Gujarat, HP Assembly Election 2022: ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ಇಂದು ದಿನಾಂಕ ನಿಗದಿ
ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.
ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ತವರು ರಾಜ್ಯ ಗುಜರಾತ್ (Gujarat) ಮತ್ತು ಚುನಾವಣಾ ಕಾರ್ಯತಂತ್ರದ ದೃಷ್ಟಿಯಿಂದ ಮಹತ್ವ ಪಡೆದಿರುವ ಹಿಮಾಚಲ ಪ್ರದೇಶ (Himachal Pradesh) ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು (Election Commission of India – EC) ಇಂದು (ಅ 14) ಮಧ್ಯಾಹ್ನ ದಿನಾಂಕ ಘೋಷಿಸಲಿದೆ. ಗುಜರಾತ್ನಲ್ಲಿ ಆಮ್ ಆದ್ಮಿ ಪಕ್ಷವು (ಆಪ್) ಚಟುವಟಿಕೆ ಚುರುಕುಗೊಳಿಸಿದ್ದು, ಪಂಜಾಬ್ ಮಾದರಿಯ ಫಲಿತಾಂಶ ಮರುಕಳಿಸುವ ವಿಶ್ವಾಸದಲ್ಲಿದೆ. ಲೋಕಸಭೆ ಚುನಾವಣೆ ಮತ್ತು ದೇಶದ ವಿವಿಧ ರಾಜ್ಯಗಳಲ್ಲಿ ಶೀಘ್ರದಲ್ಲಿಯೇ ನಡೆಯುವ ಚುನಾವಣೆಗಳ ಮೇಲೆ ಈ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪರಿಣಾಮ ಬೀರುವ ನಿರೀಕ್ಷೆಯಿರುವುದರಿಂದ ಎಲ್ಲ ರಾಜಕೀಯ ಪಕ್ಷಗಳೂ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿವೆ.
Election Commission of India to hold a press conference later today, in Delhi. The election schedule of Assembly elections to Gujarat and Himachal Pradesh to be announced. pic.twitter.com/Xd2NGdfnmQ
— ANI (@ANI) October 14, 2022
ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಬಿಜೆಪಿ ಹಲವು ಸಮಾವೇಶ ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ನಡೆಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಬಹಿರಂಗ ಸಭೆಗಳಲ್ಲಿ ಮಾತನಾಡಿದ್ದರು. ರಾಹುಲ್ ಗಾಂಧಿ ಪಾದಯಾತ್ರೆಯ ನಂತರ ಹೊಸ ಚೈತನ್ಯ ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಸದ್ಯದ ಮಟ್ಟಿಗೆ ಎರಡೂ ರಾಜ್ಯಗಳಲ್ಲಿ ಪ್ರಬಲವಾಗಿಲ್ಲ. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆಯ ಬಗ್ಗೆ ವರಿಷ್ಠರು ಗಮನ ಹರಿಸಿದ್ದಾರೆ. ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಹಲವು ಬಾರಿ ಗುಜರಾತ್ಗೆ ಭೇಟಿ ನೀಡಿದ್ದು ಸಂಘಟನೆ ಚುರುಕುಗೊಳಿಸಲು ಯತ್ನಿಸಿದ್ದಾರೆ. ಗುಜರಾತ್ನಲ್ಲಿ ಆಪ್ ಮತ್ತು ಬಿಜೆಪಿ ನಡುವೆ ಹಣಾಹಣಿ ನಡೆಯುವ ನಿರೀಕ್ಷೆಯಿದೆ.
ಕಳೆದ ಬಾರಿ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಯಾಸದ ಗೆಲುವು ಸಾಧಿಸಿತ್ತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮೇಲೆ ಗುಜರಾತ್ ಫಲಿತಾಂಶವು ಪರಿಣಾಮ ಬೀರಬಹುದು ಎಂಬ ವಿಶ್ಲೇಷಣೆಗಳ ಹಿನ್ನೆಲೆಯಲ್ಲಿ ಬಿಜೆಪಿ ಅದನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.
Published On - 10:48 am, Fri, 14 October 22