Gujarat Assembly Election 2022: 6 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ ಬಿಜೆಪಿ
ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಬಿಡುಗಡೆ ಮಾಡಿದೆ.ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ.
ಅಹಮದಾಬಾದ್: ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಬಿಡುಗಡೆ ಮಾಡಿದೆ. ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ. ಧೋರಾಜಿಯಿಂದ ಮಹೇಂದ್ರಭಾಯಿ ಪಡಲಿಯಾ, ಖಂಭಾಲಿಯಾದಿಂದ ಮುಲುಭಾಯಿ ಬೇರಾ, ಕುಟಿಯಾನದಿಂದ ಧೆಲಿಬೆನ್ ಮಾಲ್ದೇಭಾಯ್ ಒಡೆದಾರ, ಭಾವನಗರ ಪೂರ್ವದಿಂದ ಸೇಜಲ್ ರಾಜೀವ್ ಕುಮಾರ್ ಪಾಂಡ್ಯ, ದೇಡಿಯಾಪಾದದಿಂದ (ಎಸ್‌ಟಿ) ಹಿತೇಶ್ ದೇವ್‌ಜಿ ವಾಸವಾ ಮತ್ತು ಚೋರಿಯಾಸಿಯಿಂದ ಸಂದೀಪ್ ದೇಸಾಯಿ ಅವರನ್ನು ಕಣಕ್ಕಿಳಿಸಿದೆ.
ಈ ಹಿಂದೆ ಬಿಜೆಪಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ 182 ಕ್ಷೇತ್ರಗಳ ಪೈಕಿ 160 ಅಭ್ಯರ್ಥಿಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. 160 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 14 ಮಹಿಳೆಯರು, 13 ಪರಿಶಿಷ್ಟ ಜಾತಿ, 24 ಪರಿಶಿಷ್ಟ ಪಂಗಡ ಮತ್ತು 69 ಅಭ್ಯರ್ಥಿಗಳು ಪುನರಾವರ್ತಿತರಾಗಿದ್ದಾರೆ.
ರಾಜ್ಯದಲ್ಲಿ ಡಿಸೆಂಬರ್ 1 ಮತ್ತು 5ರಂದು ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಮೊದಲ ಸುತ್ತಿನಲ್ಲಿ ಒಟ್ಟು 182 ವಿಧಾನಸಭಾ ಸ್ಥಾನಗಳ ಪೈಕಿ 89 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಎಲ್ಲ ಕ್ಷೇತ್ರಗಳಿಗೆ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಮುಂಬರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸಿದ್ಧಪಡಿಸಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸ್ಥಾನದಲ್ಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಕೇಂದ್ರ ಸಂಪುಟದ ಸಹೋದ್ಯೋಗಿಗಳಾದ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವಿಯಾ ಮತ್ತು ಪುರುಷೋತ್ತಮ್ ರೂಪಾಲಾ ಅವರು ಪಟ್ಟಿಯಲ್ಲಿರುವ ಇತರ ಪ್ರಮುಖ ಹೆಸರುಗಳು.
ಇದನ್ನು ಓದಿ: ನದಿಗೆ ಹಾರಿ ಜನರ ಜೀವ ಉಳಿಸಿದ ಮಾಜಿ ಶಾಸಕನಿಗೆ ಟಿಕೆಟ್ ನೀಡಿದ ಬಿಜೆಪಿ
ಘಟ್ಲೋಡಿಯಾ ವಿಧಾನಸಭಾ ಕ್ಷೇತ್ರದಿಂದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಬಿಜೆಪಿ ರಾಜ್ಯಾಧ್ಯಕ್ಷ ಸಿಆರ್ ಪಾಟೀಲ್ ಮತ್ತು ರಾಜ್ಯ ಗೃಹ ಸಚಿವ ಹರ್ಷ ಸಾಂಘ್ವಿ ಅವರೊಂದಿಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 6 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆರು ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬಿಜೆಪಿ ಇಬ್ಬರು ಮಹಿಳೆಯರಿಗೆ ಟಿಕೆಟ್ ನೀಡಿದೆ. ಬಿಜೆಪಿಯ ಪ್ರಚಾರಕರ ಪಟ್ಟಿಯಲ್ಲಿ ಕರ್ನಾಟಕದ ಮಾಜಿ ರಾಜ್ಯಪಾಲ ವಜುಭಾಯಿ ವಾಲಾ ಕೂಡ ಕಾಣಿಸಿಕೊಂಡಿದ್ದಾರೆ.
BJP releases a list of 6 candidates to contest the upcoming Gujarat #AssemblyPolls2022 pic.twitter.com/ELQyIGkYSL
— ANI (@ANI) November 12, 2022
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದೊಂದಿಗೆ ಬಾರಿ ಪೈಪೋಟಿ ನೀಡಲು ಮತ್ತು ಬಾರಿ ಸವಾಲನ್ನು ಎದುರಿಸುತ್ತಿದೆ, ಆಮ್ ಆದ್ಮಿ ಪಕ್ಷ ಇಸುದನ್ ಗಧ್ವಿಯನ್ನು ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೆಸರಿಸಿದೆ. ಬಿಜೆಪಿ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಗುಜರಾತ್ ರಾಜ್ಯದಲ್ಲಿ ಕಳೆದ 27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಹಿಮಾಚಲ ಪ್ರದೇಶದ ಫಲಿತಾಂಶದ ದಿನಾಂಕದೊಂದಿಗೆ ಮತ ಎಣಿಕೆ ನಡೆಯಲಿದೆ.
Published On - 1:57 pm, Sat, 12 November 22