AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhupat Bhayani ನಾನು ಎಎಪಿಯಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ: ಗುಜರಾತ್ ಶಾಸಕ ಭೂಪತ್ ಭಯಾನಿ

ಜುನಾಗಡ್ ಜಿಲ್ಲೆಯ ವಿಸಾವಧರ್ ವಿಧಾನಸಭಾ ಕ್ಷೇತ್ರದ ಆಪ್ ಶಾಸಕ ಭೂಪತ್  ಭಯಾನಿ ಬಿಜೆಪಿ ಸೇರಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ , ನಾನು ಎಎಪಿ ಪಕ್ಷದಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ ಎಂದು ಭಯಾನಿ ಹೇಳಿದ್ದಾರೆ.

Bhupat Bhayani ನಾನು ಎಎಪಿಯಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ: ಗುಜರಾತ್ ಶಾಸಕ ಭೂಪತ್ ಭಯಾನಿ
ಭೂಪತ್  ಭಯಾನಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Dec 11, 2022 | 3:19 PM

Share

ಗುಜರಾತಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ (BJP) ಐತಿಹಾಸಿಕ ಗೆಲುವು ಸಾಧಿಸಿ ಅಧಿಕಾರ ಮುಂದುವರಿಸಿದೆ. ಅದೇ ವೇಳೆ ಆಮ್ ಆದ್ಮಿ ಪಕ್ಷ 5 ಸೀಟು ಗೆದ್ದುಕೊಂಡಿತ್ತು. ಇದರಲ್ಲಿ ಶಾಸಕರೊಬ್ಬರು ಬಿಜೆಪಿ ಸೇರಲಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಜುನಾಗಡ್ ಜಿಲ್ಲೆಯ ವಿಸಾವಧರ್ ವಿಧಾನಸಭಾ ಕ್ಷೇತ್ರದ ಆಪ್ ಶಾಸಕ ಭೂಪತ್  ಭಯಾನಿ (Bhupat Bhayani) ಬಿಜೆಪಿ ಸೇರಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ , ನಾನು ಎಎಪಿ ಪಕ್ಷದಲ್ಲೇ ಇದ್ದೇನೆ, ಬಿಜೆಪಿ ಸೇರುವುದಿಲ್ಲ ಎಂದು ಭಯಾನಿ ಹೇಳಿರುವುದಾಗಿ ಇಂಡಿಯಾ ಟಿವಿ ವರದಿ ಮಾಡಿದೆ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷದ (AAP) ಶಾಸಕ ಭೂಪತ್ ಭಯಾನಿ ಬಿಜೆಪಿ ಸೇರಲಿದ್ದಾರೆ ಎಂಬುದು ಚರ್ಚೆಯಾಗುತ್ತಿದ್ದಂತ ಶಾಸಕ ಭೂಪತ್ ಇದು ವದಂತಿ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಭೂಪತ್, ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದು ಹೇಳಿರುವುದಾಗಿ ದೈನಿಕ್ ಭಾಸ್ಕರ್ ವರದಿ ಮಾಡಿದೆ.

ಇತ್ತೀಚೆಗೆ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಜುನಾಗಢ ಜಿಲ್ಲೆಯ ವಿಶ್ವದರ್ ಕ್ಷೇತ್ರದಲ್ಲಿ ಭೂಪತ್ ಭಯಾನಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿದ್ದರು. 2022 ರ ಗುಜರಾತ್ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಎಎಪಿ ಶಾಸಕರಾದ, ಚೈತರ್ ವಾಸವ ದೇಡಿಯಾಪಾದ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.ಜುನಾಗಢ ಜಿಲ್ಲೆಯ ವಿಸಾವದರ್ ಪಟ್ಟಣದಲ್ಲಿ ಎಎಪಿಯ ಭೂಪತ್ ಭಯಾನಿ ಹರ್ಷದ್ ರಿಬಾಡಿಯಾ ಅವರನ್ನು ಪರಾಭವಗೊಳಿಸಿದ್ದಾರೆ. ಎಎಪಿ ನಾಯಕ ಹೇಮಂತ್ ಖಾವಾ ಜಮ್ಜೋಧ್‌ಪುರ ವಿಧಾನಸಭಾ ಕ್ಷೇತ್ರದಿಂದ, ಉಮೇಶ್ ಮಕವಾನಾ ಬೊಟಾಡ್ ಜಿಲ್ಲೆಯ ಬೊಟಾಡ್ ವಿಧಾನಸಭಾ ಕ್ಷೇತ್ರದಿಂದ ಗೆದ್ದರೆ, ಸುಧೀರ್ ವಘಾನಿ ಗರಿಯಾಧರ್ ಕ್ಷೇತ್ರದಿಂದ ಬಿಜೆಪಿಯ ಕೇಶುಭಾಯ್ ನಕ್ರಾನಿ ಅವರನ್ನು ಸೋಲಿಸಿ ಗೆದ್ದಿದ್ದಾರೆ.  ಗುಜರಾತ್ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ, ಕೇಜ್ರಿವಾಲ್ ಅವರು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 13 ಪ್ರತಿಶತದಷ್ಟು ಮತ ಹಂಚಿಕೆ ಮತ್ತು ಐದು ಅಸೆಂಬ್ಲಿ ಸ್ಥಾನಗಳನ್ನು ಗಳಿಸಿದ ನಂತರ ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷ ಸ್ಥಾನಮಾನವನ್ನು ಪಡೆದುಕೊಂಡಿದೆ ಎಂದು ಘೋಷಿಸಿದರು.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿಯು ಒಟ್ಟು 182 ಸ್ಥಾನಗಳಲ್ಲಿ 156 ಸ್ಥಾನಗಳನ್ನು ಗೆದ್ದುಕೊಂಡಿತು, ಇದು ಗುಜರಾತ್‌ನ ಚುನಾವಣಾ ಇತಿಹಾಸದಲ್ಲಿ ರಾಜಕೀಯ ಪಕ್ಷವೊಂದು ಅತೀ ಹೆಚ್ಚು ಸೀಟುಗಳನ್ನು ಗೆದ್ದಿದ್ದು ಇದೇ ಮೊದಲು.1985 ರ ಚುನಾವಣೆಯಲ್ಲಿ ಕಾಂಗ್ರೆಸ್‌ನ 37 ವರ್ಷಗಳ ಹಳೆಯ ದಾಖಲೆಯಾದ 149 ಸ್ಥಾನಗಳನ್ನು ಗೆದ್ದ ದಾಖಲೆಯನ್ನು ಬಿಜೆಪಿ ಮುರಿದಿದೆ. ಇಲ್ಲಿಯವರೆಗೆ, ಬಿಜೆಪಿಯ ಅತ್ಯುತ್ತಮ ಸ್ಥಾನಗಳ ಸಂಖ್ಯೆ 2002 ರ ಚುನಾವಣೆಯಲ್ಲಿ 127 ಆಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Sun, 11 December 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ