Isudan Gadhvi: ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಆಮ್ ಆದ್ಮಿ ಪಕ್ಷ
ಇಸುದಾನ್ ಗಢ್ವಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಎಪಿ ಘೋಷಿಸಿದೆ.
ಗುಜರಾತ್: ಇಸುದಾನ್ ಗಢ್ವಿ ಅವರನ್ನು ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಎಎಪಿ ಘೋಷಿಸಿದೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದರು.
ಇಸುದಾನ್ ಗಢ್ವಿ ಎಎಪಿಯ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಇವರು ಮಾಜಿ ಟಿವಿ ಪತ್ರಕರ್ತರಾಗಿದ್ದು 2021 ರಲ್ಲಿ ಎಎಪಿಗೆ ಸೇರಿದ್ದರು. ಗಾಢ್ವಿ ಅವರು ಆರಂಭದಲ್ಲಿ ದೂರದರ್ಶನದಲ್ಲಿ ಕೆಲಸ ಮಾಡಿದ್ದರು. ನಂತರ ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಅವರು ಗುಜರಾತ್‌ನ ಡ್ಯಾಂಗ್ ಜಿಲ್ಲೆಯಲ್ಲಿ ಅರಣ್ಯನಾಶದ 150 ಕೋಟಿ ಹಗರಣದ ಬಗ್ಗೆ ಬಹಿರಂಗಪಡಿಸಿದರು, ಈ ಪ್ರಕರಣ ಕೆಲವೊಂದು ತಪ್ಪಿತಸ್ಥರು ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರವನ್ನು ಪ್ರೇರೇಪಿಸಿತು.
ಗುಜರಾತ್ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಗುರುವಾರ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಡಿಸೆಂಬರ್ 1 ರಂದು ಚುನಾವಣೆ ನಡೆಯಲಿದೆ. ಗುಜರಾತ್‌ನಲ್ಲಿ ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇದನ್ನು ಓದಿ: ಗುಜರಾತ್ ಚುನಾವಣೆ: ಡಿಸೆಂಬರ್ 1ರಂದು ಪ್ರಥಮ, 5ರಂದು 2ನೇ ಹಂತದ ಮತದಾನ; ಡಿಸೆಂಬರ್ 8ರಂದು ಫಲಿತಾಂಶ ಪ್ರಕಟ
ಗುಜರಾತಿನಲ್ಲಿ ಡಿಸೆಂಬರ್ 1ರಂದು ಪ್ರಥಮ, 5ರಂದು 2ನೇ ಹಂತದ ಮತದಾನ ನಡೆಯಲಿದ್ದು ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನಲ್ಲಿ ಮಹಿಳೆಯರು, ವೃದ್ಧರು, ಅಂಗವಿಕಲರಿಗೆ ಪ್ರವೇಶ ಮತ್ತು ಸೇರ್ಪಡೆಗಾಗಿ ವಿಶೇಷ ವೀಕ್ಷಕರನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ. ಚುನಾವಣಾ ದಿನಾಂಕ ಪ್ರಕಟಿಸುವ ಮೊದಲು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮೊರ್ಬಿ ಸೇತುವೆ ಕುಸಿತದ ಸಂತ್ರಸ್ತರಿಗೆ ಸಂತಾಪ ಸೂಚಿಸಿದ್ದಾರೆ. ಗುಜರಾತ್ ಚುನಾವಣೆಯಲ್ಲಿ 4.9 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾರರಿಗಾಗಿ ಗ್ರಾಮೀಣ ಪ್ರದೇಶಗಳಲ್ಲಿ 34,000 ಕ್ಕಿಂತ ಹೆಚ್ಚು ಸೇರಿದಂತೆ 51,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ಅವರು ಹೇಳಿದರು.ಗುಜರಾತ್ ನಲ್ಲಿ 2.53ಕೋಟಿ ಪುರುಷ ಮತದಾರರು ಇದ್ದಾರೆ.2.37 ಕೋಟಿ ಮಹಿಳಾ ಮತದಾರರು ಇದ್ದು 4.61ಲಕ್ಷ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ.
Published On - 2:38 pm, Fri, 4 November 22