Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ತೊರೆದ ಗೋವಾ ಸಚಿವ ಮೈಕೆಲ್ ಲೋಬೊ, ಕಾಂಗ್ರೆಸ್ ಸೇರುವ ನಿರೀಕ್ಷೆ

Michael Lobo ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ ಒಂದು ತಿಂಗಳ ಮೊದಲು ಲೋಬೊ ಪಕ್ಷ ತೊರೆದಿದ್ದು ಇದು ಬಿಜೆಪಿಯಿಂದ ಪಕ್ಷಾಂತರಗಳ ಸರಣಿಯಲ್ಲಿ ಇತ್ತೀಚಿನದ್ದಾಗಿದೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ತೊರೆದ ಗೋವಾ ಸಚಿವ ಮೈಕೆಲ್ ಲೋಬೊ, ಕಾಂಗ್ರೆಸ್ ಸೇರುವ ನಿರೀಕ್ಷೆ
ಮೈಕಲ್ ಲೋಬೊ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jan 10, 2022 | 3:29 PM

ಪಣಜಿ: ಗೋವಾದ (Goa) ಸಚಿವ ಮೈಕೆಲ್ ಲೋಬೊ (Michael Lobo) ಅವರು ಸೋಮವಾರ ಆಡಳಿತಾರೂಢ ಬಿಜೆಪಿ (BJP) ಪಕ್ಷವನ್ನು ತೊರೆದಿದ್ದಾರೆ. ಬಿಜೆಪಿ ತೊರೆದ ಅವರು ಪಕ್ಷದ ಕಾರ್ಯಚಟುವಟಿಕೆಯಿಂದ ವಿಶೇಷವಾಗಿ ತಳಮಟ್ಟದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿಯಿಂದ ಅಸಮಾಧಾನಗೊಂಡಿದ್ದೇನೆ ಎಂದು ಹೇಳಿದ್ದಾರೆ. ಫೆಬ್ರವರಿ 14 ರಂದು ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಗೆ (Goa assembly elections) ಒಂದು ತಿಂಗಳ ಮೊದಲು ಲೋಬೊ ಪಕ್ಷ ತೊರೆದಿದ್ದು ಇದು ಬಿಜೆಪಿಯಿಂದ ಪಕ್ಷಾಂತರಗಳ ಸರಣಿಯಲ್ಲಿ ಇತ್ತೀಚಿನದ್ದಾಗಿದೆ. ಮುಖ್ಯಮಂತ್ರಿ ಪ್ರಮೋದ್ ಸಾವಂತ್  (Pramod Sawant)ಅವರ ಸಂಪುಟದ ಗೋವಾ ಸದಸ್ಯರಲ್ಲಿ ಒಬ್ಬರಾದ ಲೋಬೊ ಅವರು ಅಲೀನಾ ಸಲ್ಡಾನ್ಹಾ ಮತ್ತು ಕಾರ್ಲೋಸ್ ಅಲ್ಮೇಡಾ ನಂತರ ಬಿಜೆಪಿ ತೊರೆದ ಮೂರನೇ ಕ್ರಿಶ್ಚಿಯನ್ ಶಾಸಕರಾಗಿದ್ದಾರೆ. 2019 ರಲ್ಲಿ ಮಾಜಿ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮರಣದ ನಂತರ ಪಕ್ಷದ ಕಾರ್ಯಚಟುವಟಿಕೆಯಲ್ಲಿನ ಬದಲಾವಣೆಗಳನ್ನು ಮೂವರು ತಮ್ಮ ನಿರ್ಗಮನಕ್ಕಾಗಿ ಉಲ್ಲೇಖಿಸಿದ್ದಾರೆ. ರಾಜ್ಯದ ಜನಸಂಖ್ಯೆಯಲ್ಲಿ ಶೇ 25 ಕ್ಕಿಂತ ಹೆಚ್ಚು ಕ್ರೈಸ್ತರಿದ್ದಾರೆ.

ಬಿಜೆಪಿ ಎಷ್ಟು ದೊಡ್ಡದಾಗಿದೆ ಎಂದರೆ ತಳಮಟ್ಟದ ಕಾರ್ಯಕರ್ತರ ಕೊಡುಗೆಗೆ ಬೆಲೆ ಕೊಡುವುದಿಲ್ಲ ಎಂದು ಲೋಬೊ ಹೇಳಿದ್ದಾರೆ. “ಅನೇಕರು ದೂರು ನೀಡಲು ನನ್ನ ಬಳಿಗೆ ಬಂದರು. ಪಕ್ಷದಲ್ಲಿ ಏರಿಳಿತಗಳಿರುತ್ತವೆ ಆದರೆ ಕಾರ್ಯಕರ್ತರ ಬದಲು ಬೀಗ, ಸ್ಟಾಕ್ ಮತ್ತು ಬ್ಯಾರೆಲ್ ಇರಲು ಸಾಧ್ಯವಿಲ್ಲ ಎಂದು ಲೋಬೊ ಹೇಳಿದರು. “ನಾನು ಇದನ್ನು ಬಹಳ ಸಮಯದಿಂದ ಹೇಳುತ್ತಿದ್ದೇನೆ ಆದರೆ ಯಾರೂ ಕೇಳಲು ಸಿದ್ಧರಿರಲಿಲ್ಲ. ನಮ್ಮನ್ನು ಮೂಲೆಗುಂಪು ಮಾಡಲಾಗಿದೆ ಎಂದು ಅನಿಸುತ್ತಿದೆ ಎಂದಿದ್ದಾರೆ ಲೋಬೊ. ಕೆಲವು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇನೆ ಆದರೆ ಅವರ ಭವಿಷ್ಯದ ಯೋಜನೆಗಳ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಲೋಬೊ ಅವರು ತಮ್ಮ ನಿರೀಕ್ಷಿತ ಪ್ರವೇಶಕ್ಕೆ ಮುಂಚಿತವಾಗಿ ಪಕ್ಷದ ನಾಯಕತ್ವದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಖಚಿತಪಡಿಸಿದ್ದಾರೆ. ಇತ್ತೀಚೆಗೆ  ಸಲ್ಡಾನ್ಹಾ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದರೆ, ಅಲ್ಮೇಡಾ ಮತ್ತು ಸ್ವತಂತ್ರ ಶಾಸಕ ಪ್ರಸಾದ್ ಗಾಂವ್ಕರ್ ಕಾಂಗ್ರೆಸ್ ಸೇರಿದ್ದಾರೆ.

ಲೋಬೊ ಅವರ ನಿರ್ಗಮನದಿಂದ ಪಕ್ಷಕ್ಕೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಹೇಳಿದ್ದಾರೆ. “ಈ ಸಮಯದಲ್ಲಿ ಅವರು ಪಕ್ಷದಲ್ಲಿ ದೈಹಿಕವಾಗಿ ಮಾತ್ರ ಇದ್ದರು. ನಾವು ಅವನನ್ನು ಬಿಟ್ಟುಹೋದನೆಂದು ಪರಿಗಣಿಸಿದ್ದೇವೆ. ಪಕ್ಷಕ್ಕೆ ಅವರು ನೀಡಿದ ಸುದೀರ್ಘ ಕೊಡುಗೆಯನ್ನು ಪರಿಗಣಿಸಿ ನಾವು ಅವರನ್ನು ವಜಾ ಮಾಡಿಲ್ಲ.

ಲೋಬೊ ಅವರ ನಿರ್ಗಮನವು ರಾಜಕೀಯವಾಗಿ ಮಹತ್ವದ ಬಾರ್ಡೆಜ್ ತಾಲೂಕಿನಲ್ಲಿ ಬಿಜೆಪಿಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದರು. ಇದು 40 ಸದಸ್ಯರ ರಾಜ್ಯ ವಿಧಾನಸಭೆಗೆ ಏಳು ಶಾಸಕರನ್ನು ಕಳುಹಿಸುತ್ತದೆ. “ಬಿಜೆಪಿ ಹಿನ್ನಡೆಯಲ್ಲಿದೆ ಮತ್ತು ಈ ಬೆಳವಣಿಗೆಯೊಂದಿಗೆ, ಸ್ವಂತವಾಗಿ ಸರಳ ಬಹುಮತವನ್ನು ಗೆಲ್ಲುವ ಪಕ್ಷದ ಸಾಮರ್ಥ್ಯವು ಗಮನಾರ್ಹವಾಗಿ ಕ್ಷೀಣಿಸಿದೆ ಎಂದು ರಾಜಕೀಯ ವೀಕ್ಷಕರಾದ ಜತಿನ್ ನಾಯಕ್ ಹೇಳಿದ್ದಾರೆ.

40 ಸದಸ್ಯ ಬಲದ ವಿಧಾನಸಭೆಯಲ್ಲಿ 2017ರಲ್ಲಿ 17 ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನಗಳನ್ನು ಗೆದ್ದ ಬಿಜೆಪಿಯು ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ), ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಮತ್ತು ಇಬ್ಬರು ಸ್ವತಂತ್ರರೊಂದಿಗೆ ಮೈತ್ರಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರಿಂದ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. 2019ರಲ್ಲಿ 10 ಕಾಂಗ್ರೆಸ್ ಶಾಸಕರು ಪಕ್ಷಾಂತರ ಮಾಡಿ ಬಿಜೆಪಿಗೆ ವಿಧಾನಸಭೆಯಲ್ಲಿ ಬಹುಮತ ನೀಡಿದ್ದರು. ಎಂಜಿಪಿ ಬಿಜೆಪಿ ನೇತೃತ್ವದ ಮೈತ್ರಿಯನ್ನು ತೊರೆದು ತೃಣಮೂಲ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜಿಎಫ್ ಪಿ ಈಗ ಕಾಂಗ್ರೆಸ್ ಮಿತ್ರ ಪಕ್ಷವಾಗಿದೆ.

ಇದನ್ನೂ ಓದಿ:  Moto G71 5G: ಬಜೆಟ್ ಬೆಲೆಗೆ ಆಕರ್ಷಕ ಫೀಚರ್: ಭಾರತದಲ್ಲಿ ಮೋಟೋ G71 5G ಸ್ಮಾರ್ಟ್‌ಫೋನ್‌ ಬಿಡುಗಡೆ

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು