ಮೂರನೇ ಎರಡರಷ್ಟು ಬಹುಮತದತ್ತ ಸಾಗುತ್ತಿರುವ ಬಿಜೆಪಿ ಗುರುವಾರ ಗುಜರಾತ್‌ನಲ್ಲಿ(Gujarat Assembly Election) ದಾಖಲೆಯ ಏಳನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ. ಆದರೆ ಹೊಸದಾಗಿ ಪ್ರವೇಶಿಸಿದ ಆಮ್ ಆದ್ಮಿ ಪಾರ್ಟಿ (AAP) ನಾಲ್ಕು ಸ್ಥಾನಗಳಲ್ಲಿ ಗೆಲುವು ಮತ್ತು ಒಂದರಲ್ಲಿ ಮುನ್ನಡೆ ಸಾಧಿಸಿದೆ. ಮತ-ಪಾಲು ಶೇಕಡಾ 13 ಕ್ಕೆ ಹತ್ತಿರದಲ್ಲಿದೆ, ಅಂದರೆ ಎಎಪಿ ಭಾರತೀಯ ಚುನಾವಣಾ ಆಯೋಗದಿಂದ (ECI) ರಾಷ್ಟ್ರೀಯ ಪಕ್ಷವಾಗಿ ಗುರುತಿಸುವ ಹಾದಿಯಲ್ಲಿದೆ. ರಾಷ್ಟ್ರೀಯ ಪಕ್ಷವಾಗಿದ್ದಕ್ಕೆ ಆಮ್ ಆದ್ಮಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಮತ್ತು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.2017 ರಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತಮ್ಮ ಸಾಧನೆಯನ್ನು ಪುನರಾವರ್ತಿಸುವ ನಿರೀಕ್ಷೆಯಿಲ್ಲದಿದ್ದರೂ, ಎಎಪಿಯ ಉತ್ತಮ ಪ್ರದರ್ಶನವು ಕೇಜ್ರಿವಾಲ್ ಅವರಿಗೆ ಸಹಾಯವಾಗಲಿದೆ. ಅಂದರೆ ಕೇಜ್ರಿವಾಲ್ 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಗೆ ಪ್ರಮುಖ ಸವಾಲಾಗಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಬಹುದು. ಪಂಜಾಬ್‌ನಲ್ಲೂ ಎಎಪಿ ಅಧಿಕಾರದಲ್ಲಿದೆ.
राष्ट्रीय पार्टी बनने पर आम आदमी पार्टी के सभी कार्यकर्ताओं और सभी देशवासियों को बधाई। pic.twitter.com/sba9Q1sz1f
ಇದನ್ನೂ ಓದಿ— Arvind Kejriwal (@ArvindKejriwal) December 8, 2022
ಬಿಜೆಪಿಯ ಗುಜರಾತ್ ಕೋಟೆಯನ್ನು ಭೇದಿಸಲು ತಮ್ಮ ಪಕ್ಷಕ್ಕೆ ಸಹಾಯ ಮಾಡಿದ್ದಕ್ಕಾಗಿ ಗುಜರಾತ್ ಜನತೆಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಭರವಸೆ ಹೊಂದಿದ್ದಾರೆ. ಗುಜರಾತ್‌ನಲ್ಲಿ ಎಎಪಿ ಹೆಚ್ಚು ಸ್ಥಾನಗಳನ್ನು ಗೆಲ್ಲದಿದ್ದರೂ ಅದು ಪಡೆದ ಮತಗಳು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಹಾಯ ಮಾಡಿದೆ. ನಾವು ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ಪಡೆಯಲು ಸಹಾಯ ಮಾಡಿದ್ದಕ್ಕಾಗಿ ಗುಜರಾತ್ ಜನತೆಗೆ ನಾನು ಕೃತಜ್ಞನಾಗಿದ್ದೇನೆ. ಕೆಲವೇ ಪಕ್ಷಗಳು ಈ ಸ್ಥಾನಮಾನವನ್ನು ಅನುಭವಿಸುತ್ತಿವೆ. ಈಗ ನಾವು ಅವುಗಳಲ್ಲಿ ಒಂದಾಗಿದ್ದೇವೆ. ನಮ್ಮದು ಕೇವಲ 10 ವರ್ಷದ ಪಕ್ಷ ಎಂದಿದ್ದಾರೆ ಕೇಜ್ರಿವಾಲ್.
ಗುಜರಾತ್ ಅನ್ನು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ. ರಾಜ್ಯದ ಜನರು ಎಎಪಿಗೆ ಅದನ್ನು ಬೇಧಿಸಲು ಸಹಾಯ ಮಾಡಿದ್ದಾರೆ. ಮುಂದಿನ ಬಾರಿ ನಾವು ಅಲ್ಲಿ ಗೆಲ್ಲಲು ಸಾಧ್ಯವಾಗಬಹುದು. ನಾವು ಪ್ರಚಾರದ ಸಮಯದಲ್ಲಿ, ತಮ್ಮ ಪಕ್ಷ ಮತ್ತು ನಾಯಕರು ಎಂದಿಗೂ ಕೆಸರೆರಚಾಟ ಅಥವಾ ನಿಂದನೀಯ ರಾಜಕೀಯದಲ್ಲಿ ತೊಡಗಿಲ್ಲ. ನಾವು ಸಕಾರಾತ್ಮಕ ವಿಷಯಗಳ ಬಗ್ಗೆ ಮತ್ತು ಎಎಪಿ ಅಧಿಕಾರದಲ್ಲಿರುವ ದೆಹಲಿ ಮತ್ತು ಪಂಜಾಬ್‌ನಲ್ಲಿ ಪಕ್ಷ ಮಾಡಿದ ಕೆಲಸದ ಬಗ್ಗೆ ಮಾತ್ರ ಮಾತನಾಡಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ
ಕಾಂಗ್ರೆಸ್ ಮತ್ತು ಬಿಜೆಪಿ ಸಾಂಪ್ರದಾಯಿಕ ಪ್ರತಿಸ್ಪರ್ಧಿಗಳಾಗಿರುವ ಗುಜರಾತ್‌ನಲ್ಲಿ ಮೊದಲ ಬಾರಿಗೆ ತ್ರಿಕೋನ ಹೋರಾಟವನ್ನು ಮಾಡಲು ಎಎಪಿ ಅಬ್ಬರದ ಪ್ರಚಾರವನ್ನು ನಡೆಸಿತ್ತು. ದೆಹಲಿ ಮುನ್ಸಿಪಲ್ ಚುನಾವಣೆಯ ಗೆಲುವಿನಿಂದ ಉತ್ತೇಜಿತವಾಗಿರುವ ಎಎಪಿ ತನ್ನ ಕಲ್ಯಾಣ ನೀತಿಯನ್ನು ಗುಜರಾತ್‌ನಲ್ಲಿ ಜನರು ಒಪ್ಪಿಕೊಳ್ಳುತ್ತಾರೆ ಎಂದು ಭಾವಿಸಿತ್ತು.
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:47 pm, Thu, 8 December 22