Goa assembly Election ದೆಹಲಿಗೆ ತೆರಳಿದ ಗೋವಾ ಸಿಎಂ ಪ್ರಮೋದ್ ಸಾವಂತ್; ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ

| Updated By: ರಶ್ಮಿ ಕಲ್ಲಕಟ್ಟ

Updated on: Jan 16, 2022 | 12:37 PM

ಪ್ರಮೋದ್ ಸಾವಂತ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಭೆ ನಡೆಸಿ ಕರಾವಳಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.

Goa assembly Election ದೆಹಲಿಗೆ ತೆರಳಿದ ಗೋವಾ ಸಿಎಂ ಪ್ರಮೋದ್ ಸಾವಂತ್;  ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ
ದೆಹಲಿಗೆ ತೆರಳಿದ ಗೋವಾ ಸಿಎಂ ಪ್ರಮೋದ್ ಸಾವಂತ್
Follow us on

ಪಣಜಿ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಅವರು ಭಾನುವಾರ ದೆಹಲಿಗೆ ತೆರಳಿದ್ದು, ಅಲ್ಲಿ ಅವರು ಭಾರತೀಯ ಜನತಾ ಪಕ್ಷದ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸಭೆ ನಡೆಸಿ ಕರಾವಳಿ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ (Goa Assembly election)  ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಬಿಜೆಪಿ ಪದಾಧಿಕಾರಿಗಳು ವರಿಷ್ಠರನ್ನು ಭೇಟಿ ಮಾಡಿದ ಒಂದು ದಿನದ ನಂತರ ಜನವರಿ 16 ರಂದು ಪಕ್ಷದ ಸಂಸದೀಯ ಮಂಡಳಿಯು ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಸಿಎಂ ಈ ಹಿಂದೆ ಸುದ್ದಿಗಾರರಿಗೆ ತಿಳಿಸಿದ್ದರು. ಗೋವಾದಲ್ಲಿ ಆಡಳಿತಾರೂಢ ಬಿಜೆಪಿಯು ರಾಜ್ಯದ ಒಟ್ಟು 40 ವಿಧಾನಸಭಾ ಸ್ಥಾನಗಳಲ್ಲಿ 38 ಸ್ಥಾನಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ ಎಂದು ಪಕ್ಷದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ. ಎರಡು ಕ್ರಿಶ್ಚಿಯನ್ ಪ್ರಾಬಲ್ಯವಿರುವ ಕ್ಷೇತ್ರಗಳಾದ ಬೆನೌಲಿಮ್ ಮತ್ತು ನುವೆಮ್ ನಲ್ಲಿ ಪಕ್ಷವು ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪಕ್ಷದ ಸಂಸದೀಯ ಮಂಡಳಿಯು ಪಟ್ಟಿಯನ್ನು ಅನುಮೋದಿಸಿದ ನಂತರ ಜನವರಿ 16 ರ ನಂತರ ಅಭ್ಯರ್ಥಿಗಳ ಬಗ್ಗೆ ಔಪಚಾರಿಕ ಘೋಷಣೆ ಮಾಡಲಾಗುವುದು ಎಂದು ಅವರು ಹೇಳಿದರು. ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ತನ್ನ ಕೋರ್ ಕಮಿಟಿಯ ಸಭೆಗಳನ್ನು ನಡೆಸುತ್ತಿದೆ.

ಗೋವಾ ಚುನಾವಣೆಗೆ ಪಕ್ಷದ ಉಸ್ತುವಾರಿಯಾಗಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸದಾನಂದ್ ಶೇಟ್ ತನವಡೆ ಮತ್ತು ಸಾವಂತ್ ಸೇರಿದಂತೆ ಇತರರ ಸಭೆಗಳ ಅಧ್ಯಕ್ಷತೆ ವಹಿಸಿದ್ದಾರೆ.


ನಾಲ್ವರು ಶಾಸಕರಾದ ಮೈಕೆಲ್ ಲೋಬೋ, ಅಲೀನಾ ಸಲ್ಡಾನ್ಹಾ, ಕಾರ್ಲೋಸ್ ಅಲ್ಮೇಡಾ ಮತ್ತು ಪ್ರವೀಣ್ ಜಾಂತ್ಯೆ ಕಳೆದ ಕೆಲವು ದಿನಗಳಲ್ಲಿ ಪಕ್ಷಕ್ಕೆ ಮತ್ತು ಸದನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಪ್ರಸ್ತುತ ಗೋವಾದಲ್ಲಿ 23 ಶಾಸಕರೊಂದಿಗೆ ಆಡಳಿತ ನಡೆಸುತ್ತಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ, ಟಿಎಂಸಿ ಮತ್ತು ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ (ಎಎಪಿ) ಸೇರಿದಂತೆ ಹಲವಾರು ಪಕ್ಷಗಳು ತಮ್ಮ ನೆಲೆಯನ್ನು ವಿಸ್ತರಿಸುವ ಪ್ರಯತ್ನದಲ್ಲಿ ರಾಜ್ಯದಲ್ಲಿ ಚುನಾವಣಾ ಕಣದಲ್ಲಿ ಸೇರಿಕೊಂಡಿವೆ. ಫೆಬ್ರವರಿ 14 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಇತರ ನಾಲ್ಕು ರಾಜ್ಯಗಳೊಂದಿಗೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಗದಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ 30 ವಿದ್ಯಾರ್ಥಿಗಳಿಗೆ ಕೊರೊನಾ! ಹರಿಯಾಣದಿಂದ ಬಳ್ಳಾರಿಗೆ ಬಂದ ನೂರಾರು ವಿದ್ಯಾರ್ಥಿಗಳು

Published On - 12:36 pm, Sun, 16 January 22