸ್ತುವಾರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಲು ಮುಂಬೈಗೆ ಹಾರಲಿದ್ದಾರೆ.
  2.  ಸರ್ಕಾರ ರಚಿಸಲು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಮತ್ತು ಸ್ವತಂತ್ರ ಪಕ್ಷಗಳೊಂದಿಗೆ ಬಿಜೆಪಿ ಮಾತುಕತೆ ಆರಂಭಿಸಿದೆ ಎನ್ನಲಾಗಿದೆ. 2019ರಲ್ಲಿ ಮನೋಹರ್ ಪರಿಕ್ಕರ್ ಅವರ ನಿಧನದ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಗೋವಾ ಸಂಪುಟದಿಂದ ಪಕ್ಷವನ್ನು ಕೈಬಿಟ್ಟಿದ್ದ ಪ್ರಮೋದ್ ಸಾವಂತ್ ಅವರನ್ನು ಬೆಂಬಲಿಸಲು ಎಂಜಿಪಿ ಒಲವು ಹೊಂದಿಲ್ಲ ಎಂದು ಮೂಲಗಳು ತಿಳಿಸಿವೆ.
  3. ಮೂಲಗಳು ಹೇಳುವಂತೆ ಎಂಜಿಪಿ ಮತ್ತು ಇತರ ಪಕ್ಷಗಳು ತಮ್ಮ ಬೆಂಬಲದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಬೆಲೆ ಬರುತ್ತದೆ ಎಂದು ಸುಳಿವು ನೀಡಿವೆ. ಸಂಖ್ಯಾಬಲಕ್ಕಾಗಿ ಸಾವಂತ್ ಅವರ ಬದಲಾಗಿ ಬೇರೆಯವರನ್ನು ಸಿಎಂ ಮಾಡುವ ಬಗ್ಗೆಯೂ ಬಿಜೆಪಿ ಯೋಚಿಸಬಹುದು.
  4. ದೆಹಲಿ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಕಡು ಪ್ರತಿಸ್ಪರ್ಧಿಗಳಾದ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಗೋವಾದಲ್ಲಿ ಮೈತ್ರಿಗೆ ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಭಾರೀ ಬದಲಾವಣೆಯನ್ನು ಸೂಚಿಸಿದೆ.
  5. “ಬಿಜೆಪಿಯನ್ನು ವಿರೋಧಿಸುವ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿಗೆ ಮುಕ್ತವಾಗಿದ್ದೇವೆ. ತೃಣಮೂಲ ಕಾಂಗ್ರೆಸ್ ಮತ್ತು ಎಎಪಿ ಅಥವಾ ಗೋವಾದಲ್ಲಿ ಬಿಜೆಪಿ ವಿರುದ್ಧ ಇರುವ ಯಾರೊಂದಿಗಾದರೂ ನಾವು ಮೈತ್ರಿಗೆ ಸಿದ್ಧರಾಗಿದ್ದೇವೆ” ಎಂದು ಕಾಂಗ್ರೆಸ್ ನಾಯಕ ಮತ್ತು ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
  6. ಈ ಚುನಾವಣೆಯಲ್ಲಿ ಗೋವಾದಲ್ಲಿ ಪಾದಾರ್ಪಣೆ ಮಾಡಿದ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್‌ಗೆ ಎಕ್ಸಿಟ್ ಪೋಲ್‌ಗಳಲ್ಲಿ ಮೂರು ಸ್ಥಾನಗಳು ಸಿಗಲಿವೆ ಎಂದು ತಿಳಿಸಲಾಗಿದೆ. ಎಂಜಿಪಿ ಜೊತೆ ತೃಣಮೂಲ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.
  7. ಮತದಾನ ಮುಗಿದ ನಂತರ ನಡೆದ ಎಕ್ಸಿಟ್ ಪೋಲ್ ಸಮೀಕ್ಷೆಗಳು ಗೋವಾದಲ್ಲಿ ತೀವ್ರ ಹಣಾಹಣಿ ಎದುರಾಗಲಿದೆ ಎಂದು ಘೋಷಿಸಿದೆ. ಎನ್‌ಡಿಟಿವಿಯ ಎಕ್ಸಿಟ್ ಪೋಲ್‌ಗಳ ಪ್ರಕಾರ, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ರಾಜ್ಯದ 40 ಸ್ಥಾನಗಳಲ್ಲಿ 16 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಬಹುಮತ ಬರಲು 21 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು.
  8. ಗೋವಾದಲ್ಲಿ 2017ರ ಸನ್ನಿವೇಶ ಪುನರಾವರ್ತಿತವಾಗಲಿದೆ. ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಅಧಿಕಾರವನ್ನು ಪಡೆಯಲು ವಿಫಲವಾಗಿತ್ತು. ಬಿಜೆಪಿಯು MGP ಸೇರಿದಂತೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಬೆಂಬಲವನ್ನು ಗಳಿಸಿತ್ತು. ಇದೀಗ ಅದೇ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.
  9. ಈ ಬಾರಿ ಅವಕಾಶವನ್ನು ತೆಗೆದುಕೊಳ್ಳದೆ ಸಂಭಾವ್ಯ “ಕಿಂಗ್‌ಮೇಕರ್‌ಗಳ” ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ನಾಯಕರಾದ ಪಿ ಚಿದಂಬರಂ, ಡಿಕೆ ಶಿವಕುಮಾರ್ ಅವರನ್ನು ಗೋವಾಕ್ಕೆ ಕಳುಹಿಸಲಾಗಿದೆ. ತೀರ್ಪಿನ ನಿರೀಕ್ಷೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೇರೆ ರಾಜ್ಯಗಳಿಗೂ ಕಳುಹಿಸಿದೆ.
  10. ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ಬೀಡುಬಿಟ್ಟಿದ್ದಾರೆ ಮತ್ತು ಪರಸ್ಪರ ಬೆಂಬಲಕ್ಕಾಗಿ ಸಾಧ್ಯವಿರುವ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಕಳೆದ ಚುನಾವಣೆಯಲ್ಲಿ ಬಹುಮತದ ಕೊರತೆಯನ್ನು ಸರಿದೂಗಿಸಲು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲು ತಡವಾಗಿದ್ದರಿಂದ ಅಧಿಕಾರ ಕೈತಪ್ಪಿ ಹೋಗಿತ್ತು. ಹೀಗಾಗಿ, ಈ ಬಾರಿ ಆ ರೀತಿಯಾಗದಂತೆ ಕಾಂಗ್ರೆಸ್ ಎಚ್ಚರ ವಹಿಸಿದೆ.

ಇದನ್ನೂ ಓದಿ: ಗೋವಾನಲ್ಲಿ ಸರ್ಕಾರ ರಚಿಸುವ ಪ್ರಯತ್ನ ನಡೆಸಲು ಕಾಂಗ್ರೆಸ್ ಹೈಕಮಾಂಡ್​ ಕೆಪಿಸಿಸಿ ನಾಯಕರನ್ನು ಕಳಿಸಿದೆ

Exit Polls 2022: ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ದರ್ಬಾರ್, ಪಂಜಾಬ್​ನಲ್ಲಿ ಆಮ್ ಆದ್ಮಿ; ಪಂಚ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹೀಗಿದೆ

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್