ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​

ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು. ಆದರೆ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ರಂತೆಯೇ ಇವರಿಗೂ ನಿರಾಸೆಯೇ ಆಗಿದೆ.

ಗೋವಾ ವಿಧಾನಸಭೆ ಚುನಾವಣೆ; ತುಂಬ ಆಸೆಯಿಂದ ಇದ್ದ ಕೇಂದ್ರ ಸಚಿವ ಶ್ರೀಪಾದ್ ನಾಯ್ಕ್​ ಪುತ್ರನಿಗಿಲ್ಲ ಬಿಜೆಪಿ ಟಿಕೆಟ್​
ಸಿದ್ದೇಶ್​ ನಾಯ್ಕ್​
Follow us
TV9 Web
| Updated By: Lakshmi Hegde

Updated on: Jan 26, 2022 | 5:52 PM

ಪಣಜಿ: ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ಹಿನ್ನೆಲೆಯಲ್ಲಿ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೊನೆಯ ಲಿಸ್ಟ್​ನಲ್ಲೂ ಕೂಡ ಕೇಂದ್ರ ಸಚಿವ ಶ್ರೀಪಾದ್​ ನಾಯ್ಕ್​ ಅವರ ಪುತ್ರ ಸಿದ್ದೇಶ್​ ನಾಯ್ಕ್​ ಹೆಸರಿಲ್ಲ. ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರಿಕ್ಕರ್​ ಪುತ್ರ ಉತ್ಪಾಲ್​ ಪರಿಕ್ಕರ್​ಗೆ ಕೂಡ ಬಿಜೆಪಿ ಈ ಚುನಾವಣೆಯಲ್ಲಿ ಟಿಕೆಟ್ ನೀಡಲಿಲ್ಲ. ಪಣಜಿ ಕ್ಷೇತ್ರದಿಂದ, ಬಿಜೆಪಿಯಿಂದಲೇ ಸ್ಪರ್ಧಿಸುವ ಆಸೆ ಹೊತ್ತಿದ್ದ ಅವರು, ಟಿಕೆಟ್ ಸಿಗದ ಕಾರಣಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆದಿದ್ದಾರೆ. ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಅದರ ಬೆನ್ನಲ್ಲೇ ಈಗ ಬಿಜೆಪಿ ಇನ್ನೊಬ್ಬರು ಸಚಿವರ ಪುತ್ರನಿಗೂ ಟಿಕೆಟ್​ ನೀಡಲಿಲ್ಲ. ಅಂದಹಾಗೆ, ಸಿದ್ದೇಶ್​ ನಾಯ್ಕ್​ ಕುಂಭರ್ಜುವಾ ಕ್ಷೇತ್ರದಿಂದ ಟಿಕೆಟ್​ ಸಿಗುವ ಭರವಸೆಯಲ್ಲಿ ಇದ್ದರು.

ಪ್ರಸಕ್ತ ಗೋವಾ ವಿಧಾನಸಭೆ ಸ್ಪೀಕರ್ ಆಗಿರುವ ರಾಜೇಶ್​ ಪಟ್ನೇಕರ್​ ವಿಧಾನಸಭೆ ಚುನಾವಣೆಯಲ್ಲಿ ಅವರ ಸ್ವಕ್ಷೇತ್ರವಾದ ಬಿಚೋಲಿಮ್​ನಿಂದ ಸ್ಪರ್ಧಿಸಲಿದ್ದಾರೆ. ಹಾಗೇ, ಬಿಜೆಪಿ ಶಾಸಕ, ಮಾಜಿ ಸಚಿವ ಪಾಂಡುರಂಗ ಮಡ್ಕೈಕರ್ ಅವರ ಪತ್ನಿ ಜೈನಿತಾ ಅವರಿಗೂ ಸಹ ಬಿಜೆಪಿ ಟಿಕೆಟ್​ ನೀಡಿದೆ.

ತಮಗೆ ಟಿಕೆಟ್ ನೀಡದೆ ಇರುವುದಕ್ಕೆ ಉತ್ಪಾಲ್​ ಪರಿಕ್ಕರ್​ ತುಂಬ ಬೇಸರ ವ್ಯಕ್ತಪಡಿಸಿದ್ದರು. ನೋವಿನಿಂದ ಮಾತನಾಡಿದ್ದ ಅವರು,  2019ರಲ್ಲಿ ನಡೆದ ಗೋವಾ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ (ಮನೋಹರ್ ಪರಿಕ್ಕರ್​ ನಿಧನದ ನಂತರ ನಡೆದ ಚುನಾವಣೆ)ನಾನು ಕೆಲಸ ಮಾಡಿದ್ದೇನೆ. ಈ ಪಕ್ಷದಲ್ಲಿ ಕಳೆದ 30ವರ್ಷಗಳಿಂದಲೂ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಬೆಂಬಲ ನನಗೆ ಇದೆ ಎಂಬುದನ್ನು ಬಿಜೆಪಿ ವರಿಷ್ಠರಿಗೆ ಮನವರಿಕೆ ಮಾಡಲು ಕೈಲಾದಷ್ಟರ ಮಟ್ಟಿಗೆ ಪ್ರಯತ್ನ ಪಟ್ಟಿದ್ದೇನೆ. ಇಲ್ಲಿನ ಕಾರ್ಯಕರ್ತರು ಅಂದು ಪಕ್ಷ ಕಟ್ಟಲು ನನ್ನ ತಂದೆಯವರೊಂದಿಗೆ ಶ್ರಮಿಸಿದ್ದರು. ಅವರೆಲ್ಲರೂ ಈಗ ನನ್ನ ಜೊತೆ ಇದ್ದು, ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಪಣಜಿಯ ಜನರ ಬೆಂಬಲವೂ ನನಗಿತ್ತು. ಹಾಗಿದ್ದಾಗ್ಯೂ ಪಣಜಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ನನಗೆ ಟಿಕೆಟ್​ ಸಿಗಲಿಲ್ಲ ಎಂದು  ಹೇಳಿದ್ದರು.

ಇದನ್ನೂ ಓದಿ: ಮಿನ್ನಲ್​ ಮುರಳಿ ಚಿತ್ರದ ಹೀರೋನಂತೆ ರೆಡಿಯಾಗಿ ಪೋಸ್ಟ್​ ವೆಡ್ಡಿಂಗ್​ ಫೋಟೋಶೂಟ್​ ಮಾಡಿಸಿದ ವರ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್