ಗುಜರಾತ್ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಿ: ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಎಎಪಿ

ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳನ್ನು ತೆಗೆದುಹಾಕಲು ಚುನಾವಣಾ ಆಯೋಗಕ್ಕೆ ಎಎಪಿ ಮನವಿ ಮಾಡಿದೆ.

ಗುಜರಾತ್ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ಮೋದಿ ಫೋಟೋ ತೆಗೆದುಹಾಕಿ: ಚುನಾವಣಾ ಆಯೋಗಕ್ಕೆ ಮನವಿ ಮಾಡಿದ ಎಎಪಿ
ಅರವಿಂದ್ ಕೇಜ್ರಿವಾಲ್, ನರೇಂದ್ರ ಮೋದಿ
Follow us
TV9 Web
| Updated By: ಆಯೇಷಾ ಬಾನು

Updated on:Nov 15, 2022 | 10:26 AM

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆ(Gujarat Assembly Elections 2022) ಪ್ರಚಾರ ಜೋರಾಗಿ ಸಾಗುತ್ತಿದೆ. ಇದರ ನಡುವೆ ಗುಜರಾತ್‌ನ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಭಾವಚಿತ್ರಗಳನ್ನು ಹಾಕಲಾಗಿದ್ದು ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಭಾಗವಾಗಿದೆ. ಹೀಗಾಗಿ ಮೋದಿ ಭಾವಚಿತ್ರಗಳನ್ನು ತೆಗೆದುಹಾಕಲು, ಅಥವಾ ಅದು ಕಾಣದಂತೆ ಮುಚ್ಚಲು ಆಮ್ ಆದ್ಮಿ ಪಕ್ಷ ಸೋಮವಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಒಟ್ಟು 182 ಸ್ಥಾನಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಹೀಗಾಗಿ ಚುನಾವಣೆಯ ಪ್ರಚಾರ ಅಬ್ಬರದಿಂದ ಸಾಗಿದೆ. ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರಗಳು ಸರ್ಕಾರಿ ಕಚೇರಿಗಳಲ್ಲಿ ಹಾಕಲಾಗಿದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾದಂತೆ ಎಂದು ಎಎಪಿಯ ಕಾನೂನು ಘಟಕದ ಗುಜರಾತ್ ಕಾರ್ಯದರ್ಶಿ ಪುನೀತ್ ಜುನೇಜಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಉಚಿತ​ ವಿದ್ಯುತ್, ಸಾಲಮನ್ನಾ ಭರವಸೆ

ಇನ್ನು ಚುನಾವಣಾ ಆಯೋಗಕ್ಕೆ ನೀಡಿದ ತನ್ನ ಪ್ರಾತಿನಿಧ್ಯದಲ್ಲಿ, ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷದ ಸ್ಟಾರ್ ಪ್ರಚಾರಕರ ಫೋಟೋಗಳನ್ನು ಹಾಕಲಾಗಿದ್ದು ಇದು ಚುನಾವಣೆಗಳ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಹಿತದೃಷ್ಟಿಯಿಂದ, ರಾಜ್ಯದಾದ್ಯಂತ ಎಲ್ಲಾ ಕಚೇರಿಗಳಲ್ಲಿ ಪ್ರಧಾನಿ ಮೋದಿಯವರ ಭಾವಚಿತ್ರಗಳನ್ನು ತೆಗೆದುಹಾಕಲು ಅಥವಾ ಕಾಣದಂತೆ ಮುಚ್ಚಲು ನಿರ್ದೇಶನವನ್ನು ನೀಡಬೇಕು ಎಂದು ಚುನಾವಣಾ ಆಯೋಗಕ್ಕೆ ಎಎಪಿ ಮನವಿ ಮಾಡಿದೆ.

ಸತತ ಏಳನೇ ಅವಧಿಗೆ ಅಧಿಕಾರ ನಡೆಸಲು ಬಯಸುತ್ತಿರುವ ಆಡಳಿತಾರೂಢ ಬಿಜೆಪಿಗೆ ಎಎಪಿ ಪಕ್ಷ ಗುಜರಾತ್​ನಲ್ಲೇ ಪ್ರಮುಖ ಎದುರಾಳಿ ಪಕ್ಷವಾಗಿದೆ. ಎಎಪಿ ಈಗಾಗಲೇ 178 ಸ್ಥಾನಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

Published On - 9:55 am, Tue, 15 November 22

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ